Asianet Suvarna News Asianet Suvarna News

ಮೊಟ್ಟೆ ದಾಳಿ ಬಗ್ಗೆ ತನಿಖೆ ಬಳಿಕ ಹೇಳಿಕೆ: ಸಿಎಂ ಬೊಮ್ಮಾಯಿ

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆಎಸೆತ ಸಂಬಂಧ ಯಾರು ಏನೇ ಒಪ್ಪಿಕೊಂಡರೂ ತನಿಖೆ ನಡೆಸಲಾಗುತ್ತಿದೆ. ತನಿಖೆಯ ಬಳಿಕ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

CM Basavaraj Bommai Reaction On Eggs Thrown At Siddaramaiahs Car gvd
Author
Bangalore, First Published Aug 21, 2022, 3:30 AM IST

ಬೆಂಗಳೂರು (ಆ.21): ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಸಂಬಂಧ ಯಾರು ಏನೇ ಒಪ್ಪಿಕೊಂಡರೂ ತನಿಖೆ ನಡೆಸಲಾಗುತ್ತಿದೆ. ತನಿಖೆಯ ಬಳಿಕ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಶನಿವಾರ ವಿಧಾನಸೌಧದಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಕಾಂಗ್ರೆಸ್‌ ಕಾರ್ಯಕರ್ತನೇ ಒಪ್ಪಿಕೊಂಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಭದ್ರತೆಯನ್ನು ಹೆಚ್ಚಿಸುವಂತೆ ಈಗಾಗಲೇ ಆದೇಶ ನೀಡಲಾಗಿದೆ. ಮೊಟ್ಟೆ ಎಸೆತ ವಿಚಾರದಲ್ಲಿ ಯಾರು ಏನೇ ಒಪ್ಪಿಕೊಳ್ಳಲಿ, ನಾನು ತನಿಖೆ ಮಾಡಿಸುತ್ತಿದ್ದೇನೆ. ನಾಳೆ ಇನ್ನೊಬ್ಬ ಮಾಡಿದ್ದು ಎಂದು ಕ್ಲೈಮ್‌ ಮಾಡಿಕೊಳ್ಳುತ್ತಾನೆ.ಹೀಗಾಗಿಯೇ ತನಿಖೆ ನಡೆಸಲಾಗುತ್ತಿದೆ. ತನಿಖೆ ನಂತರ ಮಾತನಾಡುತ್ತೇನೆ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿಗೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಗಡುವು ನೆನಪಿಸಿದ ಕಾಶಪ್ಪನವರ

ಸಿದ್ದುಗೆ ಮೊಟ್ಟೆ ಎಸೆತ ಬಗ್ಗೆ ತನಿಖೆ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಸಂಬಂಧ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ವಿರೋಧ ಪಕ್ಷದ ನಾಯಕರಿಗೆ ಹೆಚ್ಚಿನ ಭದ್ರತೆ ನೀಡಲು ಸೂಚಿಸಲಾಗಿದೆ. 

ಯಾರೂ ಸಹ ಕಾನೂನು ಸುವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಸಮಾಜ ವಿರೋಧಿ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲು ಹೇಳಿದ್ದೇನೆ ಎಂದರು. ಸಿದ್ದರಾಮಯ್ಯ ಅವರೊಂದಿಗೆ ತಾವು ಮಾತನಾಡಿದ್ದು, ತಮಗೆ ಅಥವಾ ತಮ್ಮ ಕಚೇರಿಯ ಸಿಬ್ಬಂದಿಗೆ ಯಾವುದಾದರೂ ಬೆದರಿಕೆ ಕರೆಗಳು ಬಂದಿದ್ದರೆ ವಿವರ ನೀಡುವಂತೆ ಕೋರಿದ್ದೇನೆ ಎಂದು ತಿಳಿಸಿದರು.

ಎಲ್ಲಾ ಸರ್ಕಾರಿ ಯೋಜನೆಗಳನ್ನೂ ಡಿಬಿಟಿ ವ್ಯಾಪ್ತಿಗೆ ತನ್ನಿ: ಸಿಎಂ ಬೊಮ್ಮಾಯಿ

ಪ್ರಚೋದನಾಕಾರಿ ಹೇಳಿಕೆ ಬೇಡ: ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಇದು ಒಂದು ಕಡೆ ನಡೆಯುತ್ತಿಲ್ಲ. ಎರಡೂ ಕಡೆಯೂ ನಡೆಯುತ್ತಿದೆ. ಯಾರೂ ಸಹ ಇನ್ನೊಬ್ಬರ ಮನ ನೋಯಿಸುವ ಪ್ರಚೋದನಾಕಾರಿ ಹೇಳಿಕೆ ನೀಡಬಾರದು. ಒಂದೊಮ್ಮೆ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಧರ್ಮ ವಿಭಜನೆಯ ಬಗ್ಗೆ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿರುವ ಬಗ್ಗೆ ಹಾಗೂ ಹೈಕೋರ್ಟ್‌ ಎಸಿಬಿ ರದ್ದು ಮಾಡಿರುವ ಬಗ್ಗೆ ಶನಿವಾರ ಪ್ರತಿಕ್ರಿಯಿಸುವುದಾಗಿ ಹೇಳಿದರು.

Follow Us:
Download App:
  • android
  • ios