ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಲ್ಲಿ 700 ಅಮಾಯಕರು ಪೊಲೀಸರ ದೌರ್ಜನ್ಯ, ಸರ್ಕಾರದ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡಾಗ ಕನಿಷ್ಠ ಸಂತಾಪವನ್ನೂ ಸೂಚಿಸದ ನಿಮಗೆ ರೈತರ ಸಮ್ಮಾನ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಮೋದಿ ಅವರನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ 

ಬೆಂಗಳೂರು(ಏ.21): ಬಿಜೆಪಿ ಅಳೆದು ತೂಗಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದರೂ ಅದರಲ್ಲಿರುವುದು ದೊಡ್ಡದಾದ ಖಾಲಿ ಚೊಂಬು ಮಾತ್ರ. ನರೇಂದ್ರ ಮೋದಿ ಮತ್ತು ಅವರ ಪಕ್ಷಕ್ಕೆ ದಮ್ಮು, ತಾಕತ್ ಇದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ 3 ನೀಡಲಾಗಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ? ಎಂಬ ಲೆಕ್ಕ ಮತದಾರರ ಮುಂದಿಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ 'ರೈತರು ದೆಹಲಿಗೆ ಬರದಂತೆ ರಸ್ತೆ ಮೇಲೆ ಮುಳ್ಳು ನೆಟ್ಟು, ಗುಂಡಿ ತೋಡಿದಿರಿ. ಇದೀಗ ಚುನಾವಣೆಯ ಕಾಲದಲ್ಲಿ ಮಾತ್ರ ತಪ್ಪದೆ ಹಾಜ ರಾಗಿ ರೈತರ ಪರ ಪ್ರೀತಿ-ಕಾಳಜಿಯ ಮಳೆ ಸುರಿಸಿದರೆ ರಾಜ್ಯದ ರೈತರು ನಿಮ್ಮನ್ನು ನಂಬುತ್ತಾರಾ?' ಎಂದು ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರೇ, ಎದೆ ಮೇಲೆ ಕೈಯಿಟ್ಟು ಆತ್ಮಸಾಕ್ಷಿಗೆ ಕಿವಿಕೊಟ್ಟು ಹೇಳಿ, ನೀವು ನಿಜವಾಗಿ ರೈತರ ಹಿತೈಷಿಗಳಾ? ಹಿತಶತ್ರುಗಳಾ? ರೈತರ ಪಾಲಿನ ಮರಣ ಶಾಸನದಂತಿದ್ದ ಕೃಷಿ ಕ್ಷೇತ್ರದ ಐದು ಕರಾಳ ಕಾಯ್ದೆಗಳನ್ನು ಬಲವಂತವಾಗಿ ಜಾರಿಗೊಳಿಸಲು ಪ್ರಯತ್ನಿಸಿದವರು ಯಾರು?

ಪ್ರತಿಪಕ್ಷಗಳಿಂದ ನೇಹಾ ಹತ್ಯೆ ಪ್ರಕರಣ ರಾಜಕೀಯಕ್ಕೆ ಬಳಕೆ: ಸಿಎಂ ಸಿದ್ದರಾಮಯ್ಯ

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಲ್ಲಿ 700 ಅಮಾಯಕರು ಪೊಲೀಸರ ದೌರ್ಜನ್ಯ, ಸರ್ಕಾರದ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡಾಗ ಕನಿಷ್ಠ ಸಂತಾಪವನ್ನೂ ಸೂಚಿಸದ ನಿಮಗೆ ರೈತರ ಸಮ್ಮಾನ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ನೆರೆ ಬಂದಾಗ ಬರಲಿಲ್ಲ. ಬರ ಬಿದ್ದಾಗ ಬರಲಿಲ್ಲ, ಬೆಳೆ ಕಳೆದುಕೊಂಡ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಪರಿಹಾರ ನೀಡಲಿಲ್ಲ. ನಾನೇ ಖುದ್ದಾಗಿ ದೆಹಲಿಗೆ ಬಂದು ಭೇಟಿ ಮಾಡಿ ಮನವಿ ಕೊಟ್ಟರೂ ಇಲ್ಲಿಯ ವರೆಗೆ ಪೈಸೆ ಹಣ ನೀಡಿಲ್ಲ. ಇಂತಹ ನಿಮ್ಮನ್ನು ರಾಜ್ಯದ ರೈತರು ನಂಬುತ್ತಾರಾ ಎಂದು ಕಿಡಿ ಕಾರಿದ್ದಾರೆ.