ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ
ಗುಜರಾತ್ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ತೀರ್ಮಾನ, ಚುನಾವಣೆ ಬಳಿಕ ದಿಲ್ಲಿ ನಾಯಕರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ: ಸಿಎಂ ಬೊಮ್ಮಾಯಿ
ಶಿವಮೊಗ್ಗ(ನ.26): ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಭೇಟಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಭೇಟಿ ಮಾಡುತ್ತೇನೆ. ಈ ಭೇಟಿ ವೇಳೆ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚಿಸಿ ನಂತರ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
Bommai Cabinet Meeting: ಡಿಸೆಂಬರ್ 19 ರಿಂದ ಚಳಿಗಾಲದ ಅಧಿವೇಶನ ಆರಂಭ
ಇದೇ ವೇಳೆ ಮುಂದಿನ ವಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೇಂದ್ರದ ವಿವಿಧ ಇಲಾಖೆಗಳ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲು ದೆಹಲಿಗೆ ತೆರಳಬಹುದು. ಆದರೆ, ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಸಂಭವ ಕಡಿಮೆ. ಗುಜರಾತ್ ವಿಧಾನಸಭೆಗೆ ಡಿ.1 ಮತ್ತು 5ರಂದು ಮತದಾನ ನಡೆಯಲಿದ್ದು, ಡಿ.8ರಂದು ಫಲಿತಾಂಶ ಪ್ರಕಟವಾಗಲಿದೆ.