Asianet Suvarna News Asianet Suvarna News

ಸ್ಮಾರ್ಟ್ ಸಿಟಿ ಕಾಮಗಾರಿ: ಗೊಂದಲಕ್ಕೆ ಸೃಷ್ಟಿಕರಣ ನೀಡಿ: ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ವ್ಯಾಕ್ಸಿನ್‌ ಡಿಪೋ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಿರುವುದಕ್ಕೆ ಸಂಬಂಧಿಸಿದಂತೆ ಸ್ಮಾರ್ಟ ಸಿಟಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು.

Clarify the confusion of smart city work Minister Satish Jarakiholi notice rav
Author
First Published Jul 2, 2023, 5:52 AM IST

ಬೆಳಗಾವಿ (ಜು.2): ವ್ಯಾಕ್ಸಿನ್‌ ಡಿಪೋ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಿರುವುದಕ್ಕೆ ಸಂಬಂಧಿಸಿದಂತೆ ಸ್ಮಾರ್ಟ ಸಿಟಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು.

ಬೆಳಗಾವಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಶನಿವಾರ ನಡೆದ ಸ್ಮಾರ್ಟ ಸಿಟಿ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

'ಶಕ್ತಿ' ಯೋಜನೆ ಲೋಕಾರ್ಪಣೆ, ಈ ಯೋಜನೆ ದೇಶಕ್ಕೇ ಮಾದರಿ : ಸತೀಶ್ ಜಾರಕಿಹೊಳಿ

ವ್ಯಾಕ್ಸಿನ್‌ ಡಿಪೋದಲ್ಲಿನ ಕಾಮಗಾರಿಗೆ ಅನುಮತಿ ಪಡೆದುಕೊಂಡಿರುವ ಹಾಗೂ ಕಾಮಗಾರಿ ಪೂರ್ಣಗೊಂಡ ಬಳಿಕ ಸಮರ್ಪಕ ನಿರ್ವಹಣೆಯ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಬೇಕು ಎಂದರು.

ಸ್ಮಾರ್ಟ ಸಿಟಿ ಕಾಮಗಾರಿ ಆರಂಭಿಸಲು ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಪರವಾನಿಗೆ ನೀಡಿರುವುದಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಹೆರಿಟೇಜ… ಪಾರ್ಕ ಅಭಿವೃದ್ಧಿಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆದ್ದರಿಂದ ಈ ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಹೇಳಿದರು.

ಒಂದು ವೇಳೆ ಲಿಖಿತವಾಗಿ ಪರವಾನಿಗೆ ನೀಡಿದ್ದರೆ ಅದರ ಬಗ್ಗೆ ಅಧಿಕಾರಿಗಳು ವಿವರಣೆ ನೀಡಬೇಕು ಎಂದು ಸೂಚಿಸಿದರು.

ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶನ:

ಸ್ಮಾರ್ಟ ಸಿಟಿ ಯೋಜನೆಯಡಿ ಉಳಿತಾಯವಾಗಿರುವ . 19 ಕೋಟಿ ಗೆ ಸಂಬಂಧಿಸಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕು. ನಗರ ಬಸ್‌ ನಿಲ್ದಾಣ ಮತ್ತು ಟಿಳಕವಾಡಿಯ ಕಲಾಮಂದಿರ ಸೇರಿದಂತೆ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಆದಷ್ಟುಬೇಗನೆ ಪೂರ್ಣಗೊಳಿಸಬೇಕು ಎಂದು ಸಚಿವ ಜಾರಕಿಹೊಳಿ ತಿಳಿಸಿದರು.

ವಿಶ್ವೇಶ್ವರಯ್ಯ ನಗರದಲ್ಲಿ . 51 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್‌ ಕಮಾಂಡ್‌ ಅಂಡ್‌ ಕಂಟ್ರೋಲ್‌ ಸೆಂಟರ್‌ ಅನ್ನು ಮಹಾನಗರ ಪಾಲಿಕೆ, ಪೊಲೀಸ್‌, ಆರೋಗ್ಯ, ಸಾರಿಗೆ ಮತ್ತಿತರ ಇಲಾಖೆಯವರು ಪ್ರಯೋಜನ ಪಡೆದುಕೊಳ್ಳಬೇಕು. ಉಳಿತಾಯದ ಹಣ ಬಳಕೆಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಿದ್ಧಪಡಿಸಿದ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಅಂಗನವಾಡಿ ಅಭಿವೃದ್ಧಿ; ಅಧಿಕ ಖರ್ಚು-ಸಚಿವೆ ಹೆಬ್ಬಾಳಕರ ಅಸಮಾಧಾನ:

ಅಂಗನವಾಡಿ ಕೇಂದ್ರ ಅಭಿವೃದ್ಧಿಗೆ . 80 ಲಕ್ಷ ಖರ್ಚು ಮಾಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಾಮಗಾರಿಗಳ ಛಾಯಾಚಿತ್ರ ಗಮನಿಸಿದರೆ ಅಷ್ಟೊಂದು ದುಡ್ಡು ಖರ್ಚು ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಈ ಬಗ್ಗೆ ವಿಸ್ತೃತವಾಗಿ ಮಾಹಿತಿಯನ್ನು ನೀಡುವಂತೆ ಸಚಿವೆ ಲಕ್ಷ್ಮೇ ಹೆಬ್ಬಾಳಕರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವೆಡೆ ಅವೈಜ್ಞಾನಿಕವಾಗಿ ಸೈಕಲ… ಟ್ರ್ಯಾಕ್‌ ಮಾಡಲಾಗಿದೆ. ಈ ಬಗ್ಗೆ ಗಮನಹರಿಸಬೇಕು. ಇದೇ ರೀತಿ ನಿರಂತರ ನೀರು ಯೋಜನೆಯ ಕಾಮಗಾರಿಗಳಿಂದ ರಸ್ತೆಗಳು ಹಾಳು ಮಾಡಲಾಗುತ್ತಿದೆ. ಅವುಗಳನ್ನು ದುರಸ್ತಿಗೆ ಸೂಚನೆ ನೀಡಬೇಕು ಎಂದರು.

ಬೆಳಗಾವಿ ನಗರದಲ್ಲಿ ಸಾವಿರಾರು ಕೋಟಿ ರುಪಾಯಿ ಖರ್ಚು ಮಾಡಲಾಗಿದ್ದು, ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಒಂದು ರುಪಾಯಿ ಅನುದಾನ ಕೂಡ ನೀಡಿರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಕ್ಷಿಣ ಮತ್ತು ಉತ್ತರ ಕ್ಷೇತ್ರದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಕ್ಷೇತ್ರದಲ್ಲಿ ಯಾವ ಕಾಮಗಾರಿ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಲಿಖಿತವಾಗಿ ಮಾಹಿತಿಯನ್ನು ನೀಡಬೇಕು. ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಕೆಲಸವನ್ನೂ ಕೈಗೊಳ್ಳದೇ ನಿರಾಸಕ್ತಿ ತೋರಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಒಂದು ಸಣ್ಣ ಉದ್ಯಾನ ಅಭಿವೃದ್ಧಿಗೆ ಮನವಿ ಮಾಡಿಕೊಂಡರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಸದೆ ಮಂಗಲ ಅಂಗಡಿ ಬೇಸರ ವ್ಯಕ್ತಪಡಿಸಿದರು.

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್‌ ಸೇಠ್‌, ಸ್ಮಾರ್ಟ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರಲ್ಲದೇ ಪ್ರತಿಯೊಂದು ಕಾಮಗಾರಿಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ಒದಗಿಸುವಂತೆ ತಿಳಿಸಿದರು.

ನಿಯಮ ಉಲ್ಲಂಘನೆ ತನಿಖೆಗೆ ಅಭಯ… ಪಾಟೀಲ ಒತ್ತಾಯ:

ವ್ಯಾಕ್ಸಿನ್‌ ಡಿಪೋ ದಲ್ಲಿ ಸ್ಮಾರ್ಟ ಸಿಟಿ ಕಾಮಗಾರಿಗಾಗಿ ಮರಗಳನ್ನು ಕತ್ತರಿಸಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ಮಾರ್ಟ ಸಿಟಿ ಕಾಮಗಾರಿ ಗುಣಮಟ್ಟದ ಬಗ್ಗೆ ಹಾಗೂ ನಿಯಮಾವಳಿ ಉಲ್ಲಂಘನೆ ಕುರಿತು ದೂರುಗಳಿದ್ದರೆ ಸಂಪೂರ್ಣವಾಗಿ ಎಲ್ಲ ಕಾಮಗಾರಿಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಒತ್ತಾಯಿಸಿದರು.

ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸ್ಮಾರ್ಟ್ ಸಿಟಿ ಯೋಜನೆಯಡಿ ಉಳಿತಾಯ ಹಣದಲ್ಲಿ ಹೊಸ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಿದ್ಧಪಡಿಸುವಾಗ ತಮ್ಮ ಗಮನಕ್ಕೆ ತರಬೇಕು.ನಗರದಲ್ಲಿ ಒಟ್ಟು 53 ಕಿ.ಮೀ. ವೈಚ್‌ ಟಾಪಿಂಗ್‌ ಮಾಡಲು ಅತೀ ಹೆಚ್ಚು ಹಣ ಖರ್ಚು ಮಾಡಲಾಗಿದೆ ಎಂದರು.

ಸಚಿವ ಸತೀಶ ಜಾರಕಿಹೊಳಿ ಹೆಗಲಿಗೆ ಬೆಳಗಾವಿ ಉಸ್ತುವಾರಿ!

ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿರುವ ವಿವಿಧ ಗ್ಯಾಲರಿ, ಕಲಾಮಂದಿರ ಇತ್ಯಾದಿಗಳಿಂದ ಎಷ್ಟುಆದಾಯ ಬರಬಹುದು ಎಂಬುದರ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಇದುವರೆಗೆ ಯಾವುದೇ ರೀತಿಯ ಆದಾಯ ಆರಂಭವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

Follow Us:
Download App:
  • android
  • ios