ತಪ್ಪು ಮುಚ್ಚಿ ಹಾಕುವುದು ಕಾಂಗ್ರೆಸ್ ನೈತಿಕತೆ: ಸಿಎಂ ಬೊಮ್ಮಾಯಿ
ಲೋಕಾಯುಕ್ತಕ್ಕೆ ಮುಕ್ತ ಅಧಿಕಾರ ನೀಡಿ ಯಾರೇ ತಪ್ಪು ಮಾಡಿದರೂ ನಾವು ಕ್ರಮ ಕೈಗೊಳ್ಳಲು ಸಿದ್ಧ ಎನ್ನುವುದು ನಮ್ಮ ನೈತಿಕತೆ. ತಪ್ಪುಗಳನ್ನು ಮುಚ್ಚಿಹಾಕುವುದು ಕಾಂಗ್ರೆಸ್ ನೈತಿಕತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಬಾಳೆಹೊನ್ನೂರು (ಮಾ.06): ಲೋಕಾಯುಕ್ತಕ್ಕೆ ಮುಕ್ತ ಅಧಿಕಾರ ನೀಡಿ ಯಾರೇ ತಪ್ಪು ಮಾಡಿದರೂ ನಾವು ಕ್ರಮ ಕೈಗೊಳ್ಳಲು ಸಿದ್ಧ ಎನ್ನುವುದು ನಮ್ಮ ನೈತಿಕತೆ. ತಪ್ಪುಗಳನ್ನು ಮುಚ್ಚಿಹಾಕುವುದು ಕಾಂಗ್ರೆಸ್ ನೈತಿಕತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಚಿವರ ಕಚೇರಿಯಲ್ಲಿ 25 ಲಕ್ಷ ಲಂಚ ಪಡೆಯುವಾಗ ಸಿಕ್ಕಿಹಾಕಿಕೊಂಡಿದ್ದರು. ಅಂದು ಅವರು ರಾಜೀನಾಮೆ ನೀಡಲಿಲ್ಲ. ಲೋಕಾಯುಕ್ತ ಇದ್ದಿದ್ದರೆ ಅವರ ಮೇಲೆ ಪ್ರಕರಣ ದಾಖಲಾಗುತ್ತಿತ್ತು. ಅವರು ಭ್ರಷ್ಟಾಚಾರ ಮುಚ್ಚಿಹಾಕಲು ಪ್ರಯತ್ನ ಮಾಡಿದರು ಎಂದರು.
ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ರಾಜೀನಾಮೆ ಪಡೆಯುವ ಬಗ್ಗೆ ಉತ್ತರಿಸಿ, ಈ ಬಗ್ಗೆ ತೀರ್ಮಾನವಾಗಿಲ್ಲ. ಲೋಕಾಯುಕ್ತಕ್ಕೆ ಸರ್ವ ಸ್ವಾತಂತ್ರ್ಯ ನೀಡಿದ್ದು ನಿಷ್ಪಕ್ಷಪಾತ ತನಿಖೆ ಮಾಡುತ್ತಾರೆ. ಆ ಕೆಲಸವಾಗಬೇಕೆಂಬುದೇ ನಮ್ಮ ಉದ್ದೇಶ ಎಂದರು. ಮಾಡಾಳು ವಿರೂಪಾಕ್ಷಪ್ಪ ವಿಚಾರದಲ್ಲಿ ಕಾಂಗ್ರೆಸ್ ಎಲ್ಲೆಡೆ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಮಾತನಾಡಿ ಜನರಿಗೆ ಯಾರು, ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆಂಬುದು ಗೊತ್ತಿದೆ. ತಪ್ಪುಗಳನ್ನು ಮುಚ್ಚಿಹಾಕಲು, ಮತ್ತೆ ಅಧಿಕಾರಕ್ಕೆ ಬರಬೇಕೆಂದು ಇವರು ಅದನ್ನು ಮಾಡುತ್ತಾರೆ. ಕಾಂಗ್ರೆಸ್ ಮಾಡಿದ ಕರ್ಮಕಾಂಡಗಳನ್ನು ಯಾರೂ ಮರೆತಿಲ್ಲ. ಕೊಲೆ, ಸುಲಿಗೆ, ಭ್ರಷ್ಟಾಚಾರ, ಲೂಟಿ ಮಾಡಿದ್ದಾರೆ. ಅವರ ಕಾಲದ 59 ಕೇಸ್ ಲೋಕಾಯುಕ್ತಕ್ಕೆ ವಹಿಸಿದ್ದು ಸತ್ಯ ಹೊರಗೆ ಬರಲಿದೆ ಎಂದರು.
ಕೆಲ ಷಡ್ಯಂತ್ರಗಳು ಬಿಎಸ್ವೈ ಹಿಂದೆಳೆಯೋ ಕೆಲಸ ಮಾಡಿವೆ: ಸಿಎಂ ಬೊಮ್ಮಾಯಿ
ಜಾನಪದ ಮ್ಯೂಸಿಯಂಗೆ ಕಾಯಕಲ್ಪ: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಅವರು ನಿರ್ಮಿಸಿದ ಜಾನಪದ ವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ ನೀಡಲಾಗುವುದು. ಬೆಂಗಳೂರಿನ ರಸ್ತೆಯೊಂದಕ್ಕೆ ತಿಪ್ಪೇಸ್ವಾಮಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಚಿತ್ರಕಲಾ ಪರಿಷತ್‌ನಲ್ಲಿ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ ಆಯೋಜಿಸಿದ್ದ ತಿಪ್ಪೇಸ್ವಾಮಿ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಲಾವಿದ ತಿಪ್ಪೇಸ್ವಾಮಿ ಅವರು ಉತ್ತಮ ಕಲಾವಿದರಾಗಿದ್ದು ಬಹಳ ಆಸಕ್ತಿಯಿಂದ ಮೈಸೂರು ವಿವಿಯಲ್ಲಿ ಜಾನಪದ ವಸ್ತು ಸಂಗ್ರಹಾಲಯ ನಿರ್ಮಿಸಿದ್ದರು.
ಈಗ ಅದು ದುರವಸ್ಥೆಯಲ್ಲಿದೆ ಎಂದು ತಿಳಿದು ಬಂದಿದ್ದು, ಅದಕ್ಕೆ ಕಾಯಕಲ್ಪ ನೀಡಲಾಗುವುದು. ನಗರದ ರಸ್ತೆಯೊಂದಕ್ಕೆ ತಿಪ್ಪೇಸ್ವಾಮಿ ಅವರ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ತಿಳಿಸಿದರು. ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ತಿಪ್ಪೇಸ್ವಾಮಿ ಅವರು ಪರಿಷತ್‌ನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಧರ್ಮಸ್ಥಳದ ಮಂಜುಷಾ ವಸ್ತು ಸಂಗ್ರಹಾಲಯ ನಿರ್ಮಾಣದಲ್ಲೂ ಕೈಜೋಡಿಸಿದ್ದಾರೆ. ಚಿತ್ರಕಲೆಗಳ ಮೂಲಕ ಇಂದಿಗೂ ನಮ್ಮ ನಡುವೆ ಜೀವಂತವಾಗಿದ್ದಾರೆ ಎಂದು ಸ್ಮರಿಸಿದರು.
ಧರ್ಮದ ಹೆಸರಲ್ಲಿ ಹಿಂಸೆ, ಭಯೋತ್ಪಾದನೆ: ಸಿಎಂ ಬೊಮ್ಮಾಯಿ ಆತಂಕ
ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ತಿಪ್ಪೇಸ್ವಾಮಿಯವರು ಜನಿಸಿದ ಭೂಮಿಯಲ್ಲೇ ತಾವು ಜನಿಸಿದ್ದು ಹೆಮ್ಮೆ ತಂದಿದೆ. ಕುಂಚಬ್ರಹ್ಮ ತಿಪ್ಪೇಸ್ವಾಮಿಯವರ ಜನ್ಮಶತಮಾನೋತ್ಸವವು ವರ್ಷ ಪೂರ್ತಿ ನಡೆಯಲಿದ್ದು, ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಎಂದು ತಿಳಿಸಿದರು. ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ, ಸಂಚಾಲಕ ರುದ್ರಣ್ಣ ಹರ್ತಿಕೋಟೆ ಹಾಜರಿದ್ದರು.