ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ. ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕ ನೀಡಿದ್ದಾರೆ.

ಬೆಂಗಳೂರು (ಮಾ.1): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟವಟಿಕೆ ಆರಂಭವಾಗಿದೆ. ರಾಜ್ಯಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಹುಮ್ಮಸ್ಸಿನಲ್ಲಿದೆ. ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಎದುರಾಳಿ ಪಕ್ಷವನ್ನು ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇವೆಲ್ಲದರ ಮಧ್ಯೆ ಇದೀಗ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ. ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್ ನ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ. 136 ಸ್ಥಾನವಿದ್ದರೂ ಬಿಜೆಪಿ ಸರ್ಕಾರ ಅಲ್ಲಾಡಿಸಲು ಪ್ರಯತ್ನ ಪಡುತ್ತಿದೆ. ಸರ್ಕಾರಗಳನ್ನ ಬೀಳಿಸುವುದು ಬಿಜೆಪಿಗೆ ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸರ್ಕಾರ ಅಂತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.