ಕೊರೋನಾದಿಂದ ಕಾಂಗ್ರೆಸ್ ನಾಯಕ ನಿಧನ, ಡಿಕೆಶಿ ಸಂತಾಪ..!

ಮಹಾಮಾರಿ ಕೊರೋನಾ ವೈರಸ್ ಮತ್ತೋರ್ವ ಕಾಂಗ್ರೆಸ್ ಮುಖಂಡರೊಬ್ಬರನ್ನು ಬಲಿ ಪಡೆದುಕೊಂಡಿದೆ. ಇನ್ನು ಸಾವಿಗೆ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Chikmagalur Congess Leader Srinivas hebbar Dies From Covid19 rbj

ಚಿಕ್ಕಮಗಳೂರು, (ನ.06): ಕೊರೋನಾ ಸೋಂಕಿನಿಂದ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಹೆಬ್ಬಾರ್ ಮೃತಪಟ್ಟಿದ್ದಾರೆ. ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶ್ರೀನಿವಾಸ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ  ಇಂದು (ಶುಕ್ರವಾರ) ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ವಯೋ ಸಹಜ ಕಾಯಿಲೆಯಿಂದ ಇವರ ತಂದೆ ಮೃತಪಟ್ಟಿದ್ದರು. 

ಕೊರೋನಾ ವಿರುದ್ಧ ಹೋರಾಟ: ಅಜೀಂ ಪ್ರೇಮ್‌ಜಿ ಪ್ರತಿಷ್ಠಾನಕ್ಕೆ ಸುಧಾಕರ್‌ ಅಭಿನಂದನೆ

ಇನ್ನು ಶ್ರೀನಿವಾಸ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದು, ಚಿಕ್ಕಮಗಳೂರಿನ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೆ.ಶ್ರೀನಿವಾಸ್ ಹೆಬ್ಬಾರ್ ಅವರು ಉತ್ತಮ ಸಂಘಟಕರಾಗಿದ್ದರು. ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ನೋವು ವ್ಯಕ್ತಪಡಿಸಿದ್ದಾರೆ. 

ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಹೆಬ್ಬಾರ್ ಅವರ ಅಕಾಲಿಕ ನಿಧನದಿಂದ, ಪಕ್ಷವು ಒಬ್ಬ ನಿಷ್ಠಾವಂತ ಕಾರ್ಯಕರ್ತನನ್ನು...

Posted by DK Shivakumar on Friday, November 6, 2020

ಹೆಬ್ಬಾರ್ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಬಂಧು-ಬಳಗದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios