Asianet Suvarna News Asianet Suvarna News

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ತಾಲೀಮು ಶುರು..!

ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ತಳಹದಿ ಮೇಲೆ ಟಿಕೆಟ್ ಹಂಚಿಕೆ ಮಾಡಬೇಕು. ಸ್ಥಳೀಯ ಅಭ್ಯರ್ಥಿಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡುತ್ತೇವೆ: ಚೌಳೂರು ಪ್ರಕಾಶ್ 

Chitradurga Congress Has Started Preparation about Lok Sabha Elections 2024 grg
Author
First Published Dec 7, 2023, 5:07 PM IST

ಚಳ್ಳಕೆರೆ(ಡಿ.07):  ಚಿತ್ರದುರ್ಗ ಲೋಕಸಭಾ ಕ್ಷೇತ್ರ ಮೀಸಲಾತಿ ಕ್ಷೇತ್ರವಾದರೂ ಸ್ಥಳೀಯ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡದೆ, ಹೊರಗಿನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ಸರಿಯಲ್ಲ. ಡಿ.೯ರ ಶನಿವಾರ ಲೋಕಸಭಾ ಟಿಕೆಟ್ ಹಂಚಿಕೆ ಕುರಿತಂತೆ ಪಕ್ಷದ ವೀಕ್ಷಕರಾಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿಗೆ ಟಿಕೆಟ್ ನೀಡುವಂತೆ ವೀಕ್ಷಕರಲ್ಲಿ ಮನವಿ ಮಾಡುವುದಾಗಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ್ ಕಾಂಗ್ರೆಸ್ ಪಕ್ಷದ ವರಿಷ್ಟರನ್ನು ಆಗ್ರಹಿಸಿದರು.

ಅವರು, ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ತಳಹದಿ ಮೇಲೆ ಟಿಕೆಟ್ ಹಂಚಿಕೆ ಮಾಡಬೇಕು. ಸ್ಥಳೀಯ ಅಭ್ಯರ್ಥಿಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡುತ್ತೇವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸುಮಾರು ೮ ಲಕ್ಷ ದಲಿತ ಸಮುದಾಯದ ಮತಗಳಿದ್ದು ಆಪೈಕಿ ಎಡಗೈ ಸಮುದಾಯದ ಐದು ಲಕ್ಷ ಮತಗಳಿವೆ. ಕಳೆದ ೨೦೦೯ರಲ್ಲಿ ಸ್ಥಳೀಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಈ ಸಮುದಾಯದ ಹೆಚ್ಚು ಮತಗಳನ್ನು ಪಡೆದಿದ್ದರು ಎಂದರು.

ಭ್ರೂಣ ಹತ್ಯೆ ಮಧ್ಯೆ ಲಿಂಗಾನುಪಾತ ತೀವ್ರ ಕುಸಿತ: 1000 ಗಂಡು ಮಕ್ಕಳಿಗೆ 945 ಹೆಣ್ಣು ಮಗು ಜನನ

ಚಿತ್ರದುರ್ಗ ಲೋಕಸಭಾ ಟಿಕೆಟ್ ಆಕಾಂಕ್ಷಿ ಡಾ.ಜೆ.ಜೆ.ಹಟ್ಟಿ ಬಿ.ತಿಪ್ಪೇಸ್ವಾಮಿ ಮಾತನಾಡಿ, ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕು. ಈಗಾಗಲೇ ಹೊರಗಿನವರಿಗೆ ಟಿಕೆಟ್ ನೀಡಿ ಪಕ್ಷ ಸೋಲು ಅನುಭವಿಸಿದೆ. ಸ್ಥಳೀಯ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟರೆ ಈ ಕ್ಷೇತ್ರವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಚುನಾವಣೆಗೆ ಸ್ಪರ್ಧಿಸಲು ನನಗೆ ಒತ್ತಡ ಹೇರುತ್ತಿದ್ದು, ಪಕ್ಷ ಟಿಕೆಟ್ ನೀಡಿದರೆ ಈ ಕ್ಷೇತ್ರವನ್ನು ಹೆಚ್ಚು ಮತಗಳಿಂದ ಗೆಲುವು ಸಾಧಿಸುವ ವಿಶ್ವಾಸ ನನಗಿದೆ ಎಂದರು.

ಕಾಂಗ್ರೆಸ್ ಮುಖಂಡ ಎಂ.ಡಿ.ಅಶ್ವಕ್‌ಅಲಿ, ದಲಿತ ಮುಖಂಡ ಹೆಗ್ಗೆರೆ ಮಂಜುನಾಥ, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಬಿ.ತಿಪ್ಪೇಸ್ವಾಮಿ, ಗ್ರಾಪಂ ಸದಸ್ಯ ಬಿ. ಷಣ್ಮುಖಪ್ಪ, ರಾಜಶೇಖರ, ಮಾದಿಗ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗದೀಶ್, ಗೋವಿಂದಪ್ಪ, ಚಂದ್ರಪ್ಪ, ಮಾರಪ್ಪ ಮುಂತಾದವರು ಉಪಸ್ಥಿತರಿದ್ದರು.

Follow Us:
Download App:
  • android
  • ios