ಹೈಕೋರ್ಟ್‌ನಲ್ಲಿ 'ಗ್ಯಾರಂಟಿ' ಯೋಜನೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ: ಕಾರಣವೇನು?
‘ಐದು ಗ್ಯಾರಂಟಿ’ ಯೋಜನೆಗಳು ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿದ್ದು, ಅವು ಸಂವಿಧಾನ, ಚುನಾವಣಾ ಆಯೋಗದ ನಿಯಮಗಳಿಗೆ ಅನುಗುಣವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಮುಂದೆ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು (ಸೆ.22): ‘ಐದು ಗ್ಯಾರಂಟಿ’ ಯೋಜನೆಗಳು ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿದ್ದು, ಅವು ಸಂವಿಧಾನ, ಚುನಾವಣಾ ಆಯೋಗದ ನಿಯಮಗಳಿಗೆ ಅನುಗುಣವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಮುಂದೆ ಸಮರ್ಥಿಸಿಕೊಂಡಿದ್ದಾರೆ.
ಗ್ಯಾರಂಟಿ ಯೋಜನೆ ಮೂಲಕ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಸಿದ್ದರಾಮಯ್ಯ ಆಯ್ಕೆ ಆಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕೆ.ಎಂ.ಶಂಕರ್‌ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ಸಂಬಂಧ ಹೈಕೋರ್ಟ್‌ಗೆ ಸಲ್ಲಿಸಿರುವ ಲಿಖಿತ ಪ್ರಮಾಣ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಲಿಖಿತ ಹೇಳಿಕೆಯನ್ನು ದಾಖಲೆಗೆ ತೆಗೆದುಕೊಂಡ ನ್ಯಾಯಮೂರ್ತಿ ಸುನಿಲ್‌ದತ್ತ ಯಾದವ್ ಅವರ ಪೀಠ, ಅರ್ಜಿ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿತು.
ಸುಪ್ರೀಂಕೋರ್ಟ್ ಕೇವಲ ಕಾವೇರಿ ಪ್ರಾಧಿಕಾರದ ಆದೇಶ ಕೇಳ್ಬಾರದು?: ಬೊಮ್ಮಾಯಿ
ನಾಗರಿಕರ ಹಾಗೂ ವಿಶೇಷವಾಗಿ ಮಹಿಳೆಯರ ಸಬಲೀಕರಣ, ಉನ್ನತೀಕರಣದ ಧ್ಯೇಯದೊಂದಿಗೆ ಗೃಹ ಜ್ಯೋತಿ, ಗೃಹಲಕ್ಷಿ, ಶಕ್ತಿ, ಯುವ ನಿಧಿ ಮತ್ತು ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಚುನಾವಣಾ ಪ್ರಣಾಳಿಕೆ ವೈಯುಕ್ತಿಕ ಘೋಷಣೆ ಆಗಿರುವುದಿಲ್ಲ. ಪಕ್ಷದ ಎಲ್ಲ ಅಭ್ಯರ್ಥಿಗಳಿಗೂ ಅನ್ವಯವಾಗುತ್ತದೆ. ಹಾಗಾಗಿ, ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ, ಅದನ್ನು ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ತಮ್ಮ ಲಿಖಿತ ಹೇಳಿಕೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.
3 ಡಿಸಿಎಂ ಹೈಕಮಾಂಡ್‌ಗೆ ಬಿಟ್ಟದ್ದು: ರಾಜ್ಯದಲ್ಲಿ ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಆದರೆ, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕಲ್ವೇ? ಈ ವಿಚಾರದಲ್ಲಿ ನನಗೇನಿಲ್ಲ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ಮಾಡುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಕಾಂಗ್ರೆಸ್-ತಮಿಳುನಾಡಿನ ನಂಟಿಂದ ರಾಜ್ಯಕ್ಕೆ ನಷ್ಟ: ಕುಮಾರಸ್ವಾಮಿ ಹೇಳಿದ್ದೇನು?
ರಾಜ್ಯದಲ್ಲಿ ಮೂರು ಡಿಸಿಎಂಗಳು ಬೇಕೆಂದು ಸಹಕಾರ ಸಚಿವ ರಾಜಣ್ಣ ಅವರು ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆಯುವುದಾಗಿ ಹೇಳಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟದಲ್ಲಿ ಈಗಾಗಲೇ ಒಬ್ಬರು ಡಿಸಿಎಂ ಇದ್ದಾರೆ. ಆದರೆ, ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡುತ್ತೀನಿ ಅಂತಲೂ ಹೇಳಿದ್ದಾರೆ. ಅವರು ಮಾತನಾಡಲಿ. ಅಂತಿಮವಾಗಿ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕಲ್ವೆ? ಈ ವಿಚಾರದಲ್ಲಿ ನನಗೇನಿಲ್ಲ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ಮಾಡುತ್ತೇನೆ ಎಂದರು.