* ಕರ್ನಾಟಕ ರಾಜ್ಯ ಸಚಿವ ಸಂಪುಟ ರಚನೆ ಕಸರತ್ತು* ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಸ್* ಕೊನೆಗೂ ನಡ್ಡಾ ಭೇಟಿಯಾದ ಬಸವರಾಜ ಬೊಮ್ಮಾಯಿ
ನವದೆಹಲಿ, (ಅ.02): ರಾಜ್ಯ ಸಂಪುಟ ರಚನೆ ಸಂಬಂಧ ನವದೆಹಲಿಯಲ್ಲಿ ಕಸರತ್ತು ನಡೆದಿದೆ. ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾದರು.
ಇಂದು (ಅ.02) ರಾತ್ರಿ ದೆಹಲಿಯ ಮೋತಿಲಾಲ್ ನೆಹರು ಮಾರ್ಗ್ ನಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸಕ್ಕೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸಂಪುಟ ರಚನೆ ಬಗ್ಗೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.
ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ
ಇನ್ನು ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದು, ನಾಲ್ವರು ಸೇರಿಕೊಂಡು ಯಾರನ್ನು ಸಚಿವರನ್ನಾಗಿ ಮಾಡಬೇಕು? ಯಾರನ್ನು ಬೇಡ ಎನ್ನುವ ಲೆಕ್ಕಾಚಾರ ಹಾಕುತ್ತಿದ್ದಾರೆ.
ರಾಜ್ಯದಲ್ಲಿ ಒಂದೆಡೆ ಕೊರೋನಾ ಮತ್ತೊಂದೆಡೆ ಪ್ರವಾಹ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಂದೇ ನೂತನ ಸಚಿವ ಪಟ್ಟಿ ಫೈನಲ್ ಮಾಡಿಕೊಂಡು ಹೋಗಲು ಬೊಮ್ಮಾಯಿ ತೀರ್ಮಾನಿಸಿದ್ದಾರೆ.
ಈಗಾಗಲೇ ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಸಿಎಂ ಆಯ್ಕೆಗೆ ರಾಜ್ಯಕ್ಕೆ ವೀಕ್ಷಕರಾಗಿ ಬಂದಿದ್ದ ಧರ್ಮೆಂದ್ರ ಪ್ರಧಾನ್ ಅವರನ್ನ ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದೀಗ ಅಂತಿಮವಾಗಿ ನಡ್ಡಾ ಜೊತೆ ಚರ್ಚೆಗಳು ನಡೆದಿದ್ದು, ಯಾರಿಗೆ ಮಂತ್ರಿಭಾಗ್ಯ ಸಿಗುತ್ತೋ ಎನ್ನುವುದು ಕುತೂಹಲ ಮೂಡಿಸಿದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಮಂಗಳವಾರ ಸಂಜೆ ಇಲ್ಲ ಬುಧವಾರ ಸಚಿವ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
