ಮಂತ್ರಿಗಿರಿಗಾಗಿ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ರಾಜೀನಾಮೆ ಬೆದರಿಕೆ
ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆಯೇ, ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಂತ್ರಿಗಿರಿಗಾಗಿ ಸಚಿವಾಕಾಂಕ್ಷಿಗಳು ಬಿಎಸ್‌ವೈ ದುಂಬಾಲು ಬಿದ್ದಿದ್ದಾರೆ. ಅದರಲ್ಲೂ ಹಿರಿಯ ಶಾಸಕರೊಬ್ಬರ ಬೆಂಬಲಿಗರು ರಾಜೀನಾಮೆ ಬೆದರಿಕೆ ಹಾಕಿದ್ದಾರೆ.
ಚಿತ್ರದುರ್ಗ,(ಫೆ.02): ಒಂದೂವರೆ ತಿಂಗಳಿಂದ ಮಂತ್ರಿಗಿರಿಗಾಗಿ ಕಾಯ್ತಿದ್ದ ಆಕಾಂಕ್ಷಿಗಳಿಗೆ ಹೈಕಮಾಂಡ್ ಸಿಹಿ ಸುದ್ದಿ ಕೊಟ್ಟಿದೆ. ಸಂಪುಟ ವಿಸ್ತರಣೆ ಫೆ.6ಕ್ಕೆ ಪಕ್ಕಾ ಆಗಿದ್ದು, 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಆದ್ರೆ ಯಾರ್ ಯಾರಿಗೆ ಸಚಿವ ಸ್ಥಾನ ಸಿಗಲಿದೆ. ಗೆದ್ದ ನೂತನ ಶಾಸಕರ ಪೈಕಿ ಎಷ್ಟು ಜನರಿಗೆ ಅವಕಾಶ ಸಿಗುತ್ತೆ. ಮೂಲ ಬಿಜೆಪಿಗರಲ್ಲಿ ಯಾರಿಗೆ ಮಂತ್ರಿಭಾಗ್ಯ ಒಲಿಯುತ್ತೆ ಅನ್ನೋದು ಕುತೂಹಲವಾಗಿಯೇ ಇದೆ.
ಇದರ ಮಧ್ಯೆ ಹಿರಿಯ ಬಿಜೆಪಿ ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ರಾಜೀನಾಮೆ ನೀಡುವುದಾಗಿಯೂ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!
ಚಿತ್ರದುರ್ಗದಲ್ಲಿ ಇಂದು (ಭಾನುವಾರ) ಜಿಪಂ, ತಾಪಂ, ಗ್ರಾಪಂ, ನಗರಸಭೆ ಸದಸ್ಯರು ಸುದ್ದಿಗೋಷ್ಠಿ ನಡೆಸಿ, ತಿಪ್ಪಾರೆಡ್ಡಿಗೆ ಮಂತ್ರಿ ಸ್ಥಾನ ಕೊಡುವಂತೆ ಸಿಎಂ ಬಿಎಸ್ವೈಗೆ ಮನವಿ ಮಾಡಿದರು.
ತಿಪ್ಪಾರೆಡ್ಡಿ ಬಿಜೆಪಿ ಶಾಸಕರಾದ್ಮೇಲೆ ನಗರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಜಾತಿ ಆಧಾರದ ಮೆಲೆ ಸಚಿವ ಸ್ಥಾನ ಕೊಡಬಾರದು. ಹಿರಿತನ ಆಧಾರದ ಮೇಲೆ ಶಾಸಕ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ತಿಪ್ಪಾರೆಡ್ಡಿ ಅವರನ್ನು ಮಂತ್ರಿ ಮಾಡದಿದ್ದರೆ ನಗರಸಭೆ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ಗ್ರಾಮ ಪಂಚಾಯತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡ್ತೀವಿ ನಗರಸಭೆ ಸದಸ್ಯ ಶ್ರೀನಿವಾಸ್ ಬೆದರಿಕೆ ಹಾಕಿದರು.
ಫೆಬ್ರವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ವಿಕ್ ಮಾಡಿ