ಬೆಂಗಳೂರು, (ಫೆ.11): ಸಮ್ಮಿಶ್ರ ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ಕಾಂಗ್ರೆಸ್  ನ ನಾಲ್ವರು ಅತೃಪ್ತ ಶಾಸಕರಿಗೆ ಅನರ್ಹತೆಯ ಭೀತಿ ಎದುರಾಗಿದೆ.

ವಿಪ್ ಉಲ್ಲಂಘನೆ ಮಾಡಿರುವುದರಿಂದ ಪಕ್ಷಾಂತರ ಕಾಯ್ದೆ ಅಡಿಯಲ್ಲಿ ಕಾಂಗ್ರೆಸ್ಸಿನ ನಾಲ್ವರು ಅತೃಪ್ತ ಶಾಸಕರನ್ನು  ಅನರ್ಹ ಮಾಡುವಂತೆ  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ  ಇಂದು [ಸೋಮವಾರ] ಸ್ಪೀಕರ್‌ ರಮೇಶ್‌ಕುಮಾರ್‌ ಅವರಿಗೆ ದೂರು ನೀಡಿದರು.

ಅತೃಪ್ತರ ವಿರುದ್ಧ ಕ್ರಮ: ಕೈಪಡೆಗೆ 2 ವಿಷಯಗಳದ್ದೇ ಟೆನ್ಶನ್

ಗೋಕಾಕ್ MLA, ಮಹೇಶ ಕುಮಠಳ್ಳಿ, ಬಿ.ನಾಗೇಂದ್ರ ಹಾಗೂ ಡಾ. ಉಮೇಶ್ ಜಾಧವ್ ಅವರು ಎರಡೆರಡು ಬಾರಿ ಶೋಕಾಸ್ ನೋಟಿಸ್ ಹಾಗೂ ವಿಪ್​ಗಳನ್ನು ಜಾರಿ ಮಾಡಿದ್ದರೂ ಅದ್ಯಾವುದಕ್ಕೆ ಕಿಮ್ಮತ್ತು ನೀಡಿಲ್ಲ. 

ಹೀಗಾಗಿ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲ ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸಾಥ್ ನೀಡಿದರು.