‘ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ. ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ. ಬೇಗ ‘ಘರ್‌ ವಾಪಸಿ’ ಆಗಬಿಡಿ’.

ಬೆಂಗಳೂರು (ಮೇ.30): ‘ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ. ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ. ಬೇಗ ‘ಘರ್‌ ವಾಪಸಿ’ ಆಗಬಿಡಿ’. ‘ಸಿದ್ದರಾಮಯ್ಯ ದ್ರಾವಿಡರೇ? ಆರ್ಯರೇ?’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಶ್ನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ ಪರಿಯಿದು.

ನೆಹರೂ ಬಗ್ಗೆ ಹೇಳಿಕೆಗೂ ಗರಂ: ಇದೇ ವೇಳೆ ನೆಹರೂಗಿಂತ ನರೇಂದ್ರ ಮೋದಿ ಸಾಧನೆಯೇ ಹೆಚ್ಚು ಎಂದಿರುವ ಬೊಮ್ಮಾಯಿ ಅವರಿಗೆ ‘ನೆಹರೂ ದಿ ಆರ್ಕಿಟೆಕ್ಟ್’ ಹ್ಯಾಶ್‌ಟ್ಯಾಗ್‌ನ ಸರಣಿ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ. ‘ನೆಹರೂ ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ. ಇಬ್ಬರು ನಾಯಕರ ಸಾಧನೆ ಬಗ್ಗೆ ಮುಕ್ತ ಚರ್ಚೆಗೆ ನೀವು ಸಿದ್ಧವಿದ್ದರೆ ನಾನೂ ಸಿದ್ಧನಿದ್ದೇನೆ. ನನ್ನ ಮಾತಿಗೆ ನೀವು ಖರೀದಿಸಿಟ್ಟಿರುವ ‘ಟ್ರೋಲ್‌ ಗ್ಯಾಂಗ್‌’ ಮೂಲಕ ಉತ್ತರ ಕೊಡಿಸಲು ಹೋಗಬೇಡಿ’ ಹೇಳಿದ್ದಾರೆ.

Shivamogga: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ!

‘ಭಾಕ್ರಾ ನಂಗಲ್, ಹಿರಾಕುಡ್‌, ದಾಮೋದರ ಕಣಿವೆ ಯೋಜನೆಗಳ ಮೂಲಕ ಜವಾಹರಲಾಲ ನೆಹರೂ ಅಭಿವೃದ್ದಿಯ ಮುನ್ನೋಟದಿಂದ ದೇಶ ಕಟ್ಟಿದ್ದರು. ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು, ನಿಮ್ಮ ನರೇಂದ್ರ ಮೋದಿ ಅವರು ಕೆಡವುದನ್ನಷ್ಟೇ ಕಲಿತಿದ್ದಾರೆ. ಎಸ್‌ಬಿಐ, ಎಲ್‌ಐಸಿಯಿಂದ ಹಿಡಿದು ಭಾರತೀಯ ತೈಲ ನಿಗಮ, ಏರ್‌ ಇಂಡಿಯಾವರೆಗೆ ನೂರಾರು ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದವರು ನೆಹರೂ. ಅದನ್ನು ಮಾರಾಟಕ್ಕಿಟ್ಟವರು ಯಾರೆಂಬುದನ್ನು ಬಿಡಿಸಿ ಹೇಳಬೇಕೆ?’ ಎಂದು ಪ್ರಶ್ನಿಸಿದ್ದಾರೆ.

‘ಬೊಮ್ಮಾಯಿವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ವರ್ಷದ ಹಿಂದೆ ಚೀನಾ ದೇಶದ ಎದುರು ಭಾರತ ಮಂಡಿ ಊರುವಂತೆ ಮಾಡಿ ಭಾರತೀಯರು ತಲೆ ತಗ್ಗಿಸುವಂತೆ ಮಾಡಿದ್ದು ಯಾರೆಂದು ನಿಮಗೆ ಗೊತ್ತಿಲ್ಲವೇ? ಭಾರತ ಚೀನಾ ಗಡಿಯನ್ನು ಆ ದೇಶದ ಬೇಡಿಕೆಯಂತೆ 1959ರ ಗಡಿರೇಖೆಗೆ ಒಪ್ಪಿಕೊಂಡು ರಾಜಿ ಮಾಡಿಕೊಂಡಿದ್ದು ಇತ್ತೀಚಿನ ಇತಿಹಾಸ. ಗಾಲ್ವಾನ್‌ ಕಣಿವೆಯಲ್ಲಿ ನಮ್ಮ ಸೈನಿಕರನ್ನು ಲಾಠಿ, ದೊಣ್ಣೆಗಳಿಂದ ಕಾದಾಡುವಂತೆ ಮಾಡಿದ್ದನ್ನು ಕೂಡಾ ದೇಶದ ಜನ ಮರೆತಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.

'ಸಿದ್ದರಾಮಯ್ಯರನ್ನ ಒಮ್ಮೆ ಆರ್‌ಎಸ್‌ಎಸ್ ಕಚೇರಿಗೆ ಕರೆದೊಯ್ಯುತ್ತೇವೆ'

ಪಾಕಿಸ್ತಾನ ಎಂಬ ದುರ್ಬಲ ದೇಶದ ಎದುರು ವೀರಾವೇಶ ಮೆರೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ಪಾಕಿಸ್ತಾನಕ್ಕಿಂತ ದೊಡ್ಡ ಶತ್ರುವಾದ ಚೀನಾದ ಹೆಸರನ್ನು ಉಚ್ಚರಿಸಲು ಕೂಡಾ ಅಂಜುವುದು ಯಾಕೆ ಎಂದು ಹೇಳಬಲ್ಲಿರಾ ಬೊಮ್ಮಾಯಿ ಅವರೇ?
-ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ