ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ: ಸಿದ್ದರಾಮಯ್ಯ ಕಿವಿಮಾತು

ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ ಎಂಬುದಾಗಿ ಸ್ವಾಮಿ ವಿವೇಕಾನಂದರ ಕರೆ ಯುವ ಜನರಿಗೆ ಸ್ಪೂರ್ತಿಯಾಗಿದೆ. ಗುರಿ ಸಾಧನೆಗೆ ಪರಿಶ್ರಮಪಟ್ಟಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

cm siddaramaiah inagurates state level youth programme at davanagere gvd

ದಾವಣಗೆರೆ (ಜ.06): ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ ಎಂಬುದಾಗಿ ಸ್ವಾಮಿ ವಿವೇಕಾನಂದರ ಕರೆ ಯುವ ಜನರಿಗೆ ಸ್ಪೂರ್ತಿಯಾಗಿದೆ. ಗುರಿ ಸಾಧನೆಗೆ ಪರಿಶ್ರಮಪಟ್ಟಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಂದ ಹಮ್ಮಿಕೊಂಡಿದ್ದ ಎರಡು ದಿನಗಳ ರಾಜ್ಯಮಟ್ಟದ ಯುವಜನೋತ್ಸವ-2025 ಅನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ನ್ಯಾಯ ಸಿಗಬೇಕು. ಅಭಿವ್ಯಕ್ತಿಯ ಉಪಾಸನೆ, ಸಮಾನತೆಯ ಅವಕಾಶ ಕಟ್ಟಿಕೊಡಬೇಕು ಎಂದು ಹೇಳಿದರು.

ಯುವನಿಧಿಯಡಿ ರಾಜ್ಯದ 1.62 ಲಕ್ಷ ಯುವ ಜನತೆ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಕೌಶಲ್ಯ ತರಬೇತಿ ನೀಡುತ್ತಿದ್ದೇವೆ. ಇದಕ್ಕಾಗಿ 213 ಕೋಟಿ ರು. ಹಣ ನೀಡಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ನಮ್ಮ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕೆಂಬ ಸಂಕಲ್ಪದೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ನಮ್ಮ ರಾಜ್ಯ, ರಾಷ್ಟ್ರದ ನೆಮ್ಮದಿ ಕೆಡಿಸಲು ದುಷ್ಟ ಶಕ್ತಿಗಳು ಜಾತಿ, ಧರ್ಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇಂತಹ ವಿಕೃತರಿಂದ ಯುವ ಜನತೆ ದೂರವಿದ್ದು, ತಮ್ಮ ಬದುಕು, ಭವಿಷ್ಯವನ್ನು ಕಾಪಾಡಿಕೊಳ್ಳಬೇಕು. ಜಾತಿ, ಧರ್ಮಗಳನ್ನು ದುರ್ಬಳಕೆ ಮಾಡಿಕೊಳ್ಳುವವರಿಂದ ರಾಜ್ಯ, ರಾಷ್ಟ್ರದ ಪ್ರಗತಿಯೂ ನಾಶವಾಗುತ್ತದೆ. ಈ ಹಿನ್ನೆಲೆಯಲ್ಲಿ ಯುವ ಜನರು ಜಾಗ್ರತೆ ವಹಿಸಬೇಕು ಎಂದರು.

ಶೇ.60 ಕಮಿಷನ್ ಆರೋಪ ಸಾಬೀತು ಮಾಡಲಿ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಸವಾಲು

ಸಂವಿಧಾನದ ಸಾರವು ಪ್ರತಿಯೊಬ್ಬರಿಗೂ ಅರ್ಥವಾಗಬೇಕು. ಪ್ರತಿ ಪ್ರಜೆಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಎಲ್ಲರಿಗೂ ಅವರವರ ಧರ್ಮ, ನಂಬಿಕೆ, ಆಚರಣೆಗೆ ಅವಕಾಶ ಇರಬೇಕೆಂಬುದೇ ಸಂವಿಧಾನದ ಸಾರ. ಈ ಸಂವಿಧಾನ ಇದ್ದುದರಿಂದಲೇ ನಾನು ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು ಎಂದು ತಿಳಿಸಿದರು.

ರಾಜ್ಯದ ಸಮೃದ್ಧಿ-ಶಾಂತಿಗೆ ಹಾರೈಕೆ: ದಾವಣಗೆರೆಯಲ್ಲಿ ರಾಜ್ಯಮಟ್ಟದ ಯುವ ಜನೋತ್ಸವಕ್ಕೆ ಚಾಲನೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಯುವ ಜನತೆ ಸೇರಿದಂತೆ ಸಮಸ್ತರಿಗೆ ಹೊಸ ವರ್ಷಕ್ಕೆ ಶುಭಾಶಯ ಕೋರಿ ರಾಜ್ಯದ ಸಮೃದ್ಧಿ-ಶಾಂತಿಗಾಗಿ ಹಾರೈಸಿದರು. ಯುವ ಜನತೆ ಸಂಭ್ರಮದಿಂದ ಹೊಸ ವರ್ಷ ಬರ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳುವ ಕಡೆಗೆ ಗಮನ ಹರಿಸಿ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ದಾವಣಗೆರೆಯಲ್ಲಿ 3ನೇ ವಿಶ್ವ ಕನ್ನಡ ಸಮ್ಮೇಳನ ನಡೆಸುವ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. 

ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಹಿಂದಿನಿಂದಲೂ ಸ್ಪಂದಿಸಿ, ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಭದ್ರಾ ಡ್ಯಾಂ ಕೊನೆಯ ಭಾಗಕ್ಕೆ ಸಮರ್ಪಕವಾಗಿ ನೀರು ತಲುಪಿಸಬೇಕಿದೆ ಎಂದು ಮನವಿ ಮಾಡಿದರು. ಕ್ರೀಡಾ ಸಚಿವನಿದ್ದಾಗ ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಟೆನಿಸ್ ಅಂಕಣ, ಒಳಾಂಗಣ ಕ್ರೀಡಾಂಗಣ ನಿರ್ಮಿಸಿ, ಸಾಕಷ್ಟು ಕ್ರೀಡಾಕೂಟ ಆಯೋಜಿಸಿದ್ದೇವೆ. ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಕ್ರಿಕೆಟ್ ಅಂಕಣ ನಿರ್ಮಾಣ ಅಂತಿಮ ಹಂತದಲ್ಲಿದೆ. ಶೇ.35ರಷ್ಟು ಇರುವಂತಹ ಯುವ ಜನರು ಯಾವುದೇ ಸಮೂಹ ಸನ್ನಿಗೆ ಒಳಗಾಗಬಾರದು. 

ಯುವನಿಧಿಯಡಿ ಜಿಲ್ಲೆಯ 5802 ಯುವ ಜನರಿಗೆ 8.5 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಸ್ವಾಮಿ ವಿವೇಕಾನಂದರ ಜೊತೆ ಬುದ್ಧ, ಬಸವ, ಅಂಬೇಡ್ಕರ್‌ರ ಚಿಂತನೆ, ಆದರ್ಶಗಳನ್ನು ಯುವ ಜನರು ಮೈಗೂಡಿಸಿಕೊಳ್ಳಬೇಕು ಎಂದರು. ಸಂವಿಧಾನ ಪೀಠಿಕೆ ಓದಿದೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಯುವ ಜನರು ದೇಶದ ಆಸ್ತಿ. ಇಂತಹವರಿಗೆ ಅವಕಾಶ ಸೃಷ್ಟಿಸುವ ಕೆಲಸ ಆಗಬೇಕು. ಹಿಂದೆ ಎಸ್ಸೆಸ್ ಮಲ್ಲಿಕಾರ್ಜುನ ಕ್ರೀಡಾ ಸಚಿವರಿದ್ದಾಗ ಜಿಲ್ಲೆ, ರಾಜ್ಯದಲ್ಲಿ ಕ್ರೀಡಾ ಕ್ರಾಂತಿಯೇ ಆಗಿತ್ತು. ಯುವ ಜನರಿಗೆ ಪ್ರೋತ್ಸಾಹಿಸಲು ಎಸ್ಸೆಸ್ ಕೇರ್ ಟ್ರಸ್ಟ್ ಮೂಲಕ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ: ಮಾಜಿ ಸಂಸದ ಪ್ರತಾಪ ಸಿಂಹ

ಸಚಿವ ಭೈರತಿ ಸುರೇಶ, ಶಾಸಕರಾದ ಡಿ.ಜಿ.ಶಾಂತನಗೌಡ, ಬಿ.ಪಿ.ಹರೀಶ, ಬಿ.ದೇವೇಂದ್ರಪ್ಪ, ಶಿವಗಂಗಾ ವಿ.ಬಸವರಾಜ, ಕೆ.ಎಸ್.ಬಸವಂತಪ್ಪ, ಮೇಯರ್ ಕೆ.ಚಮನ್ ಸಾಬ್‌, ಉಪ ಮೇಯರ್ ಸೋಗಿ ಶಾಂತಕುಮಾರ, ಐಜಿಪಿ ಬಿ.ರಮೇಶ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಪಂ ಸಿಇಒ ಸುರೇಶ ಬಿ.ಇಟ್ನಾಳ, ಎಸ್ಪಿ ಉಮಾ ಪ್ರಶಾಂತ, ಕ್ರೀಡಾ ಇಲಾಖೆ ಆಯುಕ್ತ ಚೇತನ್‌, ಮಾಜಿ ಸಚಿವ ಎಚ್.ಆಂಜನೇಯ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ಧಿ ನಿಗಮದ ಜಯದೇವ ನಾಯ್ಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ವಿಪ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ರಂದೀಪ್.ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಇತರರು ಇದ್ದರು.

Latest Videos
Follow Us:
Download App:
  • android
  • ios