ಕಾಂಗ್ರೆಸ್ ಅಭ್ಯರ್ಥಿಗಳ ಖರೀದಿಗೆ ಸಿಎಂ ಕೆಸಿಆರ್ ಯತ್ನ: ಡಿಕೆಶಿ ಆರೋಪ
ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೆಳೆಯಲು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಯತ್ನಿಸುತ್ತಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಹೈದರಾಬಾದ್ (ಡಿ.03): ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೆಳೆಯಲು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಯತ್ನಿಸುತ್ತಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ‘ಸ್ವತಃ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರೇ ನೇರವಾಗಿ ನಮಗೆ ಬಿಆರ್‌ಎಸ್ ಸೇರುವಂತೆ ಆಹ್ವಾನ ನೀಡಿದ್ದಾರೆ ಎಂದು ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳು ನನಗೆ ಮಾಹಿತಿ ನೀಡಿದ್ದಾರೆ.
ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಮತ್ತೊಬ್ಬ ನಾಯಕಿ ರೇಣುಕಾ ಚೌಧರಿ ಮಾತನಾಡಿ, ‘ಕಳೆದ ವರ್ಷ ನಮ್ಮ ಪಕ್ಷದ 12 ಶಾಸಕರನ್ನು ಸೆಳೆದು ಬಿಆರ್‌ಎಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಈ ಬಾರಿಯೂ ಅವರು ಅಂಥ ಯತ್ನ ಮುಂದುವರೆಸಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿರುವ ಕಾರಣ, ಬಿಆರ್‌ಎಸ್ ನಾಯಕರೇ ತಮ್ಮ ಅಭ್ಯರ್ಥಿಗಳನ್ನು ಉಳಿಸಿಕೊಳ್ಳಲು ಶ್ರಮಿಸಬೇಕಾಗಿ ಬರಬಹುದು. ಏಕೆಂದರೆ ಕೆಲ ಅಭ್ಯರ್ಥಿಗಳು ಈಗಾಗಲೇ ಅಗತ್ಯಬಿದ್ದರೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.
ಆಸ್ತಿಗಳ ಡಿಜೀಟಲೀಕರಣ ಯೋಜನೆ ಕನಕಪುರಕ್ಕೆ ವಿಸ್ತರಣೆ: ಡಿ.ಕೆ.ಶಿವಕುಮಾರ್
‘ಅತಂತ್ರ’ ಸ್ಥಿತಿ ನಿಭಾಯಿಸಲು ಡಿಕೆಶಿ ತೆಲಂಗಾಣಕ್ಕೆ: ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಡಿ.3ರ ಭಾನುವಾರ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್ ಶಾಸಕರನ್ನು ನಿಭಾಯಿಸಲು ಶನಿವಾರವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆಲಂಗಾಣಕ್ಕೆ ತೆರಳಲಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಒಂದೊಮ್ಮೆ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಮಾಡುವ ಸಾಧ್ಯತೆಯಿದೆ.
ಒಂದು ರುಪಾಯಿ ಕೂಡ ಲಂಚ ಕೊಡಬೇಡಿ: ಸಾರ್ವಜನಿಕರಿಗೆ ಡಿಕೆಶಿ ಖಡಕ್ ಎಚ್ಚರಿಕೆ
ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. 119 ವಿಧಾನಸಭೆ ಸದಸ್ಯರನ್ನು ಹೊಂದಿರುವ ತೆಲಂಗಾಣದ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಮಹತ್ವದ್ದಾಗಿದೆ. ಶೇ.70.60 ರಷ್ಟು ಮತದಾನ ದಾಖಲಾಗಿರುವುದರಿಂದ ಕಾಂಗ್ರೆಸ್ ಅಥವಾ ಬಿಆರ್‌ಎಸ್ ಯಾವ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ ಎಂಬ ಕಾತುರ ಉಂಟಾಗಿದೆ. ಫಲಿತಾಂಶದ ಬಳಿಕ ಡಿ.ಕೆ. ಶಿವಕುಮಾರ್ ಯಾವ ನಡೆಗಳನ್ನು ಅನುಸರಿಸಲಿದ್ದಾರೆ ಎಂಬುದು ಸಹ ಕುತೂಹಲ ಹೆಚ್ಚಿಸಿದೆ.