ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು: ಸಂಸದ ಶೆಟ್ಟರ್

ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು.
 

CM Siddaramaiah may have to resign anytime Says MP Jagadish Shettar gvd

ಬೆಳಗಾವಿ (ಆ.04): ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು. ರಾಜ್ಯದಲ್ಲಿ ಈಗ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. 

ಸ್ಪೀಕರ್ ಕಡೆಯಿಂದ ಚರ್ಚೆಯ ಪ್ರಸ್ತಾವನೆಯನ್ನು ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದ ಕುರಿತು ಸದನದಲ್ಲಿ ಉತ್ತರ ಕೊಡಲಿಲ್ಲ. ಮರುದಿನ ಪತ್ರಿಕಾಗೋಷ್ಠಿ ನಡೆಸಿ ಪತ್ರಿಕೆಗಳಲ್ಲಿ ಪುಟ ಜಾಹಿರಾತು ನೀಡಿ ಉತ್ತರ ಕೊಟ್ಟಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದು, ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ ನಡೆಸಲಿದೆ. ಇದರಲ್ಲಿ ಜೆಡಿಎಸ್‌ ಭಾಗವಹಿಸಲಿದೆ ಎಂದು ಹೇಳಿದರು.

ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳನ್ನ ಗೌರವಿಸುವುದು ಕಡ್ಡಾಯ: ಸಚಿವ ದಿ‌ನೇಶ್ ಗುಂಡೂರಾವ್

ವರ್ತುಳ ರಸ್ತೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ: ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಸದ ಜಗದೀಶ ಶೆಟ್ಟರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬೆಳಗಾವಿ-ಹುನಗುಂದ-ರಾಯಚೂರು ಮಾರ್ಗದ ರಸ್ತೆ ನಿರ್ಮಾಣದ ಕುರಿತು ಹಾಗೂ ನೈರುತ್ಯ ರೈಲ್ವೆ ವಲಯಕ್ಕೆ ಸಂಬಂಧಿಸಿದಂತೆ ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲ್ವೆ ನಿರ್ಮಾಣ ಹಂತದ ಪ್ರಕ್ರಿಯೆ ಕುರಿತು ಚರ್ಚಿಸಿ ಭೂಸ್ವಾಧೀನವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು. ಬೆಳಗಾವಿ ನಗರದ ರಸ್ತೆ ಮೇಲ್ ಸೇತುವೆ ನಿರ್ಮಾಣದ ಕಾಮಗಾರಿ ಪ್ರಗತಿ ಕುರಿತು ಚರ್ಚೆ ನಡೆಸಿ, ರೈಲ್ವೆ 3ನೇ ಗೇಟ್ ಹತ್ತಿರ ನಿರ್ಮಾಣಗೊಳ್ಳುತ್ತಿರುವ ಕಾಮಗಾರಿ ಅರ್ಧಕ್ಕೆ ನಿಂತಿರುವ ವಿಷಯವನ್ನು ಪ್ರಸ್ತಾಪಿಸಿ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಯಾದಗಿರಿ ಪಿಎಸ್ಐ ಸಾವು ಪ್ರಕರಣ: ತನಿಖೆ ನಂತರ ಸತ್ಯಾಂಶ ಬಯಲು: ಸಚಿವ ಪರಮೇಶ್ವರ್

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಉಪ ಪೊಲೀಸ್ ಆಯುಕ್ತ ಜಗದೀಶ್ ರೋಹನ್. ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ, ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಭುವನೇಶ್ವರ್ ಕುಮಾರ್, ಭೂಸ್ವಾಧೀನ ಅಧಿಕಾರಿ ಚವಾಣ್‌, ನೈರುತ್ಯ ರೈಲ್ವೆ ವಲಯದ ಅಧಿಕಾರಿ ವಿನಯ್ ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಬರದ, ರೈಲ್ವೆ ಲೈನ್ ಭೂ ಸ್ವಾಧೀನ ಅಧಿಕಾರಿ ಮಾರುತಿ ಬ್ಯಾಕೋಡ ಮತ್ತಿತರರು ಇದ್ದರು.

Latest Videos
Follow Us:
Download App:
  • android
  • ios