Asianet Suvarna News Asianet Suvarna News

ಅಮಿತ್‌ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಪದೇಪದೇ ಸುಳ್ಳು: ಬಿ.ವೈ.ವಿಜಯೇಂದ್ರ

ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ಕಾಂಗ್ರೆಸ್ ಬ್ಯಾಟರಿ ಡೌನ್ ಆಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಗಾಬರಿಯಾಗಿ ಉಸಿರಾಡಲು ಕಷ್ಟ ಪಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. 
 

CM Siddaramaiah repeatedly lied against Amit Shah Says BY Vijayendra gvd
Author
First Published Apr 4, 2024, 8:58 AM IST

ಚಾಮರಾಜನಗರ (ಏ.04): ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ಕಾಂಗ್ರೆಸ್ ಬ್ಯಾಟರಿ ಡೌನ್ ಆಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಗಾಬರಿಯಾಗಿ ಉಸಿರಾಡಲು ಕಷ್ಟ ಪಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಬರಗಾಲ ಆವರಿಸುತ್ತದೆ. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ್ದ ವೇಳೆ ಕೆರೆ-ಕಟ್ಟೆಗಳು ಕೋಡಿ ಬಿದ್ದು ಪ್ರವಾಹ ಸ್ಥಿತಿ ಎದುರಾಗಿತ್ತು. ಜನರು ಕಾಂಗ್ರೆಸ್ ವಿರುದ್ಧ ಶಾಪ ಹಾಕುತ್ತಿದ್ದಾರೆ. ರಾಜ್ಯದಲ್ಲಿ 800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರಕ್ಕೆ ಕರುಣೆಯೇ ಇಲ್ಲ ಎಂದು ಟೀಕಿಸಿದರು. ರೈತರ ಸಮಸ್ಯೆ ಪರಿಹರಿಸುವ ಬದಲು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. 

ಕೇಂದ್ರದ ಅನುದಾನದ ವಿಚಾರವಾಗಿ ಅಮಿತ್ ಶಾ ವಿರುದ್ಧ ಸಿಎಂ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 1 ಲಕ್ಷ ಕೋಟಿ ಅನುದಾನ ಬಂದಿದ್ದರೆ, ಕಳೆದ 10 ವರ್ಷದಲ್ಲಿ 4 ಲಕ್ಷ ಕೋಟಿಗೂ ಅಧಿಕ ಅನುದಾನ ಬಂದಿದೆ ಎಂದರು. ರಾಜ್ಯದಲ್ಲಿ ಕಳೆದ 10 ತಿಂಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ. ಹೀಗಾಗಿ, ಈ ಸರ್ಕಾರಕ್ಕೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕು. ಬಾಲರಾಜ್ ಅವರನ್ನು 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ಶಾ ಭರ್ಜರಿ ರೋಡ್ ಶೋ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಶಾ ತೆರೆದ ವಾಹನದಲ್ಲಿ ೧ ಕಿಮೀ ರೋಡ್ ಶೋ ನಡೆಸಿ ಮತದಾರರನ್ನು ಸೆಳೆದರು. 

2024ರಲ್ಲಿ ಭಾರತದ ಜಿಡಿಪಿ ದರ ಶೇ.7.5 ಪ್ರಗತಿ: ವಿಶ್ವಬ್ಯಾಂಕ್‌

ಇದಕ್ಕೂ ಮೊದಲು ಬೆಂಗಳೂರಿನಿಂದ ಸಂಜೆ ೫.೪೫ರ ವೇಳೆಗೆ ಶೆಟ್ಟಿಹಳ್ಳಿ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಶಾ ಅವರು ೬.೪೫ಕ್ಕೆ ಮಂಗಳವಾರಪೇಟೆಯ ಬಸವನಗುಡಿ ಬಳಿಗೆ ಆಗಮಿಸಿ ತೆರೆದ ವಾಹನ ಏರಿದರು. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೂ ಮಳೆ ಸುರಿಸುವ ಮೂಲಕ ಭವ್ಯ ಸ್ವಾಗತ ನೀಡಿದರು. ಬಸವನಗುಡಿಯಿಂದ ಆರಂಭಗೊಂಡ ರೋಡ್ ಶೋ, ಗಾಂಧಿ ಭವನದ ವೃತ್ತದ ಬಳಿ ನಿರ್ಮಿತವಾಗಿದ್ದ ವೇದಿಕೆವರೆಗೆ ಸಾಗಿತು. ಮಾರ್ಗಮಧ್ಯೆ ಅಮಿತ್ ಶಾ ಅವರ ಮೇಲೆ ಜನ ಹೂ ಮಳೆ ಸುರಿಸಿದರೆ, ಶಾ ಜನರತ್ತ ಕೈಬೀಸಿ ನಗೆ ಬೀರಿದರು.

Follow Us:
Download App:
  • android
  • ios