ದಲಿತ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ದ್ರೋಹ: ವಿಜಯೇಂದ್ರ ಆಕ್ರೋಶ
ರಾಜ್ಯದ ಆರೂವರೆ ಕೋಟಿ ಜನರಿಗೆ ಕರ್ನಾಟಕದಲ್ಲಿ ಚುನಾಯಿತ ಸರ್ಕಾರ ಇದೆ ಎಂದೇ ಆನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿ ದ್ದಾರೆ. ಆದರೆ ಕಳೆದ 14 ತಿಂಗಳಿನಲ್ಲಿ ವಿದ್ಯುತ್ ದರ, ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಮದ್ದೂರು(ಆ.07): ಕೇವಲ ಮುಡಾ ಅಥವಾ ವಾಲ್ಮೀಕಿ ಅಭಿವೃದ್ಧಿ ನಿಗಮ ಮಾತ್ರವಲ್ಲ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ತಾಲೂಕಿನ ಸೋಮನಹಳ್ಳಿ ಮತ್ತು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮಂಗಳವಾರ ನಾಲ್ಕನೇ ದಿನದ ಮೈಸೂರು ಚಲೋ ಪಾದಯಾತ್ರೆಯ ಬಹಿರಂಗ ಸಭೆಯಲ್ಲಿ ಮಾತನಾಡಿ, ರಾಜ್ಯದ ಆರೂವರೆ ಕೋಟಿ ಜನರಿಗೆ ಕರ್ನಾಟಕದಲ್ಲಿ ಚುನಾಯಿತ ಸರ್ಕಾರ ಇದೆ ಎಂದೇ ಆನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿ ದ್ದಾರೆ. ಆದರೆ ಕಳೆದ 14 ತಿಂಗಳಿನಲ್ಲಿ ವಿದ್ಯುತ್ ದರ, ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ ಎಂದರು.
ಸಂಸತ್ ಅಧಿವೇಶನದ ಬಳಿಕ ಸಿದ್ದು ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರ?
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ಅಭಿವೃದ್ವಿಗೆ ಮೀಸಲಿಟ್ಟ ಹಣ ಲೂಟಿ ಮಾಡಿ ಆ ಸಮುದಾಯಕ್ಕೆ ದ್ರೋಹ ಮಾಡಿದೆ. ನಿಗಮದ ಹಗರಣದ ಆರೋಪಿಗಳ ಹೆಸರನ್ನು ಎಸ್‌ಐಟಿ ತನಿಖೆಯ ಚಾರ್ಜ್ ಶೀಟ್‌ನಲ್ಲಿ ಕೈ ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದ ಪ್ರಮುಖ ಆರೋಪಿಯಾಗಿದ್ದಾರೆ ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹಾಲು ಉತ್ಪಾದಕರಿಗೆ 5 ರು. ಪ್ರೋತ್ಸಾಹ ಧನ ಕೊಡುತ್ತಿತ್ತು. ಆದರೆ, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದು, ಹಾಲು ಉತ್ಪಾದಕರಿಗೆ 1200 ಕೋಟಿ ರು. ಪ್ರೋತ್ಸಾಹಧನ ಬಾಕಿ ಉಳಿಸಿ ಕೊಂಡಿದ್ದಾರೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ಎಲ್ಲಾ ನೋಂದಣಿ ಶುಲ್ಕಗಳನ್ನು ಹೆಚ್ಚಳ ಮಾಡಿದೆ. ಜನರಿಗೆ ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. ಅಧಿಕಾರಕ್ಕೆ ಬಂದ 14 ತಿಂಗಳಲ್ಲೇ ಸಿದ್ದರಾಮಯ್ಯ ಸರ್ಕಾರ ಭಾರೀ ಸಾಲ ಮಾಡಿದೆ ಎಂದು ದೂರಿದರು.