Bagalkote: ಮಲಪ್ರಭಾ ನದಿಗೆ ನೀರು ಬಿಡಲು ಸಿಎಂ ಸಿದ್ದರಾಮಯ್ಯ ಸೂಚನೆ
ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ಬಾದಾಮಿಯ ಮಾಜಿ ಶಾಸಕರೂ, ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತ ಹೊಳಬಸು ಶೆಟ್ಟರ ತಿಳಿಸಿದ್ದಾರೆ.
ಗುಳೇದಗುಡ್ಡ (ಮೇ.21): ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ಬಾದಾಮಿಯ ಮಾಜಿ ಶಾಸಕರೂ, ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತ ಹೊಳಬಸು ಶೆಟ್ಟರ ತಿಳಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನದಿ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವುದರಿಂದ ಬಾದಾಮಿ, ರಾಮದುರ್ಗ, ಬಾಗಲಕೋಟೆ ಕ್ಷೇತ್ರದ ಕೆರೆಗಳು ಭರ್ತಿಯಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಜಾನುವಾರುಗಳಿಗೂ ಅನುಕೂಲ ಆಗತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಬೆಳಗಾವಿ ಪ್ರಾದೇಶಿಕ ಆಯುಕ್ತ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸುವಂತೆ ತಿಳಿಸಿದ್ದಾರೆ ಎಂದರು.
84 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ: ಮುಂಗಾರು ಮಳೆ ಮೇಲೆ ಭಾರಿ ನಿರೀಕ್ಷೆ
0.75ಟಿಎಂಸಿ ನೀರು ಬಿಡುಗಡೆ ಒಪ್ಪಿಗೆ: ಮಲಪ್ರಭಾ ನದಿಗೆ ನೀರು ಬಿಡುವಂತೆ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯನವರು ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿದ್ದರಿಂದ ಕುಡಿಯುವ ಉದ್ದೇಶಕ್ಕಾಗಿ ಪ್ರಾದೇಶೀಕ ಆಯುಕ್ತ ಹಿರೇಮಠ ಅವರು ದಿನಕ್ಕೆ 750 ಕ್ಯುಸೆಕ್‌ನಂತೆ 0.75 ಟಿಎಂಸಿ ನೀರು ಬಿಡುವಂತೆ ಅಧೀಕ್ಷಕ ಅಭಿಯಂತರರಿಗೆ ಆದೇಶ ಮಾಡಿದ್ದು, ನೀರು ಸಾಕೇನಿಸಿದಲ್ಲಿ ಕೂಡಲೇ ನೀರಿನ ಹರಿವನ್ನು ಸ್ಥಗಿತಗೊಳಿಸಲು ಕ್ರಮ ಜರುಗಿಸುವಂತೆ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದಾರೆ.
1 ತಾಸು ಮಾತ್ರ ನಿದ್ರಿಸಿ ಶಪಥಕ್ಕೆ ಸಜ್ಜಾದ ಸಿದ್ದು: ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಗೆ ತೆರಳಿದ್ದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಳಿಗ್ಗೆ 7 ಗಂಟೆಗೆ ದೆಹಲಿಯಿಂದ ಮನೆಗೆ ಹಿಂದಿರುಗಿದವರು ಒಂದು ಗಂಟೆ ಮಾತ್ರ ನಿದ್ರೆ ಮಾಡಿದ್ದು ವಿಶೇಷವಾಗಿತ್ತು. ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಬೇಕು ಎಂಬುದರ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಗೆ ತೆರಳಿದ್ದರು. ಸಂಪುಟದ ಬಗ್ಗೆ ಸಭೆಯ ಮೇಲೆ ಸಭೆ ನಡೆದು ಅಂತಿಮವಾಗುವುದು ತಡರಾತ್ರಿಯಾಗಿತ್ತು. ಪಟ್ಟಿಅಂತಿಮಗೊಂಡ ನಂತರ ತಡರಾತ್ರಿಯೇ ದೆಹಲಿಯಿಂದ ಹೊರಟು ಶನಿವಾರ ಬೆಳಿಗ್ಗೆ 6.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಆಗಮಿಸಿದರು.
ದುಬಾರಿಯಾಯ್ತು ಚಿಕ್ಕಬಳ್ಳಾಪುರದ ಸ್ಕಂದಗಿರಿ ಬೆಟ್ಟ ಪ್ರವೇಶ: ಚಾರಣಿಗರ ಆಕ್ರೋಶ
ಎಂ.ಬಿ.ಪಾಟೀಲ್, ಜಮೀರ್ ಅಹಮದ್ ಖಾನ್ ಜೊತೆ ಕುಮಾರಕೃಪಾ ರಸ್ತೆಯಲ್ಲಿರುವ ನಿವಾಸಕ್ಕೆ ಆಗಮಿಸುವಷ್ಟರಲ್ಲಿ ಬೆಳಗ್ಗೆ 7 ಗಂಟೆಯಾಗಿತ್ತು. ಬೆಳಗ್ಗೆ 7 ಗಂಟೆಗೆ ಮಲಗಿದ ಸಿದ್ದರಾಮಯ್ಯ ಅವರು ಬೆಳಗ್ಗೆ 8 ಗಂಟೆಯ ಹೊತ್ತಿಗೆ ಎದ್ದು ಎಂದಿನಂತೆ ದಿನಪತ್ರಿಕೆಗಳನ್ನು ಓದಿ ಬಳಿಕ ಸ್ನಾನ ಮಾಡಿ, ದೇವರ ಪೂಜೆ ನೆರವೇರಿಸಿದರು. ಹಲವು ಮುಖಂಡರು ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್‌್ತ ಮಾಡಲಾಗಿತ್ತು.