ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ. ಗೊತ್ತಾಯ್ತಾ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೋ ಆ ರೀತಿ ನಡೆದುಕೊಳ್ಳುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ  

ಬೆಂಗಳೂರು(ಜೂ.28): ‘ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ. ಹಾಗಾಗಿ ಪಕ್ಷ ಹಾಗೂ ಸರ್ಕಾರದಲ್ಲಿ ಯಾವುದೇ ಬದಲಾವಣೆಯ ವಿಚಾರಗಳಾಗಲಿ ಹೈಕಮಾಂಡ್‌ ನಿರ್ಧಾರದಂತೆ ನಡೆಯುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಚಂದ್ರಶೇಖರನಾಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ಆಗ್ರಹಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ. ಗೊತ್ತಾಯ್ತಾ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೋ ಆ ರೀತಿ ನಡೆದುಕೊಳ್ಳುತ್ತೇವೆ’ ಎಂದರು.

ಸಿ.ಪಿ.ಯೋಗೇಶ್ವರ್‌ಗೆ ದೇವರು ಒಳ್ಳೆಯದು ಮಾಡಲಿ: ಡಿ.ಕೆ.ಶಿವಕುಮಾರ್ ವ್ಯಂಗ್ಯ

ಇದೇ ವೇಳೆ ಸಮುದಾಯವಾರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ವಿವಿಧ ಸಚಿವರಿಂದ ಕೇಳಿಬರುತ್ತಿರುವ ಬೇಡಿಕೆ ಕುರಿತ ಪ್ರಶ್ನೆಗೆ, ‘ಅದರಲ್ಲೂ ಹೈಕಮಾಂಡ್‌ ನಿರ್ಧಾರ ಅಂತಿಮ’ ಎಂದು ಹೇಳಿ ತೆರಳಿದರು. ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪ್ರತಿಕ್ರಿಯೆ ಪಡೆಯಲು ಸುದ್ದಿಗಾರರು ಪ್ರಯತ್ನಿಸಿದರಾದರೂ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟರು.