ಎಂ.ಟಿ.ಆರ್ ಹೋಟೆಲ್ ದೋಸೆ ಸವಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂ.ಟಿ.ಆರ್ ಹೋಟೆಲಿನಲ್ಲಿ ದೋಸೆ ಸವಿದರು.‌ ಈ ವೇಳೆ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಶಾಸಕ ಗರುಡಾಚಾರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಉಪಸ್ಥಿತರಿದ್ದರು.

CM Siddaramaiah Enjoyed Dose At MTR Hotel Bengaluru gvd

ಬೆಂಗಳೂರು (ಆ.04): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂ.ಟಿ.ಆರ್ ಹೋಟೆಲಿನಲ್ಲಿ ದೋಸೆ ಸವಿದರು.‌ ಈ ವೇಳೆ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಶಾಸಕ ಗರುಡಾಚಾರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಉಪಸ್ಥಿತರಿದ್ದರು.

ಮದ್ದೂರು ವಡೆ ತಿಂದು, ಕಾಫಿ ಸೇವಿಸಿದ ಸಿಎಂ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಪರಿಶೀಲನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಜಿಲ್ಲೆಯ ಗಡಿಭಾಗ ನಿಡಘಟ್ಟದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಕಾಂಗ್ರೆಸ್‌ ಘಟಕದಿಂದ ಅದ್ಧೂರಿಯಾಗಿ ಸ್ವಾಗತ ನೀಡಲಾಯಿತು. ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ ಸಿದ್ದರಾಮಯ್ಯರನ್ನು ಜಿಲ್ಲಾಧಿಕಾರಿ ಡಾ.ಕುಮಾರ, ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು ಅವರು ಪುಸ್ತಕ ನೀಡಿ ಸ್ವಾಗತಿಸಿದರು. ಈ ವೇಳೆ ಸಚಿವ ಎನ್‌.ಚಲುವರಾಯಸ್ವಾಮಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಇದ್ದರು.

Chikkamagaluru: ದೇವರಿಗೆ 2000 ಸಾವಿರ ರೂ. ಜೆರಾಕ್ಸ್ ನೋಟ್ ಹಾಕಿ ಹರಕೆ ತೀರಿಸಿದ ಭಕ್ತ!

ನಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕದಲೂರು ರಾಮಕೃಷ್ಣ ನೇತೃತ್ವದಲ್ಲಿ ಪಕ್ಷದ ಮುಖಂಡರು, ನೂರಾರು ಕಾರ್ಯಕರ್ತರು ಶಾಲು ಹಾಕಿ ಮಾಲಾರ್ಪಣೆ ಮಾಡಿ ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮುಖಂಡರೊಂದಿಗೆ ಕೆಲಕಾಲ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಮುಖ್ಯಮಂತ್ರಿಗಳಿಗೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕದಲೂರು ರಾಮಕೃಷ್ಣ ಮದ್ದೂರು ವಡೆ ನೀಡಿ ಸತ್ಕರಿಸಿದರು. ವಡೆ ತಿಂದು, ಕಾಫಿ ಸೇವಿಸಿ ಸಂತಸ ವ್ಯಕ್ತಪಡಿಸಿದ ಸಿಎಂ, ಮದ್ದೂರು ವಡೆಗೂ ನನಗೂ ಅವಿನಾಭಾವ ಸಂಬಂಧವಿದೆ. ಮದ್ದೂರಿಗೆ ಬಂದಾಗ ವಡೆ ತಿನ್ನುವುದು ವಾಡಿಕೆ. 

ಲೋಕಸಭಾ ಚುನಾವಣೆ ಹಿನ್ನೆಲೆ: ಮಾಗಡಿ ವಿಧಾ​ನ​ಸಭಾ ಕ್ಷೇತ್ರ​ದಲ್ಲಿ ಆಪ​ರೇ​ಷನ್‌ ಹಸ್ತ!

ಈ ಹಿಂದೆ ಸಿಎಂ, ವಿಪಕ್ಷ ನಾಯಕನಾಗಿದ್ದಾಗಲೂ ಮದ್ದೂರು ವಡೆ ತಿದ್ದು ಹೋಗುತ್ತಿದ್ದೆ. ಈಗ ಎರಡನೇ ಬಾರಿ ಸಿಎಂ ಆಗಿ ಆಗಿದ್ದೇನೆ. ವಡೆ ರುಚಿ ಮರೆಯಲು ಸಾಧ್ಯವಿಲ್ಲ ಎಂದು ನಗುವಿನೊಂದಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಎಸ್ಪಿ ಎನ್‌.ಯತೀಶ್‌, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್‌ ಟಿ.ಎನ್‌ .ನರಸಿಂಹಮೂರ್ತಿ, ಡಿವೈಎಸ್ಪಿ ನವೀನ್‌ಕುಮಾರ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎ.ಸಿ.ಜೋಗೀಗೌಡ, ಮನ್ಮುಲ್‌ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ, ತಾಪಂ ಮಾಜಿ ಅಧ್ಯಕ್ಷ ಕೆ.ಆರ್‌ .ಮಹೇಶ್‌, ಮುಖಂಡರಾದ ಎಂ.ಬಿ.ಅಮರಬಾಬು, ಅರುಣ, ಕೆ.ಪಿ.ಶ್ರೀಧರ್‌, ಪಣ್ಣೆದೊಡ್ಡಿ ಸುಧಾಕರ್‌, ಕದಲೂರು ಗ್ರಾಪಂ ಸದಸ್ಯ ತಿಮ್ಮೇಗೌಡ, ಮುಖಂಡರಾದ ಅಭಿಲಾಷ್‌, ಕಾರ್ತಿಕ್‌ ಇದ್ದರು.

Latest Videos
Follow Us:
Download App:
  • android
  • ios