ಈಗಾಗಲೇ ಸಹಕಾರ ಬ್ಯಾಂಕ್‌ನಲ್ಲಿರುವ ರೈತರ ಸಾಲ ಮನ್ನಾ ಮಾಡಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಸಿಹಿ ಸುದ್ದಿ ನೀಡುವುದಾಗಿ ಹೇಳಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮಾಡ್ತಾರಂತೆ ಮನ್ನಾ!

ಸಾಗರ: ನ.20ರ ನಂತರ ರಾಜ್ಯದ 44 ಲಕ್ಷ ರೈತ ಕುಟುಂಬಗಳ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿ ಅವರಿಗೆ ಬೆಂಗಳೂರಿನಲ್ಲಿ ಋುಣಭಾರಮುಕ್ತ ಪತ್ರ ವಿತರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ನಗರದಲ್ಲಿ ಲೋಕಸಭಾ ಉಪಚುನಾವಣೆಯ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 22 ಲಕ್ಷ ರೈತಕುಟುಂಬಗಳ ಸಹಕಾರಿ ಬ್ಯಾಂಕ್‌ನ ಸಾಲ ಮನ್ನಾ ಮಾಡಲಾಗಿದೆ. ನಾವು ರೈತರ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಲು ಹೊರಟರೆ ಕೇಂದ್ರ ಸರ್ಕಾರವನ್ನು ದುರುಪಯೋಗಪಡಿಸಿಕೊಂಡು ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಯಾರ‍್ಯಾರು ಎಷ್ಟೇಷ್ಟುಅರಣ್ಯ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ನನ್ನ ಬಳಿ ಇದ್ದು, ಸಮಯ ಬಂದಾಗ ಬಹಿರಂಗ ಪಡಿಸುವುದಾಗಿ ಹೇಳಿದರು.