Assembly election: ಸಿದ್ದರಾಮಯ್ಯ ನಾಯಿಮರಿ ಹೇಳಿಕೆಗೆ ಜ್ಞಾನಿಯಂತೆ ಉತ್ತರಿಸಿದ ಸಿಎಂ ಬೊಮ್ಮಾಯಿ: ಸಿದ್ದುಗೆ ನಾಚಿಕೆ..!
ವಿಪಕ್ಷ ನಾಯಕ ಸಿದ್ದರಾಮಯ್ಯ ನಾಯಿಮರಿ ಹೇಳಿಕೆಗೆ ಸಾತ್ವಿಕ ಜ್ಞಾನಿಯಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಗುರವಾಗಿ ಮಾತನಾಡಿದ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗುವಂತೆ ಪ್ರತ್ಯುತ್ತರ ನೀಡಿದ್ದಾರೆ.
ಬಳ್ಳಾರಿ (ಜ.04): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ನಾಯಿಮರಿಯಂತೆ ಇರುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಾತ್ವಿಕ ಜ್ಞಾನಿಯಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಗುರವಾಗಿ ಮಾತನಾಡಿದ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗುವಂತೆ ಪ್ರತ್ಯುತ್ತರ ನೀಡಿದ್ದಾರೆ.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ನಾಯಕರ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಸಿಎಂ ಬೊಮ್ಮಾಯಿ ಅವರು ನರೇಂದ್ರ ಮೋದಿ ಅವರ ಮುಂದೆ ನಾಯಿಮರಿಯಂತೆ ಇರುತ್ತಾರೆ. ರಾಜ್ಯಕ್ಕೆ ಒಂದಿಷ್ಟು ಅನುದಾನವನ್ನು ತರುವ ಸಾಮರ್ಥ್ಯವೂ ಇಲ್ಲ ಎಂದು ಹೇಳಿಕೆ ನೀಡಿದ್ರು. ಆದರೆ, ಈ ವಿಚಾರದ ಇಂದು ಬೆಳಗ್ಗೆ ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾತ್ವಿಕ ವ್ಯಕ್ತಿಯಂತೆ, ಜ್ಞಾನಿಯಂತೆ ಶಾಂತ ಸ್ವರೂಪದಿಂದಲೇ ಉತ್ತರ ನೀಡಿದ್ದಾರೆ. ಇದರಿಂದ ಸಿಎಂ ಬಗ್ಗೆ ಲಘುವಾಗಿ ಮಾತನಾಡಿದ್ದವರೇ ಮರುಕ ಪಡುವಂತೆ ಮಾಡಿದ್ದಾರೆ.
Assembly election: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಂಕ್ರಾಂತಿಗಿಲ್ಲ: ಸಿದ್ದರಾಮಯ್ಯ
ಜನರಿಗಾಗಿ ನಿಯತ್ತಾಗಿ ಕೆಲಸ ಮಾಡ್ತೀನಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ. ಇಂತಹ ಕೀಳುಮಟ್ಟದ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿಯಾಗಿದೆ. ನಾನು ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ಜನರ ಪರವಾಗಿ ನಿಯತ್ತನ್ನ ಉಳಿಸಿಕೊಂಡು ಹೋಗುವೆ. ಅವರ ಹಾಗೆ ಸಮಾಜ ಒಡೆಯುವ ಕೆಲಸ ಮಾಡಲ್ಲ. ಸೌಭಾಗ್ಯ ಕೊಡುತ್ತೇವೆ ಅಂತಾ ದೌರ್ಭಾಗ್ಯ ಕೊಟ್ಟಿಲ್ಲ ಎಂದು ಶಾಂತ ಚಿತ್ತರಾಗಿಯೇ ಮುಖ್ಯಮಂತ್ರಿ ಬೊಮ್ಮಾಯಿ ಉತ್ತರ ನೀಡಿದ್ದಾರೆ.
ಬಹಿರಂಗ ಚರ್ಚೆಗೆ ವಿಧಾನಸಭೆಗಿಂದ ದೊಡ್ಡ ವೇದಿಕೆ ಬೇಕಾ?: ರಾಜ್ಯದ ಅಭಿವೃದ್ಧಿ ಬಗ್ಗೆ ಮಾತನಾಡಲು ಸಿಎಂ ಬೊಮ್ಮಾಯಿ ಅವರಿಗೆ ಬಹಿರಂಗವಾಗಿ ವೇದಿಕೆಗೆ ಆಹ್ವಾನಿಸುತ್ತೇನೆ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಗ್ಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ವಿಧಾನಸಭೆಗಿಂತ ದೊಡ್ಡ ವೇದಿಕೆ ಚರ್ಚೆಗೆ ಯಾವುದು ಇದೆ? ಇತ್ತೀಚಿಗಷ್ಟೇ ಬೆಳಗಾವಿಯ ಸುವರ್ಣ ಸೌಧದಲ್ಲಿ 15 ದಿನ ಸದನ ನಡೆಯಿತು. ಅದಕ್ಕಿಂತಲೂ ಹಿಂದೆಯೂ ಅಧಿವೇಶನ ನಡೆದಿದೆ. ವೇದಿಕೆ ಇದ್ದಾಗ ಅಲ್ಲಿಯೇ ಚರ್ಚೆ ಮಾಡಲಿಲ್ಲ. ಇನ್ನು ಹೊರಗೆ ರಾಜಕೀಯ ಕಾರ್ಯಕ್ರಮಗಳಲ್ಲಿ ಈ ತರಹದ ಚರ್ಚೆಯ ಬಗ್ಗೆ ಹೇಳಿಕೆ ನೀಡುತ್ತಾರೆ. ವಿಧಾನ ಸೌದಕ್ಕಿಂತ ಪವಿತ್ರ ವೇದಿಕೆ ಬೇಕಾ.? ಇವರಿಗೆ ಎಂದು ಹೇಳಿದರು.
ಬರೀ ಮಾತಾಡೋದಲ್ಲ; ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪನೇ ಸ್ಪರ್ಧಿಸಿ ಗೆದ್ದು ತೋರಿಸಲಿ
ಸಿದ್ದರಾಮಯ್ಯ ನಯಾಪೈಸೆ ಅನುದಾನ ತಂದಿರಲಿಲ್ಲ: ಈ ಹಿಂದೆ ಮನಮೋಹನ ಸಿಂಗ್ ಪ್ರಧಾನಿ ಆಗಿದ್ದಾಗ ಸಿದ್ದರಾಮಯ್ಯನಿಗೆ ಒಂದು ನಯಾಪೈಸೆ ಅನುದಾನ ತರಲು ಸಾಧ್ಯವಾಗಿಲ್ಲ. ರಾಜ್ಯಕ್ಕೆ ಅವರ ಕೊಡುಗೆ ಎನಿಲ್ಲ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕೀಲೋ ಮೀಟರ್ ಹೆದ್ದಾರಿ ಕೊಡುಗೆ ನೀಡಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ ನೀಡಿದ್ದಾರೆ. ಮಂಗಳೂರು ಕಾರವಾರ ಬಂದರು ಮೋದಿ ಕೊಡುಗೆಯಾಗಿದೆ. ಕಳಸಾ ಬಂಡೂರಿಗೆ ಅನುಮೋದನೆ ನೀಡಿದ್ದು, ಅಪರ್ ಭದ್ರಾ ಯೋಜನೆ ನೀಡಿದ್ದಾರೆ. ಎಲ್ಲ ಜಿಲ್ಲೆಗಳಿಗೆ ಸ್ಮಾರ್ಟ್ ಸಿಟಿ ಕೊಟ್ಟಿದ್ದಾರೆ. ಮೋದಿ ಕೊಡುವ ಕಾಮಧೇನು ಆಗಿದ್ದು, ಅದರ ಬಗ್ಗೆ ಜ್ಞಾನ ಇಲ್ಲ. ರಾಜಕೀಯ ಹೇಳಿಕೆ ಕೊಡುವುದು ಸಿದ್ದರಾಮಯ್ಯ ರೂಡಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಭೂಮಿಪೂಜೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಳ್ಳಾರಿಯ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಂದಾಲ್ ಸಹಯೋಗದೊಂದಿಗೆ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ 400 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು. ಸಚಿವ ಬಿ.ಶ್ರೀ ರಾಮುಲು, ಶಾಸಕರಾದ ಬಿ.ನಾಗೇಂದ್ರ, ಸೋಮಶೇಖರೆಡ್ಡಿ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.