ಹಾವೇರಿಯ ಕಾಂಗ್ರೆಸ್‌ ಚುನಾವಣೆ ಪ್ರಚಾರ ಸಭೇಲಿ ಗದ್ದಲ: ಕೈಕೈ ಮಿಲಾಯಿಸಿದ ಕಾರ್ಯಕರ್ತರು

ಚುನಾವಣೆ ಬಂದಾಗ ಮಾತ್ರ ಕಾರ್ಯಕರ್ತರು ನೆನಪಾಗುತ್ತಾರೆ. ಚುನಾವಣೆಯಲ್ಲಿ ಗೆದ್ದ ಮೇಲೆ ನಮ್ಮತ್ತ ನೋಡುವುದಿಲ್ಲ ಎಂದು ಕೆಲ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ಶಾಸಕ ಬಸವರಾಜ ಶಿವಣ್ಣನವರ ಆಕ್ರೋಶಿತ ಕಾರ್ಯಕರ್ತರನ್ನು ಸಮಾಧಾನ ಮಾಡಲು ಯತ್ನಿಸಿದರೂ ಸಮಾಧಾನಗೊಳ್ಳದ ಕಾರ್ಯಕರ್ತರು ವೇದಿಕೆ ಏರಿದರು. ಆಗ ಎರಡು ಗುಂಪುಗಳ ನಡುವೆ ಗಲಾಟೆ ಮತ್ತಷ್ಟು ಜೋರಾಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಿರುಗಿತು. 
 

Clash in Congress Meeting in Haveri of Lok Sabha Election 2024 grg

ಹಾವೇರಿ(ಮಾ.21):  ಚುನಾವಣೆ ಸಂದರ್ಭದಲ್ಲಿ ನಿಮ್ಮ ಪರ ದುಡಿಯಲು ನಾವು ಬೇಕು, ಗೆದ್ದ ಬಳಿಕ ಕಾರ್ಯಕರ್ತರ ಕಷ್ಟ ಕೇಳಲೂ ನಿಮಗೆ ಸಮಯವಿರುವುದಿಲ್ಲ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ಇಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ನಡೆಯಿತು. ಇದರಿಂದ ಕೆಲಕಾಲ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದಲ್ಲದೆ, ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. 

ಗಲಾಟೆ ನಡುವೆಯೇ ಎಚ್.ಕೆ. ಪಾಟೀಲರು ಮಾತು ಆರಂಭಿಸಿದ ಬಳಿಕ ಗಲಾಟೆ ತಣ್ಣಗಾಯಿತು. ಇಲ್ಲಿನ ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಈ ಸಭೆಯಲ್ಲಿ ಹಿರಿಯ ಸಚಿವರಾದ ಎಚ್.ಕೆ.ಪಾಟೀಲ, ಶಿವಾನಂದ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಜಿಲ್ಲೆಯ ಶಾಸಕರು ಪಾಲ್ಗೊಂಡಿದ್ದರು. ಕಾರ್ಯಕ್ರಮ ಉದ್ಘಾಟಿಸುತ್ತಿದ್ದಂತೆ ಕಾರ್ಯಕರ್ತರು ಎದ್ದು ನಿಂತು ಗದ್ದಲು ಶುರುಮಾಡಿದರು.

ಪುತ್ರನಿಗೆ ಟಿಕೆಟ್ ಸಿಗದ್ದಕ್ಕೆ ಈಶ್ವರಪ್ಪ ಬಂಡಾಯ! ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಚುನಾವಣೆ ಬಂದಾಗ ಮಾತ್ರ ಕಾರ್ಯಕರ್ತರು ನೆನಪಾಗುತ್ತಾರೆ. ಚುನಾವಣೆಯಲ್ಲಿ ಗೆದ್ದ ಮೇಲೆ ನಮ್ಮತ್ತ ನೋಡುವುದಿಲ್ಲ ಎಂದು ಕೆಲ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ಶಾಸಕ ಬಸವರಾಜ ಶಿವಣ್ಣನವರ ಆಕ್ರೋಶಿತ ಕಾರ್ಯಕರ್ತರನ್ನು ಸಮಾಧಾನ ಮಾಡಲು ಯತ್ನಿಸಿದರೂ ಸಮಾಧಾನಗೊಳ್ಳದ ಕಾರ್ಯಕರ್ತರು ವೇದಿಕೆ ಏರಿದರು. ಆಗ ಎರಡು ಗುಂಪುಗಳ ನಡುವೆ ಗಲಾಟೆ ಮತ್ತಷ್ಟು ಜೋರಾಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಿರುಗಿತು. ಗಲಾಟೆ ನಡುವೆಯೇ ಎಚ್.ಕೆ. ಪಾಟೀಲರು ಮಾತು ಆರಂಭಿಸಿದ ಬಳಿಕ ಗಲಾಟೆ ನಿಧಾನವಾಗಿ ತಣ್ಣಗಾಯಿತು.

Latest Videos
Follow Us:
Download App:
  • android
  • ios