ಶಿವಮೊಗ್ಗ, [ಫೆ.23]: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಹಾಲಿ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು [ಶನಿವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, 'ಸಿಎಂ ಕುಮಾರಸ್ವಾಮಿಯವರೂ ಕಾಂಗ್ರೆಸ್​​​​ನಿಂದ ಋಣ ಮುಕ್ತರಾದರೆ ಸಾಕು ಎನ್ನುತ್ತಿದ್ದಾರೆ. ಸ್ವತಃ ಕುಮಾರಸ್ವಾಮಿಯವರೆ ನನ್ನ ಬಳಿ ಹೇಳಿಕೊಂಡಿದ್ದಾರೆ' ಎಂದು ಆಶ್ಚರ್ಯಕರ ಹೇಳಿಕೆ ನೀಡಿದರು.

ಕುಮಾರಸ್ವಾಮಿ ಇದು ಸುಳ್ಳು ಅಂತಾ ಆತ್ಮಸಾಕ್ಷಿಗೆ ಅನುಗುಣವಾಗಿ ಹೇಳಲಿ ನೋಡೋಣ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ್ರೆ ಚೆನ್ನಾಗಿತ್ತು ಎಂದು ಜೆಡಿಎಸ್ ಮಂತ್ರಿಗಳೇ ತಲೆ ಚಚ್ಚಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರು ಹೆಣೆದ ಬಲೆಯಲಿ ಸಿಕ್ಕಿಕೊಂಡು ಒದ್ದಾಡುತ್ತಿದ್ದಾರೆ ಎಂದರು.