ಬೆಂಗಳೂರು, [ಜ.15]: ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಗಿದೆ. ಇದಕ್ಕೆ ಪೂರಕವೆಂಬಂತೆ ಇಂದು ಇಬ್ಬರು ಪಕ್ಷೇತರ ಶಾಸಕರಾದ ಆರ್. ಶಂಕರ್ ಹಾಗೂ ನಾಗೇಶ್ ಮೈತ್ರಿ ಸರ್ಕಾರಕ್ಕೆ ನೀಡದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.

"

ಸರ್ಕಾರಕ್ಕೆ ಪಕ್ಷೇತರರ ಬೆಂಬಲ ವಾಪಸ್: ಸಂ‘ಕ್ರಾಂತಿ’ ಸಕ್ಸಸ್!

ಇದ್ರಿಂದ ಸರ್ಕಾರದ ಸಂಖ್ಯೆ 120 ರಿಂದ 118ಕ್ಕೆ ಕುಸಿದಿದೆ. ಮತ್ತೊಂದೆಡೆ ಕೆಲ ಕಾಂಗ್ರೆಸ್ ಅತೃಪ್ತ ಶಾಸಕರು ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇದ್ರಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಫುಲ್ ಟೆನ್ಷನ್ ಆಗಿದ್ದು, ಬೆಳಗ್ಗೆಯಿಂದ ತಮ್ಮ ಕಾರ್ಯಕ್ರಮಗಳನ್ನು ರದ್ದುಪಡಿಸಿ ಕಾಂಗ್ರೆಸ್ ಹಿರಿಯ ನಾಯಕರುಗಳ ಭೇಟಿಗೆ ಅತ್ತಂದಿತ್ತ ಓಡಾಡುತ್ತಿದ್ದಾರೆ.

ಈಗ ಇಬ್ಬರು ಪಕ್ಷೇತರ ಶಾಸಕರು ಬೆಂಬಲ ವಾಪಸ್ ಪಡೆದ ಬೆನ್ನಲ್ಲೇ ಮತ್ತಷ್ಟು ಒತ್ತಡಕ್ಕೆ ಸಿಲುಕಿರುವ ಸಿಎಂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು  ಭೇಟಿ ಮಾಡಿದ್ದು, ರಾಜ್ಯ ರಾಜಕಾರಣದ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ಬಳಿಕ ಮಾತನಾಡಿರುವ ಸಿಎಂ ಇಬ್ಬರು ಪಕ್ಷೇತರರ ಬೆಂಬಲ ವಾಪಸ್ ನಿಂದ ಏನು ತೊಂದರೆ ಇಲ್ಲ. ಈ ಬೆಳವಣಿಗೆಗಳನ್ನು ನೋಡಿ ಎಂಜಾಯ್ ಮಾಡುತ್ತಿದ್ದೇನೆ ಎಂದರು.

ಅಷ್ಟೇ ಅಲ್ಲದೇ ಇಂದು ಬೆಳಗ್ಗೆ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಸರ್ಕಾರವನ್ನು ಉಳಿಸಿಕೊಳ್ಳುವ ಮುಂದಿನ ದಾರಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಣಕೊಂದು ಬೆಳವಣಿಗೆ ಕುಮಾರಸ್ವಾಮಿ ಅವರು ಫುಲ್ ಟೆನ್ಷನ್ ನಲ್ಲಿದ್ದು, ಏನು ಆಗಿಲ್ಲ ರೀತಿಯಲ್ಲಿ ಮಾತನಾಡುತ್ತಿದ್ದಾರೆ.