* ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ* ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ* ರಾಜ್ ನಾಥ್ ಸಿಂಗ್, ಅಮಿತ್ ಶಾ ಭೇಟಿ ಮಾಡಿದ ಸಿಎಂ* ನದಿ ಜೋಡಣೆ ವಿಚಾರವೂ ಚರ್ಚೆ'

ಬೆಂಗಳೂರು(ಫೆ. 08) ದೆಹಲಿ (Newdelhi) ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ರಾಜ್ಯದ (Karnataka) ನೀರಾವರಿ ವಿಚಾರಗಳ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ವಕೀಲರ ಜತೆ ಚರ್ಚೆ ಮಾಡಿದ್ದಾರೆ.

ಕೃಷ್ಣಾ ನದಿಯ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಹಿರಿಯ ವಕೀಲರ ಜೊತೆ ಚರ್ಚೆ ಆಯ್ತು. ಸುಪ್ರೀಂ ಕೋರ್ಟ್ ನಲ್ಲಿ ಈ ಪ್ರಕರಣದಿಂದ ಇಬ್ಬರು ಜೆಡ್ಜ್ ಹಿಂದೆ ಸರಿದಿದ್ದರು. ಸುಪ್ರೀಂ ಕೋರ್ಟ್ ರಿಜಿಸ್ಟರ್ ಜನರಲ್ ಗೆ ಮನವಿ ಮಾಡಲಾಗಿದೆ. ಮುಂದಿನ ವಿಚಾರಣೆಯ ಹೊತ್ತಿಗೆ ನೇಮಕ ಮಾಡುವಂತೆ ರಿಜಿಸ್ಟರ್ ಗೆ ಮನವಿ ಮಾಡಿಕೊಳ್ಳಲಾಗಿದೆ.

ತುಂಗಭದ್ರಾ (Tunga Bhadra) ನದಿ ವಿಚಾರಕ್ಕೆ ಸಂಬಂಧಿಸಿ ನಮ್ಮ ಸಿಎಸ್ ಪತ್ರ ಬರೆಯಲಿದ್ದಾರೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಗಳಿಗೆ ಪತ್ರ ಬರೆಯಲಿದ್ದಾರೆ. ತುಂಗಭದ್ರಾದಲ್ಲಿ ಹೂಳು ಜಾಸ್ತಿ ಇದೆ. ಇದರಿಂದ ನೀರು ಸಂಗ್ರಹಣ ಕಡಿಮೆಯಾಗುತ್ತಿದೆ. ಇದನ್ನು ಸರಿದೂಗಿಸಲು ಬ್ಯಾಲೆನ್ಸಿಂಗ್ ರಿಸರ್ವಾಯಿರ್ ನಿರ್ಮಾಣ ಮಾಡುವ ಬಗ್ಗೆ ಪತ್ರ ಬರೆಯಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಸಂಪುಟಕ್ಕೆ ಸರ್ಜರಿಯೇ ಅನುಮಾನ

ನದಿ ನೀರು ಜೋಡಣೆ ವಿಚಾರಕ್ಕೆ ಸಂಬಂಧಿಸಿ ಜಲಶಕ್ತಿ ಮಂತ್ರಾಲಯದಲ್ಲಿ ಅಫಿಡೆವಿಟ್ ಸಲ್ಲಿಕೆ ಮಾಡಲಿದ್ದೇವೆ. ನಮ್ಮ ಅಭಿಪ್ರಾಯ ಕೇಳದೆ ನೀವು ಯಾವುದೇ ಯೋಜನೆ ಕೈಗೆತ್ತಿಕೊಳ್ಳಬೇಡಿ ಅಫಿಡಿವಿಟ್ ಮಾಡ್ತಿವಿ ಎಂದು ತಿಳಿಸಿದರು.

ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ್ದೆ. ಸ್ವಲ್ಪ ಸಮಯ ಮಾತಾಡಿದೆ. ಸಂಪುಟ ವಿಸ್ತರಣೆಯ(Karnataka Cabinet) ಬಗ್ಗೆ ನಡ್ಡಾ ಜೊತೆ ಮಾತಾಡಲು ಹೇಳಿದ್ದಾರೆ. ಅಗ್ರಸೀವ್ ಆಗಿ ಕೆಲಸ ಮಾಡಲು ಶಾ ಸೂಚನೆ ನೀಡಿದ್ದಾರೆ. ಬಜೆಟ್ ಮತ್ತು ಕೆಲಸದ ವಿಚಾರದಲ್ಲಿ ಅಗ್ರೀಸೀವ್ ಆಗಿ ಕೆಲಸ ಮಾಡಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಅಂತರಾಜ್ಯ ಜಲವಿವಾದಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಕೃಷ್ಣ ನದಿ ನ್ಯಾಯಾಧೀಕರಣದ ಆದೇಶ ಅಧಿಸೂಚನೆಗೆ ಮನವಿ ಮಾಡಿಕೊಳ್ಳಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ಅಧಿಸೂಚನೆ ಹೊರಡಿಸುವ ಬಗ್ಗೆ ವಿಚಾರಣೆಗೆ ನ್ಯಾಯಾಧೀರ ನೇಮಕ ಮಾಡಬೇಕು. ಇಲ್ಲದಿದ್ದರೆ ಓಪನ್ ಕೋರ್ಟ್ ನಲ್ಲಿ ಮೆನ್ಸನ್ ಮಾಡಲು ನಿರ್ಧಾರ ಮಾಡಲಾಗಿದೆ. ಮೇಕೆದಾಟು ವಿಚಾರವಾಗಿ ನಮ್ಮ ನಿಲುವು ಗಟ್ಟಿ ಮಾಡಿಕೊಂಡಿದ್ದೇವೆ. ತಮಿಳುನಾಡಿನ ಗುಂಡಾರು ವೈಗಾರ್ ಯೋಜನೆಗೆ ವಿರೋಧವಿದೆ. ಹೈಡ್ರೋ ಪರರ್ ಯೋಜನೆಗೂ ವಿರೋಧ ಮಾಡಲು ನಿರ್ಧರಿಸಿದ್ದೇವೆ. ಕಾವೇರಿ ನಿಯಂತ್ರಣ ಪ್ರಾಧಿಕಾರದಲ್ಲಿ ಮೇಕೆದಾಟು ಯೋಜನೆ ಚರ್ಚೆಯಾಗಬೇಕು. ಮುಂದೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿದ್ದೇವೆ ಎಂದು ತಿಳಿಸಿದರು.

ಮಹದಾಯಿ ಬಗ್ಗೆ ಚರ್ಚೆಯಾಗಿದೆ. ಕೋರ್ಟ್ ನಲ್ಲಿ ಬೇಗ ವಿಚಾರಣೆ ನಡೆಯಬೇಕಿದೆ. ಡಿಪಿಆರ್ ನೀಡಿದ್ದೇವೆ, ಕೆಲವು ಸ್ಪಷ್ಟನೆ ಕೇಳಿದ್ರು ನೀಡಿದ್ದೇವೆ ಕೆನಾಲ್ ರೆಡಿಯಾಗಿದೆ ಎಂದರು.

ಬಜೆಟ್ ನಲ್ಲಿ ಮಂಡನೆಯಾದ ಕೇಂದ್ರ ಸರ್ಕಾರದ ನದಿಜೋಡಣೆಗೆ ವಿಚಾರಕ್ಕೆ ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ. ಗೋದಾವರಿ, ಕೃಷ್ಣಾ, ಪೆನ್ನಾರ್ ನದಿಜೋಡಣೆಗೆ ಸಿಎಂ ವಿರೋಧ ವ್ಯಕ್ತಪಡಿಸಿದರು. ಎಲ್ಲಿಯವರೆಗೆ ನಮ್ಮ ಪಾಲಿನ ನೀರಿನ ಬಗ್ಗೆ ಹಂಚಿಕೆ ಅಂತಿಮವಾಗುದಿಲ್ಲವೋ, ಅಲ್ಲಿಯವರೆಗೆ ನಮ್ಮ ವಿರೋಧ ವ್ಯಕ್ತಪಡಿಸುತ್ತೇವೆ ಎಂದರು.

ನಿರ್ಮಲಾ ಸೀತಾರಾಮನ್ ಜೊತೆಯೂ ಮಾತನಾಡಿದ್ದೇನೆ. ಎರಡು ರಾಜ್ಯಗಳು ಒಪ್ಪಿದರೆ ಮಾತ್ರ ಇದು ಸಾಧ್ಯ ಎಂದು ತಿಳಿಸಿದ್ದಾರೆ ಎಂದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದರು.

ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿದ ಸಾಧನೆಯ ಕಿರುಹೊತ್ತಿಗೆ ಹಾಗೂ ತಮ್ಮ ಸರ್ಕಾರದ ಯೋಜನೆಗಳಿಂದ ಬಡವರು ಹಾಗೂ ದೀನ-ದಲಿತರಿಗೆ ಮುಂದಿನ ದಿನಗಳಲ್ಲಿ ಆಗುವ ಲಾಭ ಹಾಗೂ ಬದಲಾವಣೆ ಕುರಿತು ಐಸೆಕ್ ಸಂಸ್ಥೆ ನೀಡಿರುವ ಅಧ್ಯಯನ ವರದಿಯನ್ನು ನೀಡಿದರು. 

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಶಿವಕುಮಾರ ಉದಾಸಿ, ಉಮೇಶ್ ಜಾದವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಮುಖ್ಯಮಂತ್ರಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಅನುಮೋದನೆ ನೀಡಲು ಮನವಿ ಮಾಡಿಕೊಂಡರು.

ಸಂಗೊಳ್ಳಿಯಲ್ಲಿ 189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮುಕ್ತಾಯದ ಹಂತದಲ್ಲಿದ್ದು ಈ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸೈನಿಕ್ ಸ್ಕೂಲ್ ಸೊಸೈಟಿಯ ಅಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಸೈನಿಕ ಸ್ಕೂಲ್ ಮಾನದಂಡಗಳ ಪಾಲನೆಗೆ ಕ್ರಮ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಈ ಶಾಲೆಯನ್ನು ಸೈನಿಕ್ ಸ್ಕೂಲ್ ಸೊಸೈಟಿಯ ಅಧೀನಕ್ಕೆ ಒಳಪಡಿಸಲು ಅನುಮೋದನೆ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಇತರ ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.