ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ. ರಾಮನಗರದ ಅಭಿವೃದ್ಧಿ ಪರ್ವವನ್ನು ವೇಗಗೊಳಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ನಾವು ಮಾಡಿ ತೋರಿಸ್ತೀವಿ. ಜನವರಿ ವೇಳೆಗೆ ರಾಮನಗರಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ರಾಮನಗರ (ಸೆ.08): ರಾಮನಗರ ಮತ್ತು ಕನಕಪುರ ಎರಡು ಕಡೆ ಮೆಡಿಕಲ್ ಕಾಲೇಜು ಬೇಕು ಎಂದರೆ ಎರಡೂ ಕಡೆ ನಿರ್ಮಾಣ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಐಜೂರು ವೃತ್ತದಲ್ಲಿ ಭಾರತ್ ಜೋಡೋ ಯಾತ್ರೆಯ ನೆನಪಿನಾರ್ಥ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಕನಕಪುರದಲ್ಲಿ ಮೆಡಿಕಲ್ ಕಾಲೇಜು ಮಾಡುತ್ತೇವೆ. ರಾಮನಗರದಲ್ಲಿ ಅಗತ್ಯವಿದ್ದರೆ ಇಲ್ಲೂ ನಿರ್ಮಾಣ ಮಾಡುತ್ತೇವೆ. ಇದಕ್ಕೆ ಸಮಯ ಹಿಡಿಯಬಹುದು ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಅಶ್ವತ್ಥ ನಾರಾಯಣ ಜಿಲ್ಲೆಗೆ ಏಕೆ ಮೆಡಿಕಲ್ ಕಾಲೇಜು ಕೊಡಲಿಲ್ಲ. ಕನಕಪುರ ತಾಲೂಕಿಗೆ ಘೋಷಣೆಯಾಗಿದ್ದ ಮೆಡಿಕಲ್ ಕಾಲೇಜನ್ನು ಸಚಿವರಾಗಿದ್ದ ಸುಧಾಕರ್ ಚಿಕ್ಕಬಳ್ಳಾಪುರಕ್ಕೆ ತಗೊಂಡು ಹೋದರು. ಇಬ್ಬರೂ ಬಿಜೆಪಿಯವರೇ. ಇವರಿಂದಲೇ ಜಿಲ್ಲೆಗೆ ಅನ್ಯಾಯವಾಗಿದೆ. ಇವರ ಜೊತೆ ಕೈ ಜೋಡಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಇಬ್ಬರಿಗೂ ರಾಮನಗರ ಬಂದ್ ಕರೆಯಲು ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲಾ ಬರಗಾಲ ಬರುವುದು ಸತ್ಯ: ಸಿ.ಟಿ.ರವಿ
ರಾಮನಗರಕ್ಕೆ ವಿಶೇಷ ಅನುದಾನ: ರಾಮನಗರ ಜಿಲ್ಲೆಯ ಇವತ್ತಿನ ದುಸ್ಥಿತಿಗೆ ಯಾರು ಕಾರಣ ? ಇಷ್ಟು ವರ್ಷ ರಾಮನಗರ ಜಿಲ್ಲೆ ಯಾರ ಹಿಡಿತದಲ್ಲಿತ್ತು ಎಂದು ಸಾರ್ವಜನಿಕರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಸಾರ್ವಜನಿಕರು ಜೆಡಿಎಸ್ ಎಂದು ಕೂಗಿದರು. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಜಿಲ್ಲೆಯ ಜನ ಸಾಕ್ಷಿಯಾಗುತ್ತಾರೆ. ಸಂಸದ ಡಿ.ಕೆ.ಸುರೇಶ್ ಅವರು ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ. ರಾಮನಗರದ ಅಭಿವೃದ್ಧಿ ಪರ್ವವನ್ನು ವೇಗಗೊಳಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ನಾವು ಮಾಡಿ ತೋರಿಸ್ತೀವಿ. ಜನವರಿ ವೇಳೆಗೆ ರಾಮನಗರಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯವನ್ನು ಕತ್ತಲೆಯಲ್ಲಿಡುವುದು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ಗೋವಿಂದ ಕಾರಜೋಳ ಟೀಕೆ
ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿ ಮೇಕೆದಾಟು ಯೋಜನೆ ಜಾರಿ ಮಾಡುವ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಐಜೂರು ವೃತ್ತದಲ್ಲಿ ಭಾರತ್ ಜೋಡೋ ಯಾತ್ರೆಯ ನೆನಪಿನಾರ್ಥ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟೆ ನಿರ್ಮಾಣವಾಗಿದ್ದರೆ ಮಳೆ ಇಲ್ಲದಿದ್ದಾಗ ತಮಿಳುನಾಡಿಗೆ ನೀರು ಹರಿಸಲು ಅನುಕೂಲವಾಗುತ್ತಿತ್ತು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆ ಜಾರಿಗೆ ಅನುಮತಿ ನೀಡುತ್ತಿಲ್ಲ ಎಂದು ದೂರಿದರು. ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಮಾಡಿದ್ದೇವೆ.ಕೇಂದ್ರದ ಮೇಲೆ ಒತ್ತಡ ಹಾಕಿ ಮೇಕೆದಾಟು ಯೋಜನೆ ಜಾರಿ ಮಾಡುವ ವಿಶ್ವಾಸ ನಂಬಿಕೆ ಇದೆ. ಈ ಯೋಜನೆ ಕರ್ನಾಟಕದೊಳಗೆ ಮಾಡುತ್ತೇವೆ. ತಮಿಳುನಾಡಿನವರಿಗೆ ರಾಜಕೀಯ ಕಾರಣಕ್ಕಾಗಿ ಸುಮ್ಮನೆ ಕ್ಯಾತೆ ತೆಗೆಯದಂತೆ ನಾನು ಹೇಳುತ್ತೇನೆ ಎಂದು ತಿಳಿಸಿದರು.