ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರಕ್ಕಾಗಿ ಮೇ 21ರಿಂದ ಮೂರು ದಿನ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ಮುಗಿಯುತ್ತಿದ್ದಂತೆಯೇ ಮೇ 24ರ ಸಂಜೆ ಅಥವಾ ಮೇ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ದೆಹಲಿಗೆ ತೆರಳಲಿದ್ದಾರೆ. 

ಬೆಂಗಳೂರು(ಮೇ.21):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆ ಕುರಿತು ಹೈಕಮಾಂಡ್‌ನೊಂದಿಗೆ ಚರ್ಚಿಸಲು ರಾಜ್ಯ ನಾಯಕರು ಮೇ 24ರ ನಂತರ ದೆಹಲಿಗೆ ತೆರಳಲಿದ್ದಾರೆ.

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರಕ್ಕಾಗಿ ಮೇ 21ರಿಂದ ಮೂರು ದಿನ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ಮುಗಿಯುತ್ತಿದ್ದಂತೆಯೇ ಮೇ 24ರ ಸಂಜೆ ಅಥವಾ ಮೇ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಶನಿವಾರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಂಟೂ ಮಂದಿ ಸಚಿವರಿಗೆ ಖಾತೆ ಹಂಚಿಕೆ ವಿಚಾರದ ಚರ್ಚೆಯೂ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

ತನ್ಮೂಲಕ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ನಂತರವೇ ಎಲ್ಲ ಸಚಿವರಿಗೂ ಒಟ್ಟಿಗೆ ಖಾತೆ ಹಂಚಿಕೆಯಾಗುವ ಸಾಧ್ಯತೆಗಳಿವೆ.