ಬೆಂಗಳೂರು, [ಜ.26]: ಬಿಡದಿ ಬಳಿ ಇರುವ ಈಗಲ್​​ಟನ್​ ರೆಸಾರ್ಟ್​​​​​ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ ಎನ್​​ ಗಣೇಶ್​​ ಹಲ್ಲೆ ಮಾಡಿ ವಾರ ಕಳೆದಿದ್ದು, ಆನಂದ್ ಇನ್ನೂ ಚೇತರಿಸಿಕೊಂಡಿಲ್ಲ. 

 ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರನ್ನು ಇಂದು [ಶನಿವಾರ] ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಆಸ್ಪತ್ರೆಗೆ ಬಂದ DKS ಜತೆ ಗಲಾಟೆ ಬಗ್ಗೆ ಅರ್ಧ ಗಂಟೆ ಮಾತನಾಡಿದ ಆನಂದ್ ಸಿಂಗ್

ಮುಂಬೈನಲ್ಲಿ ರಾಮನಗರ ಪೋಲಿಸರಿಗೆ ಚೆಳ್ಳೆ ಹಣ್ಣು ತಿನ್ನಿಸಿದ ಕಂಪ್ಲಿ ಶಾಸಕ ಗಣೇಶ್

25 ನಿಮಿಷಗಳ ಕಾಲ ಆನಂದ್ ಸಿಂಗ್​​​​​​ ಅವರೊಡನೆ ಮಾತುಕತೆ ನಡೆಸಿದ ಕುಮಾರಸ್ವಾಮಿ, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯಿಂದ ಹೊರಬಂದ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದೆ ಹೊರಟರು.

ಈ ಘಟನೆ ಬಗ್ಗೆ ಗಣೇಶ್ ವಿರುದ್ಧ ದೂರು ದಾಖಲಾಗಿದ್ದು, ಅವರನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ.