ಮುಡಾ ಕೇಸ್‌ಗೆ ಹೈಕೋರ್ಟ್ ಶಾಕ್ ಬೆನ್ನಲ್ಲೇ ತುರ್ತು ಸಭೆ, ಶಾಸಕರ ಬೆಂಬಲವೋ? ಸಿಎಂ ರಾಜೀನಾಮೆಯೋ?

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ಹೈಕೋರ್ಟ್ ತಡೆ ನೀಡದೆ ತನಿಖೆಗೆ ಒಪ್ಪಿಗೆ ನೀಡಿದೆ. ಇದರ ಬೆನ್ನಲ್ಲೇ 24 ಗಂಟೆಯೊಳಗೆ ಶಾಸಕಾಂಗ ಪಕ್ಷ ಸಭೆ ನಡೆಸಲು ಹೈಕಮಾಂಡ್ ಸೂಚನೆ , ಕ್ಯಾಬಿನೆಟ್‌ ಸಭೆ ಕಡೆದ ಸಿಎಂ ಸಿದ್ದರಾಮಯ್ಯ .

CM siddaramaiah called cabinet meeting after Karnataka HC decision about muda scam verdict gow

ಬೆಂಗಳೂರು (ಸೆ24): ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ಹೈಕೋರ್ಟ್ ತಡೆ ನೀಡದೆ ತನಿಖೆಗೆ ಒಪ್ಪಿಗೆ ನೀಡಿರುವುದು ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟಿದೆ. ಇದರ ಬೆನ್ನಲ್ಲೇ  24 ಗಂಟೆಯೊಳಗೆ ಶಾಸಕಾಂಗ ಪಕ್ಷ ಸಭೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ. ಹೈಕಮಾಂಡ್ ಸೂಚನೆ ಮೇರೆಗೆ ಶಾಸಕಾಂಗ ಪಕ್ಷದ ಸಭೆ ನಿಗಧಿ ಹಿನ್ನೆಲೆ  ಇಂದು ರಾತ್ರಿ ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಲಿದ್ದಾರೆ.

ಶಾಸಕಾಂಗ ಪಕ್ಷ ಸಭೆ ನಡೆಸಲು ಹೈಕಮಾಂಡ್‌ ಸೂಚನೆ ನೀಡಿದ   ಬೆನ್ನಲ್ಲೇ ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜ್ಯ ಸಚಿವ ಸಂಪುಟದ  ಸಭೆ ಕರೆದಿದ್ದಾರೆ. ಕ್ಯಾಬಿನೆಟ್‌ ಸಭೆಯ ಬಳಿಕ ಶಾಸಕಾಂಗ ಪಕ್ಷ ಸಭೆ ಮಹತ್ವದ ಸಭೆ ನಡೆಯಲಿದೆ.

'ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆಯುತ್ತಿದೆ..' ಡಿಸಿಎಂ ಡಿಕೆ ಶಿವಕುಮಾರ್‌!

ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಸಿದ್ದರಾಮಯ್ಯ ಏನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದು ಸದ್ಯಕ್ಕಿರುವ ಕುತೂಹಲ. ಹೈಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಶಾಸಕಾಂಗ ಪಕ್ಷ ಸಭೆ ನಡೆಸಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಲು ಪಕ್ಷ ಮುಂದಾಗಿದೆ.

Breaking: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್; ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಇನ್ನೊಂದು ಕಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಹೈಕೋರ್ಟ್‌ನಿಂದ ಮುಡಾ ಹಗರಣದ ತನಿಖೆ ಎದುರಿಸುವಂತೆ ಆದೇಶ  ಹೊರಬಿದ್ದ ಬೆನ್ನಲ್ಲೇ ನೈತಿಕ ಹೊಣೆಗಾರಿಕೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷ ಒತ್ತಾಯಿಸುತ್ತಿದೆ.

Latest Videos
Follow Us:
Download App:
  • android
  • ios