* ಅಮಿತ್ ಶಾ, ನಡ್ಡಾ ಭೇಟಿಗೆ ಕಾಯುತ್ತಿರುವ ಬೊಮ್ಮಾಯಿ, ಸಚಿವ ಸ್ಥಾನಾಕಾಂಕ್ಷಿಗಳೂ ದಿಲ್ಲಿಗೆ ದೌಡು* ಕೇಂದ್ರ ನಾಯಕರನ್ನು ಭೇಟಿ ಆಗಿ ಲಾಬಿ* ವರಿಷ್ಠರ ಭೇಟಿ ಬಳಿಕವೇ ಸಂಪುಟದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ
ಬೆಂಗಳೂರು(ಏ.06): ಸಂಪುಟ ಕಸರತ್ತಿಗೆ(Cabinet Expansion) ಸಂಬಂಧಿಸಿದಂತೆ ಬಿಜೆಪಿ(BJP) ಹೈಕಮಾಂಡ್ ಜತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕಾಯುತ್ತಿದ್ದು, ವರಿಷ್ಠರ ಭೇಟಿ ಬಳಿಕವೇ ಸಂಪುಟದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ.
ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಿದ ಬೊಮ್ಮಾಯಿ ಅವರು ಸಂಜೆಯಿಂದ ರಾತ್ರಿವರೆಗೂ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಸಂಬಂಧ ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿದರು. ಬುಧವಾರವೂ ಇನ್ನೂ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುವ ಉದ್ದೇಶ ಹೊಂದಿರುವ ಬೊಮ್ಮಾಯಿ ಅವರು ವರಿಷ್ಠರ ಭೇಟಿಗೆ ಸಮಯ ಕೇಳಿದ್ದಾರೆ. ಹೀಗಾಗಿ, ಬುಧವಾರ ಈ ಭೇಟಿ ಆಗಬಹುದು ಎನ್ನಲಾಗಿದೆ.
ಈ ನಡುವೆ ಮುಖ್ಯಮಂತ್ರಿಗಳು ದೆಹಲಿಗೆ(Delhi) ತೆರಳುತ್ತಿದ್ದಂತೆಯೇ ಸಚಿವ ಸ್ಥಾನದ ಹಲವು ಆಕಾಂಕ್ಷಿಗಳೂ ದೆಹಲಿಗೆ ದೌಡಾಯಿಸಿದ್ದಾರೆ. ಆಕಾಂಕ್ಷಿಗಳು(Aspirants) ಕೇಂದ್ರದ ನಾಯಕರನ್ನು ಭೇಟಿ ಮಾಡಿ ಲಾಬಿ ನಡೆಸುವ ಪ್ರಯತ್ನದಲ್ಲಿದ್ದಾರೆ.
ಕರ್ನಾಟಕದಲ್ಲಿ ಆಝಾನ್ ಸೌಂಡ್: ಸರ್ಕಾರ ಯಾವುದೇ ಹೊಸ ಅದೇಶ ಹೊರಡಿಸಿಲ್ಲ ಎಂದ ಸಿಎಂ
ಮಂಗಳವಾರ ರಾತ್ರಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ನಾನು ರಾಜ್ಯದ(Karnataka) ಹಲವಾರು ಯೋಜನೆಗಳ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ದೆಹಲಿಗೆ ಆಗಮಿಸಿದ್ದೇನೆ. ಈ ಸಮಯ ಬಳಸಿಕೊಂಡು ಪಕ್ಷದ ವರಿಷ್ಠರಾದ ಕೇಂದ್ರದ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಗೆ ಸಮಯ ಕೇಳಿದ್ದೇನೆ’ ಎಂದರು. ‘ಸಂಪುಟ ವಿಸ್ತರಣೆಯೊ ಅಥವಾ ಪುನಾರಚನೆಯೋ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಅದು ಪಕ್ಷದ ವರಿಷ್ಠರೊಂದಿಗೆ ಚರ್ಚೆಗೆ ಕುಳಿತುಕೊಂಡ ಬಳಿಕ ಸ್ಪಷ್ಟವಾಗಲಿದೆ. ಅಂತಿಮವಾಗಿ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ’ ಎಂದರು.
ಇದಕ್ಕೂ ಮೊದಲು ಬೆಂಗಳೂರಿನಲ್ಲಿ(Bengaluru) ಮಾತನಾಡಿದ್ದ ಬೊಮ್ಮಾಯಿ, ‘ಸಂಪುಟ ವಿಸ್ತರಣೆ ಕುರಿತು ಈವರೆಗೆ ಯಾವುದೇ ಚರ್ಚೆಯಾಗಿಲ್ಲ. ದೆಹಲಿಗೆ ತೆರಳಿದ ವೇಳೆ ಅಮಿತ್ ಶಾ ಜಾಗೂ ನಡ್ಡಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ವಿಚಾರ ಪ್ರಸ್ತಾಪವಾಗುವ ನಿರೀಕ್ಷೆ ಇದೆ’ ಎಂದಿದ್ದರು.
ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಶಾಸಕ ತಿಪ್ಪಾರೆಡ್ಡಿ
ಕೇಂದ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಜಲಾಗ್ರಹ
ನವದೆಹಲಿ: ರಾಜ್ಯ ರಾಜಧಾನಿ ಬೆಂಗಳೂರು(Bengaluru) ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ರಾಜ್ಯ ಸರ್ಕಾರದ(Government of Karnataka) ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಯ(Mekedatu Project) ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ದೊರೆತಿದೆ. ಇದೇ ವೇಳೆ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡಬೇಕು ಎಂಬ ರಾಜ್ಯದ ಮನವಿಗೂ ಕೇಂದ್ರ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ದೊರಕಿದೆ.
ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ಎರಡು ಹಂತಗಳಲ್ಲಿ ಪಾದಯಾತ್ರೆ ನಡೆಸಿತ್ತು. ಈ ನಡುವೆ ಯೋಜನೆಗೆ ಸಂಬಂಧಿಸಿ ಎರಡು ರಾಜ್ಯಗಳ ಮಧ್ಯೆ ಮಧ್ಯಸ್ಥಿಕೆ ವಹಿಸಲು ತಾನು ಸಿದ್ಧ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದರು. ಇದು ಪ್ರತಿಪಕ್ಷಗಳಾದ ಕಾಂಗ್ರೆಸ್(Congress) ಮತ್ತು ಜೆಡಿಎಸ್(JDS) ಕಣ್ಣು ಕೆಂಪಗಾಗಿಸಿತ್ತು. ನಂತರದ ಬೆಳವಣಿಗೆಯಲ್ಲಿ ಕಳೆದ ತಿಂಗಳಷ್ಟೇ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆ ನಡೆಸಿ ಅಭಿಪ್ರಾಯಗಳನ್ನು ಪಡೆದಿದ್ದರು. ಇದೀಗ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ ಮೇಕೆದಾಟು ಡಿಪಿಆರ್‌ಗೆ ಒಪ್ಪಿಗೆ ನೀಡುವಂತೆ ಒತ್ತಡ ಹೇರಿದ್ದಾರೆ.
