Asianet Suvarna News Asianet Suvarna News

ಬಿಜೆಪಿಯವರು ನಾಥೂರಾಮ್ ಗೋಡ್ಸೆ ವಂಶಸ್ಥರು: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧಿಯನ್ನು ಹತ್ಯೆಗೈದ ನಾಥುರಾಮ್ ಗೂಡ್ಸೆ ವಂಶದವರು. ಈಗ ಮತ್ತೆ ದೇಶವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು. 

CM Siddaramaiah Slams On BJP At Ramanagara gvd
Author
First Published Sep 8, 2023, 1:14 PM IST

ರಾಮನಗರ (ಸೆ.08): ಬಿಜೆಪಿಯವರು ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯನ್ನು ಹತ್ಯೆಗೈದ ನಾಥುರಾಮ್ ಗೂಡ್ಸೆ ವಂಶದವರು. ಈಗ ಮತ್ತೆ ದೇಶವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು. ನಗರದ ಐಜೂರು ವೃತ್ತದಲ್ಲಿ ಭಾರತ್ ಜೋಡೋ ಯಾತ್ರೆ ನೆನಪಿನಾರ್ಥ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದ್ದ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಟೀಕಿಸಿದರು.

ಮಹಾತ್ಮಗಾಂಧಿಯನ್ನು ಗುಂಡಿಟ್ಟು ಕೊಲ್ಲುವಂತದ್ದು ಏನಾಗಿತ್ತು. ಗಾಂಧಿ ಸ್ವಾತಂತ್ರ್ಯಹೋರಾಟದ ನೇತೃತ್ವ ವಹಿಸಿದ್ದೆ ತಪ್ಪಾಯಿತಾ? ಗಾಂಧಿ ಬ್ರಿಟಿಷರನ್ನು ವಿರೋಧಿಸಿದರು ಎನ್ನುವ ಕಾರಣಕ್ಕೆ ಕೊಂದಿದ್ದಾರೆ ಎಂದು ಬಿಜೆಪಿಯವರನ್ನು ಪ್ರಶ್ನಿಸಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ದೇಶದ ಜನರನ್ನು ಇಬ್ಬಾಗ ಮಾಡುವ, ಅವರ ಭಾವನೆಗಳನ್ನು ಕೆರಳಿಸುವ, ಮನಸ್ಸುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದರಿಂದಲೇ ಸಮಾಜ ಒಡೆದು ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಅನೇಕ ಧರ್ಮಗಳು, ಜಾತಿಗಳು, ಭಾಷೆ ಗಳು, ಸಂಸ್ಕೃತಿಗಳು ಇವೆ. ಬಿಜೆಪಿಯವರು ಅದರ ಲಾಭ ಪಡೆದುಕೊಂಡು ಧರ್ಮ, ಜಾತಿ, ಭಾಷೆ ಆಧಾರದ ಮೇಲೆ ಸಮಾಜ ಒಡೆಯುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ನೆಮ್ಮದಿಯಿಂದ ಬದಕುವ ಪರಿಸ್ಥಿತಿ ಇಲ್ಲದಂತೆ ಮಾಡುತ್ತಿದ್ದಾರೆ. ಎಲ್ಲರು ಆತಂಕದಲ್ಲಿಯೇ ಜೀವಿಸುವ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದರು. ಈ ಕಾರಣದಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಲೋಚನೆ ಮಾಡಿ ದೇಶದ ಒಗ್ಗಟ್ಟು ಉಳಿಯಬೇಕು. ಎಲ್ಲ ಭಾರತೀಯರು ಅಣ್ಮ ತಮ್ಮಂದಿರಂತೆ ಬದುಕುವ ವಾತಾವರಣ ನಿರ್ಮಾಣವಾಗಬೇಕು. 

ದೇಶದಲ್ಲಿ ಐಕ್ಯತೆ ಇರಬೇಕೆಂದು ಎಲ್ಲ ಜಾತಿ, ಧರ್ಮ, ಭಾಷೆಯ ಜನರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಭಾರತ್ ಜೋಡೋ ಎಂಬ ಐತಿಹಾಸಿಕ ಪಾದಯಾತ್ರೆ ನಡೆಸಿದರು ಎಂದು ತಿಳಿಸಿದರು. ದೇಶದ ಐಕ್ಯತೆಗಾಗಿ ಕಾಂಗ್ರೆಸ್ ನಾಯಕರಾದ ಮಹಾತ್ಮಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ಪ್ರಾಣ ಬಿಟ್ಟಿದ್ದಾರೆ. ಬಿಜೆಪಿಯವರು ಯಾರಾದರು ಒಬ್ಬರು ದೇಶಕ್ಕಾಗಿ ಪ್ರಾಣ ಬಿಟ್ಟಿರುವ ಉದಾಹರಣೆ ಇಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲಿಗೂ ಹೋಗಿಲ್ಲ. ಅದರ ಬದಲು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರಿಗೆ ಗುಂಡಿಟ್ಟು ಕೊಂದವರ ವಂಶಕ್ಕೆ ಬಿಜೆಪಿಯವರು ಸೇರಿದವರು ಎಂಬುದನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿರವರು ತಮ್ಮ ಸ್ವಾರ್ಥಕ್ಕಾಗಿ ಪಾದಯಾತ್ರೆ ಮಾಡಲಿಲ್ಲ. ಆದರೆ, ಅವರ ಪಾದಯಾತ್ರೆ ಕರ್ನಾಟಕದಲ್ಲಿ ನವ ಚೈತನ್ಯ ಮೂಡಿಸಿತು. ನಿಜ ಹೇಳಬೇಕೆಂದರೆ ವಿಧಾನಸಭಾ ಚುನಾವಣೆಯ ಪ್ರಚಾರ ಅವರ ಪಾದಯಾತ್ರೆ ಮೂಲಕವೇ ಆರಂಭವಾಯಿತು. ತುರುವೇಕೆರೆ ಕ್ಷೇತ್ರ ಹೊರತುಪಡಿಸಿ ರಾಹುಲ್ ಗಾಂಧಿ ಪಾದಯಾತ್ರೆ ಸಾಗಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ದೊಡ್ಡ ಅಂತರದಲ್ಲಿ ಗೆದ್ದಿದೆ. ಅದೇ ಪ್ರಧಾನಿ ಮೋದಿಯವರು ರೋಡ್ ಶೋ , ಸಾರ್ವಜನಿಕ ಸಭೆ ನಡೆಸಿದ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ನಾಡಿನ ಜನರು ಸಮಾಜ ಒಡೆಯುವ ಬಿಜೆಪಿಯನ್ನು ಸೋಲಿಸಿ, ಬಡವರ ಪರವಾಗಿರುವ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದು ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಕರ್ನಾಟಕದಲ್ಲಿ ಸೋತಿದ್ದಕ್ಕೆ ಬೇಸತ್ತು ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಿಲ್ಲ. ದೆಹಲಿಯಲ್ಲಿ ಅಧಿಕಾರ ಹಿಡಿದಿರುವ ಪಕ್ಷಕ್ಕೆ ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲದಂತಾಗಿದೆ. ವಿಪಕ್ಷ ನಾಯಕ ಇಲ್ಲದೆಯೇ ಅಧಿವೇಶನವೂ ನಡೆಯಿತು. ಕರ್ನಾಟಕದ ಇತಿಹಾಸದಲ್ಲಿ ಇಂತಹ ದುಸ್ಥಿತಿ ಯಾವ ಕಾಲದಲ್ಲಿಯೂ ಯಾವ ಪಕ್ಷಕ್ಕೂ ಬಂದಿರಲಿಲ್ಲ ಎಂದು ಸಿದ್ದರಾಮಯ್ಯ ಛೇಡಿಸಿದರು. ಈ ಹಿಂದೆ ಮನಮೋಹನ್ ಸಿಂಗ್ ಸರ್ಕಾರ 77 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಜೇಬಿಗೆ ಹಣ ಹಾಕುತ್ತಿದೆ. ಆದರೆ, ಪ್ರಧಾನಿ ಮೋದಿಯವರ ಸರ್ಕಾರ ಅಂಬಾನಿ, ಅದಾನಿ ಜೇಬಿಗೆ ಹಣ ಹಾಕುತ್ತಿದೆ. ಈ ವ್ಯತ್ಯಾಸವನ್ನು ಜನರು ಅರ್ಥ ಮಾಡಿಕೊಳ್ಳಬೇಕು. ನೀವು ಅವರಿಗೆ ಮತ ನೀಡುತ್ತೀರಾ ಎಂದು ಪ್ರಶ್ನಿಸಿದರು. 

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲಾ ಬರಗಾಲ ಬರುವುದು ಸತ್ಯ: ಸಿ.ಟಿ.ರವಿ

ಪ್ರಧಾನಿ ಮೋದಿರವರು ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಈಗ ರಾಜ್ಯ ದಿವಾಳಿ ಆಯಿತಾ. ನೀವು ಉದ್ಯಮಿಗಳ 14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದಾಗ ದೇಶ ದಿವಾಳಿ ಆಗಲಿಲ್ಲವೇ ಎಂದು ಪ್ರಶ್ನೆ ಮಾಡಿದರು. ಕಾಂಗ್ರೆಸ್ ಸರ್ಕಾರ ನಾಲ್ಕು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಈಡೇರಿಸಿದೆ. ಉಳಿದಿರುವ ಪದವೀಧರರಿಗೆ ಗೌರವಧನ ನೀಡುವ ಯೋಜನೆ ಜನವರಿಯಿಂದ ಜಾರಿಗೆ ಬರಲಿದೆ. ಬಸವಾದಿ ಶರಣರು ನುಡಿದಂತೆ ಕಾಂಗ್ರೆಸ್ ಸರ್ಕಾರ ನಡೆಯಲಿದೆ. ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಜಾರಿಗೊಳಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Follow Us:
Download App:
  • android
  • ios