ವಿಜಯಪುರ ಜಿಲ್ಲೆಯರಾದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಲಾಗಿದೆ.

ಬೆಂಗಳೂರು (ಮಾ.27): ರಾಜ್ಯದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯರಾದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಲಾಗಿದೆ. ಇನ್ನು ಬಿಜೆಪಿಯಿಂದ ನಾಲ್ಕನೇ ಅಭ್ಯರ್ಥಿಗೆ ಸ್ಥಾನ ಪಲ್ಲಟ ಮಾಡಿಸಿ ಟಿಕೆಟ್‌ ನೀಡಲಾಗಿದೆ. 

ಹೌದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿ ಆಯ್ಕೆ ಮಾಡುವುದಕ್ಕೆ ಭಾರಿ ಕಸರತ್ತು ಮಾಡಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‌ಗೆ 3 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಉಳಿದಂತೆ 24 ಲೋಕಸಭಾ ಕ್ಷೇತ್ರಗಳ ಟಿಕೆಟ್‌ ಘೋಷಣೆ ಮಾಡಿದ್ದ ಬಿಜೆಪಿ ಹೈಕಮಾಂಡ್‌ಗೆ ಚಿತ್ರದುರ್ಗ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿ ಹುಡುಕುವುದು ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ ಅಳೆದು ತೂಗಿ ಎರಡು ಹೆಸರನ್ನು ಫೈನಲ್ ಮಾಡಲಾಗಿತ್ತು. ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೆಸರು ಕೇಳಿಬಂದಿತ್ತು. ಅದರಲ್ಲಿ ಅಂತಿಮವಾಗಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ.

ತಾನು ಮುಖ್ಯಮಂತ್ರಿ ಆಗಬೇಕೆಂದು ಯಡಿಯೂರಪ್ಪನನ್ನು ಕೆಳಗಿಳಿಸಿದ್ದೇ ಪ್ರಹ್ಲಾದ್ ಜೋಶಿ; ದಿಂಗಾಲೇಶ್ವರ ಶ್ರೀ ಆಕ್ರೋಶ

ಸ್ಥಾನಪಲ್ಲಟ ಮಾಡಿದ 4ನೇ ಬಿಜೆಪಿ ಅಭ್ಯರ್ಥಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ 25 ಅಭ್ಯರ್ಥಿಗಳ ಪೈಕಿ ನಾಲ್ವರು ತಮ್ಮ ಸ್ವ ಕ್ಷೇತ್ರವನ್ನು ಬಿಟ್ಟು ಸ್ಥಾನ ಪಲ್ಲಟ ಮಾಡಿದಂತಾಗಿದೆ. ಇದಕ್ಕಿಂತ ಮೊದಲು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್‌ ನೀಡಲಾಗಿದೆ. ನಂತರ, ಬೆಂಗಳೂರಿನ ವಿಜಯನಗರ ಕ್ಷೇತ್ರದ ಮಾಜಿ ಶಾಸಕ ವಿ. ಸೋಮಣ್ಣ ಅವರಿಗೆ ತುಮಕೂರು ಲೋಕಸಭಾ ಟಿಕೆಟ್‌ ನೀಡಲಾಗಿದೆ. ಇನ್ನು ಹುಬ್ಬಳ್ಳಿ ಮೂಲದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್‌ ನೀಡಲಾಗಿದೆ. ಈಗ ವಿಜಯಪುರ ಮೂಲದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಟಿಕೆಟ್‌ ನೀಡಲಾಗಿದೆ.

ಬಿಜೆಪಿ ಅಭ್ಯರ್ಥಿಗಳ ಸ್ಥಾನ ಪಲ್ಲಟದ ವಿವರ:

  • ಶೋಭಾ ಕರಂದ್ಲಾಜೆ = ಉಡುಪಿ ಚಿಕ್ಕಮಗಳೂರು - ಬೆಂಗಳೂರು ಉತ್ತರ
  • ವಿ. ಸೋಮಣ್ಣ= ಬೆಂಗಳೂರು - ತುಮಕೂರು
  • ಜಗದೀಶ್ ಶೆಟ್ಟರ್ = ಹುಬ್ಬಳ್ಳಿ ಧಾರವಾಡ- ಬೆಳಗಾವಿ
  • ಗೋವಿಂದ ಕಾರಜೋಳ = ವಿಜಯಪುರ - ಚಿತ್ರದುರ್ಗ