Valimiki Scam: ಸಿದ್ದರಾಮಯ್ಯ ರಾಜೀನಾಮೆ ಸನ್ನಿಹಿತ: ವಿಜಯೇಂದ್ರ ಭವಿಷ್ಯ

ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ವರ್ಗಾವಣೆ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ದಿನ ಸಮೀಪಿಸಿದೆ ಎಂದು ಭವಿಷ್ಯ ನುಡಿದಿದ್ದಾರೆ. 
 

CM Siddaramaiah resignation imminent Says BY Vijayendra gvd

ಬೆಂಗಳೂರು (ಜು.20): ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ವರ್ಗಾವಣೆ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ದಿನ ಸಮೀಪಿಸಿದೆ ಎಂದು ಭವಿಷ್ಯ ನುಡಿದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ ಅವರ ಗಮನಕ್ಕೆ ಬಾರದೆ ಹಣವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ಹೇಳಿದರು. 

ಕೇವಲ ಮಾಜಿ ಸಚಿವ ನಾಗೇಂದ್ರ, ನಿಗಮದ ಅಧ್ಯಕ್ಷ ದದ್ದಲ್ ಅವರಷ್ಟೇ ಅಲ್ಲದೆ ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ರಾಜ್ಯದ ಐದು ಸಚಿವರು ಇ.ಡಿ. ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ. ಎಂದರು. ಸಿಎಂ ಸದನದಲ್ಲಿ ಉತ್ತರ ಕೊಡುವ ಪ್ರಯತ್ನ ಮಾಡಿದ್ದು, ಸತ್ಯಸಂಗತಿಗಳನ್ನು ಮರೆಮಾಚಿ, ಸದನಕ್ಕೆ ಮತ್ತು ರಾಜ್ಯದ ಜನತೆಗೆ ತಪ್ಪು ಮಾಹಿತಿ, ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ. ಸಿಎಂ ಈ ಹಗರಣದಿಂದ ತಪ್ಪಿಸಿ ಕೊಂಡು ಹೋಗಲು ಸಾಧ್ಯವಿಲ್ಲ ಎಂಬುದು ಸತ್ಯ ಎಂದು ವಿಜಯೇಂದ್ರ ಎಚ್ಚರಿಸಿದರು.

ಮಳೆ ಅವಾಂತರ: ಗ್ರಾ.ಪಂ. ಮಟ್ಟದಲ್ಲಿ ಟಾಸ್ಕ್‌ಫೋರ್ಸ್: ಸಚಿವ ಕೃಷ್ಣ ಬೈರೇಗೌಡ

ರಾಜೀನಾಮೆವರೆಗೂ ಪ್ರತಿಭಟನೆ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ನೀಡಿದ ಉತ್ತರ ವಿರೋಧಿಸಿ ಪ್ರತಿಪಕ್ಷ ಬಿಜೆಪಿಯ ಶಾಸಕರು ವಿಧಾನಸಭೆಯ ಪೂರ್ವದ್ವಾರದ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದರು. ನಿಗಮದ ಅಧಿಕಾರಿ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿ ಸಚಿವರ, ಅಧ್ಯಕ್ಷರ ಒತ್ತಡ ಮೇರೆಗೆ ಎಂದು ಉಲ್ಲೇಖಿಸಿದರೂ ಎಸ್‌ಐಟಿಯ ಎಫ್‌ಐಆರ್‌ನಲ್ಲಿ ಅವರ ಹೆಸರು ಉಲ್ಲೇಖ ಮಾಡಿಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತು. ಮುಂದೂಡಿಕೆಯಾದ ಬಳಿಕ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸರ್ಕಾರ ವಿರುದ್ಧ ಘೋಷಣೆ ಕೂಗುತ್ತಲೇ ಸದನದ ಪೂರ್ವದ್ವಾರಕ್ಕೆ ಆಗಮಿಸಿದರು. 

ಹಗರಣ ಹಿನ್ನೆಲೆಯಲ್ಲಿ ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಶೋಕ್‌, ಅಧೀವೇಶನ ನಡೆಯುವ ವೇಳೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆತ್‌ನೋಟ್‌ನಲ್ಲಿನ ಅಂಶಗಳನ್ನು ಕೈಬಿಟ್ಟು ಕೇವಲ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ ಅನ್ನು ಓದಿದ್ದಾರೆ. ಡೆತ್‌ನೋಟ್‌ನಲ್ಲಿ ಸಚಿವರ ಒತ್ತಡವಿದ್ದರೂ ನಿಗಮದ ಅಧ್ಯಕ್ಷರು ಮೌನವಾಗಿದ್ದರು ಎಂಬ ಅಂಶ ಉಲ್ಲೇಖವಾಗಿದೆ. ಇದನ್ನು ಎಫ್‌ಐಆರ್‌ನಲ್ಲಿ ನಮೂದಿಸಿಲ್ಲ. 

ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಭರ್ಜರಿ ಆಫರ್: ಡೆಂಘೀ ಬಗ್ಗೆ ರೀಲ್ಸ್ ಮಾಡಿ ಲಕ್ಷ ಬಹುಮಾನ ಗೆಲ್ಲಿ!

ಈ ಮೂಲಕ ಮಾಜಿ ಸಚಿವ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಸದನದ ದಾಖಲೆಗೆ ಹೋಗಬಾರದು ಎಂದು ಕುತಂತ್ರ ಮಾಡಿ ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಎಸ್‌ಐಟಿ 40 ದಿನವಾದರೂ ವಿಚಾರಣೆಗೆ ನೊಟೀಸ್ ನೀಡುವುದಿಲ್ಲ. ಪ್ರಕರಣದಲ್ಲಿ ಇಡಿ ಪ್ರವೇಶಿಸುತ್ತಿದ್ದಂತೆ ನೊಟೀಸ್‌ ನೀಡಿದೆ. ತನಿಖೆ ಕೈಗೊಂಡಿರುವ ಎಸ್‌ಐಟಿ ಸುರ್ಜೇವಾಲಾ, ಸಿದ್ದರಾಂಯ್ಯ ಇನ್ವೆಸ್ಟಿಗೇಷನ್‌ ಟೀಮ್‌ (ಎಸ್‌ಎಸ್‌ಐಟಿ) ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios