ಕೊರೋನಾ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.​ ಯಡಿಯೂರಪ್ಪ ಡಿಸ್ಚಾರ್ಜ್ ಆಗಿದ್ದಾರೆ, ಬಳಿಕ ಬಿಎಸ್‌ವೈ ಅವರ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದು, ಅದು ಈ ಕೆಳಗಿನಂತಿದೆ.

ಬೆಂಗಳೂರು, (ಆ.10): ಕೊರೋನಾ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.​ ಯಡಿಯೂರಪ್ಪ ಡಿಸ್ಚಾರ್ಜ್​​ ಆಗಿದ್ದಾರೆ.

Add Asianetnews Kannada as a Preferred SourcegooglePreferred

ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಆಗಸ್ಟ್ 2 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದು ವಾರಗಳ ಕಾಲ ಚಿಕಿತ್ಸೆ ಪಡೆದ ಬಿಎಸ್​ವೈ ಇಂದು (ಸೋಮವಾರ) ಕೊರೋನಾ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ.

ಚಿತ್ರಗಳು: ಕೊರೋನಾ ಗೆದ್ದ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

ಇನ್ನು ಬಿಎಸ್​ವೈ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸಿಎಂ ಯಡಿಯೂರಪ್ಪ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದು, ಅದು ಈ ಕೆಳಗಿನಂತಿದೆ.

ಬಿಎಸ್‌ವೈ ಫಸ್ಟ್ ರಿಯಾಕ್ಷನ್
ಟ್ವೀಟ್ ಮಾಡಿರುವ ಯಡಿಯೂರಪ್ಪ "ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ" ಎಂದು ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.

Scroll to load tweet…

ಆಗಸ್ಟ್ 2ರ ಭಾನುವಾರ ಯಡಿಯೂರಪ್ಪಗೆ ಕೋವಿಡ್ ಸೋಂಕು ಇರುವುದು ಖಚಿತವಾಗಿತ್ತು. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದರು.