Asianet Suvarna News Asianet Suvarna News

ಸಂಪುಟ ವಿಸ್ತರಣೆ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಣಯ: ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ವಿಚಾರದಲ್ಲಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

CM Basavaraj Bommai Talks About Karnataka Cabinet Expansion gvd
Author
First Published Jan 31, 2023, 12:30 AM IST

ಬೆಂಗಳೂರು (ಜ.31): ಸಂಪುಟ ವಿಸ್ತರಣೆ ವಿಚಾರದಲ್ಲಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧಿ ಪ್ರತಿಮೆಗೆ ಅವರ ಸ್ಮರಣಾರ್ಥ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. 

ಸಚಿವ ಸಂಪುಟ ವಿಸ್ತರಣೆ ಕುರಿತು ನಮಗಿಂತ ಹೆಚ್ಚಾಗಿ ನೀವೇ (ಮಾಧ್ಯಮದವರು) ಚರ್ಚೆ ಮಾಡುತ್ತೀರಿ. ದೆಹಲಿಗೆ ತೆರಳಿ ಏನು ಹೇಳಬೇಕೋ ಅದನ್ನು ಹೈಕಮಾಂಡ್‌ಗೆ ತಿಳಿಸಲಾಗಿದೆ. ಸಂಪುಟ ವಿಸ್ತರಣೆ ಸಂಬಂಧ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಬಜೆಟ್‌ ಮಂಡನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಜೆಟ್‌ನಲ್ಲಿ ಎಲ್ಲ ವರ್ಗದವರಿಗೆ ಆದ್ಯತೆ ನೀಡಲಾಗುತ್ತದೆ. ರೈತರು, ಮಹಿಳೆಯರು, ಕಾರ್ಮಿಕರಿಗೆ ಆದ್ಯತೆ ನೀಡಲಾಗುವುದು. ಈ ಬಾರಿಯ ಬಜೆಟ್‌ ಜನಪರವಾಗಿರಲಿದೆ ಎಂದರು.

ರಮೇಶ್‌ ಜಾರಕಿಹೊಳಿಗೆ ಸುಳ್ಳು ಹೇಳುವ ಚಟವಿದೆ: ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ

ಇಂದು ಬೊಮ್ಮಾಯಿಯಿಂದ ಕೃಷಿ ಪಂಡಿತ, ಕೃಷಿ ಪ್ರಶಸ್ತಿ ಪ್ರದಾನ: ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಜ. 31ರಂದು ಬೆಳಗ್ಗೆ 11ಕ್ಕೆ ಕೃಷಿ ಇಲಾಖೆ ನೂತನ ಯೋಜನೆಗಳ ಕಾರ‍್ಯಕ್ರಮ ಹಾಗೂ ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಯೋಜನೆಗಳಿಗೆ ಚಾಲನೆ ಮತ್ತು ಫಲಾನುಭವಿಗಳಿಗೆ ಸಹಾಯಧನ ವಿತರಿಸಲಿದ್ದಾರೆ.

ರಾಜ್ಯದ ಕೃಷಿ ಮತ್ತು ಸಂಬಂಧಿತ ಕ್ಷೇತ್ರದಲ್ಲಿ ವಿನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿದ ರೈತರಿಗೆ 9 ಕೃಷಿ ಪಂಡಿತ ಪ್ರಶಸ್ತಿ ಹಾಗೂ ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಲು 23 ಕೃಷಿ ಪ್ರಶಸ್ತಿ ಪ್ರದಾನ ಮಾಡಿ ರೈತರನ್ನು ಗೌರವಿಸಲಾಗುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 37 ಸಾವಿರ ರೈತರಿಗಿಲ್ಲ ಪಿಎಂ ಕಿಸಾನ್‌ ನಿಧಿ!

ಇದೇ ಕಾರ್ಯಕ್ರಮದಲ್ಲಿ ಶ್ರೇಷ್ಠ ಕೃಷಿ ವಿಜ್ಞಾನಿ ಹಾಗೂ ಗಾಂಧಿವಾದಿಗಳಾದ ಡಾ. ಎಸ್‌.ವಿ. ಪಾಟೀಲ ಅವರಿಗೆ ಫೆ. 2ಕ್ಕೆ ನೂರು ವರ್ಷಗಳು ತುಂಬಲಿವೆ. ಅವರ ಉತ್ತಮ ಸಾಧನೆ ಗಮನಿಸಿ ರಾಜ್ಯ ಸರ್ಕಾರ ಅವರ ಹೆಸರಿನಲ್ಲಿ ಪೀಠ ಸ್ಥಾಪಿಸಿದ್ದು, ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂದು ಕೃಷಿ ಇಲಾಖೆ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

Follow Us:
Download App:
  • android
  • ios