ಲೋಕಾಯುಕ್ತ ಇಲ್ಲದ ಕಾರಣ ಕಾಂಗ್ರೆಸ್‌ ಆಳ್ವಿಕೆಯಲ್ಲಿ ಇಂತಹ ಹಲವು ಕೇಸ್‌ ಮುಚ್ಚಿಹೋಗಿವೆ: ಸಿಎಂ ಬೊಮ್ಮಾಯಿ

ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಲೋಕಾಯುಕ್ತ ಬಂಧನ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆಯಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

cm basavaraj bommai slams on congress over prashanth madal case gvd

ಬೆಂಗಳೂರು (ಮಾ.04): ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಲೋಕಾಯುಕ್ತ ಬಂಧನ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆಯಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರವನ್ನು ಮುಕ್ತವಾಗಿ ನಿಗ್ರಹಿಸುವ ಉದ್ದೇಶದಿಂದ ಲೋಕಾಯುಕ್ತವನ್ನು ಪುನರ್‌ ಸ್ಥಾಪನೆ ಮಾಡಿದ್ದೇವೆ. 

ಲೋಕಾಯುಕ್ತ ಇಲ್ಲದೆ ಇಂತಹ ಹಲವಾರು ಪ್ರಕರಣಗಳು ಕಾಂಗ್ರೆಸ್‌ ಆಡಳಿತದಲ್ಲಿ ನಡೆದು ಮುಚ್ಚಿಹೋಗಿವೆ. ಸರ್ವಸ್ವತಂತ್ರ ಸಂಸ್ಥೆಯಾಗಿರುವ ಲೋಕಾಯುಕ್ತ ಈ ಪ್ರಕರಣದಲ್ಲಿ ಮುಕ್ತ ಹಾಗೂ ನಿಷ್ಪಕ್ಷಪಾತ ತನಿಖೆ ಮಾಡಲಿದೆ. ಹಣ ಯಾರಿಗೆ ಸೇರಿದ್ದು? ಯಾರಿಗಾಗಿ ಸಂಗ್ರಹಿಸಿದ್ದು ಎಂಬುದು ಸೇರಿದಂತೆ ಸತ್ಯ ಹೊರಬರಬೇಕು. ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸುತ್ತಾರೆ ಎಂದರು.

ಕಾಂಗ್ರೆಸ್‌ ಇದ್ದಿದ್ರೆ ಕೇಸ್‌ ಆಗ್ತಾ ಇರ್ಲಿಲ್ಲ, ಕೇಸ್‌ ಮುಚ್ಚಿ ಹಾಕೋ ಕೆಲಸ ಮಾಡುತ್ತಿದ್ದರು: ಸಿ.ಟಿ.ರವಿ

59 ಕೇಸ್‌ ಮುಚ್ಚಿ ಹಾಕಿದ ಕಾಂಗ್ರೆಸ್‌: ಹಿಂದೆ ಕಾಂಗ್ರೆಸ್‌ನ ಸಚಿವರು ಹಾಗೂ ಶಾಸಕರ ಮೇಲೆ 59 ಆರೋಪಗಳಿದ್ದವು. ಎಸಿಬಿ ಇದ್ದಿದ್ದಕ್ಕೆ ಅವರು ಪ್ರಕರಣ ಮುಚ್ಚಿ ಹಾಕಿದರು. ಈಗ ಲೋಕಾಯುಕ್ತ ತನಿಖೆಯಾದಾಗ ಅವರದ್ದು ಸಹ ಹೊರಗಡೆ ಬರುತ್ತದೆ. ಕಾಂಗ್ರೆಸ್‌ ಲೋಕಾಯುಕ್ತ ಮುಚ್ಚಿ ಹಾಕಿರೋದಕ್ಕೆ ಇದೇ ಸಾಕ್ಷಿ. ಇವೆಲ್ಲಾ ಬಹಿರಂಗವಾಗಲಿವೆ. ನಾವು ಏನನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಬಹಳ ಸ್ಪಷ್ಟವಾಗಿ ಮಾಜಿ ಸಚಿವ ಕೆ.ಜೆ.ಜಾಜ್‌ರ್‍ ಅವರು ಎಸಿಬಿಯನ್ನೇ ಮುಂದುವರಿಸಿ ಎಂದು ವಿಧಾನಸಭೆಯಲ್ಲಿ ಹೇಳುತ್ತಾರೆ. ಅವರು ಯಾರ ಪರವಾಗಿದ್ದಾರೆ? 

ಈ ಘಟನೆ ಕಾರಣಕ್ಕೆ ತಮ್ಮದು ದೊಡ್ಡ ಸ್ವಚ್ಛ ಪಕ್ಷ ಎಂದು ಹೇಳಲು ಸಾಧ್ಯವಿಲ್ಲ. ಅವರು ಬಹಳ ಹಿಂದೆಯೂ ಭ್ರಷ್ಟಾಚಾರ ಮಾಡಿದ್ದಾರೆ. ಹಲವರ ಮೇಲೆ ಪ್ರಕರಣ ಸಹ ದಾಖಲಾಗಿದ್ದು, ತನಿಖೆ ಸಹ ಆಗುತ್ತಿದೆ. ಅವರು ಮುಚ್ಚಿ ಹಾಕಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟು ತನಿಖೆ ಮಾಡಿಸಲಾಗುವುದು ಎಂದು ಹೇಳಿದರು. ಅಬಕಾರಿ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅಬಕಾರಿ ಹಾಗೂ ಕಾರ್ಮಿಕ ಇಲಾಖೆ ಹಗರಣ ಕೂಡ ತನಿಖೆ ಮಾಡಿಸುತ್ತೇವೆ ಎಂದು ತಿಳಿಸಿದರು.

ಎಲ್ಲೆಲ್ಲೋ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣ ನಮಗೇಕೆ? ಜಿಲ್ಲೆಯಲ್ಲೇ ಸಾಕಷ್ಟು ಹಗರಣಗಳಿವೆ: ಸುಮಲತಾ

ಮಾಡಾಳ್‌ ವಿರುದ್ಧ ಐಟಿ, ಇಡಿ ತನಿಖೆ?: ಲೋಕಾಯುಕ್ತ ಬಲೆಗೆ ಬಿದ್ದಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್‌ ಅವರಿಗೆ ಈಗ ಆದಾಯ ತೆರಿಗೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಉರುಳು ಸುತ್ತಿಕೊಳ್ಳಲಿದೆ. ಶಾಸಕ ವಿರೂಪಾಕ್ಷಪ್ಪ ಮನೆ ಹಾಗೂ ಅವರ ಪುತ್ರ ಖಾಸಗಿ ಕಚೇರಿಯಲ್ಲಿ ಅನಧಿಕೃತವಾದ 8.12 ಕೋಟಿ ಹಣ ಜಪ್ತಿಯಾಗಿದೆ. ಈ ಹಣದ ಬಗ್ಗೆ ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಇ.ಡಿ. ತನಿಖೆ ಕೈಗೆತ್ತಿಕೊಳ್ಳಲಿದೆ. ಈಗಾಗಲೇ ಈ ಸಂಬಂಧ ಇ.ಡಿ.ಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios