Asianet Suvarna News Asianet Suvarna News

‘ಸಿದ್ದು ಸಿಎಂ’ ಎಂದ ಪುಷ್ಪಾ ಅಮರನಾಥ, ಅಶೋಕ ಪಟ್ಟಣ್‌: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸುರ್ಜೇವಾಲ!

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ತೀವ್ರ ಚರ್ಚೆಯಾಗುತ್ತಿರುವ ನಡುವೆಯೇ ‘ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಿದೆ’ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಇಬ್ಬರು ನಾಯಕರಿಗೆ ನೋಟಿಸ್‌ ನೀಡಲು ಕಾಂಗ್ರೆಸ್‌ ನಿರ್ಧರಿಸಿದೆ.

CM Siddaramaiah's statement issue congress decided notices to pushpa amaranath and ashok m pattan bengaluru rav
Author
First Published May 18, 2023, 5:27 AM IST

ಬೆಂಗಳೂರು (ಮೇ.18) : ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ತೀವ್ರ ಚರ್ಚೆಯಾಗುತ್ತಿರುವ ನಡುವೆಯೇ ‘ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಿದೆ’ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಇಬ್ಬರು ನಾಯಕರಿಗೆ ನೋಟಿಸ್‌ ನೀಡಲು ಕಾಂಗ್ರೆಸ್‌ ನಿರ್ಧರಿಸಿದೆ.

ರಾಮದುರ್ಗ ಕ್ಷೇತ್ರದ ಶಾಸಕ ಅಶೋಕ್‌( ಎಂ. ಪಟ್ಟಣ್‌(Ashok M pattan MLA) ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌(Pushpa amaranath) ಅವರಿಗೆ ನೋಟಿಸ್‌ ನೀಡುವಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ(Randeep surjewala) ಸೂಚನೆ ನೀಡಿದ್ದಾರೆ.

ಸಿದ್ದು ಸಿಎಂ ಆಗಲೆಂದು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ: 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

ದೆಹಲಿಯಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ(Rahul gandhi) ಅವರೊಂದಿಗೆ ಸಿದ್ದರಾಮಯ್ಯ(Siddaramaiah) ಚರ್ಚೆ ನಡೆಸಿ ಹೊರ ಬಂದ ಬೆನ್ನಲ್ಲೇ ಪುಷ್ಪಾ ಅಮರನಾಥ್‌ ಅವರ), ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.

ಇದಕ್ಕೂ ಮೊದಲು ಶಾಸಕ ಅಶೋಕ್‌ ಪಟ್ಟಣ್‌, ರಾಹುಲ್‌ ಗಾಂಧಿ ಅವರೊಂದಿಗಿನ ಚರ್ಚೆ ವೇಳೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ನಿರ್ಧರಿಸಲಾಗಿದೆ. ಸದ್ಯದಲ್ಲೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ನೋಟಿಸ್‌ ಜಾರಿ ಮಾಡುವಂತೆ ಕೆಪಿಸಿಸಿ ಶಿಸ್ತು ಸಮಿತಿಗೆ ಸುರ್ಜೇವಾಲಾ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಠಿಣ ಕ್ರಮದ ಎಚ್ಚರಿಕೆ- ಸುರ್ಜೇವಾಲಾ

ಈ ಬಗ್ಗೆ ಟ್ವೀಟ್‌ ಮಾಡಿರುವ ಸುರ್ಜೇವಾಲಾ, ಕಾಂಗ್ರೆಸ್‌ನ ಎಲ್ಲ ನಾಯಕರಿಗೂ ಸೂಚಿಸುತ್ತಿದ್ದೇನೆ. ಶಾಸಕಾಂಗ ಪಕ್ಷದ ನಾಯಕತ್ವದ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡುವಂತಿಲ್ಲ. ಇನ್ನು ಮುಂದೆ ನೀಡುವ ಯಾವುದೇ ಹೇಳಿಕೆಯನ್ನೂ ಪಕ್ಷದ ಶಿಸ್ತು ಉಲ್ಲಂಘನೆ ಎಂದು ಪರಿಗಣಿಸಲಾಗುವುದು. ಶಿಸ್ತು ಉಲ್ಲಂಘಿಸಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 ಸಿಎಂ ಎಂಬ ಸುದ್ದಿ; ಪಾಲಿ​ಕೆ​ಯಲ್ಲಿ ಸಿಹಿ ಹಂಚಿಕೆ!

ಶಿವಮೊಗ್ಗ: ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಆಯ್ಕೆಯಾಗಿದ್ದಾರೆ ಎಂಬರ್ಥದ ಸುದ್ದಿಯು ಟಿವಿ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ ಸದಸ್ಯರು, ಪಕ್ಷದ ಪದಾಧಿಕಾರಿಗಳು ಸಿಹಿ ಹಚ್ಚಿ ಸಂಭ್ರಮಿಸಿದರು.

Sexual Harassment Case; ಬಂಧನ ಭೀತಿಯಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಪಾರು...

ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌ ನೇತೃತ್ವದಲ್ಲಿ ಪಾಲಿಕೆಯ ಅವರ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್‌, ಜಿಲ್ಲಾ ಯವ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಗಿರೀಶ್‌, ಯುವ ಕಾಂಗ್ರೆಸ್‌ ಪ್ರಮುಖರಾದ ಎನ್‌.ಕುಮಾರೇಶ್‌, ಟಿ.ವಿ.ರಂಜಿತ್‌, ಎಂ.ರಾಕೇಶ್‌, ಮೋಹನ್‌, ಪುಷ್ಪಕ್‌ ಕುಮಾರ್‌, ಎಂ.ಎನ್‌. ಮುರಳಿ ಮತ್ತಿತರರು ಇದ್ದರು.

Follow Us:
Download App:
  • android
  • ios