ಅತೀ ಹೆಚ್ಚು ಅಶಿಸ್ತು ಇರೋ ಪಕ್ಷ ಬಿಜೆಪಿ: ಸಿಎಂ ಸಿದ್ದರಾಮಯ್ಯ
ಬಿಜೆಪಿಯಲ್ಲಿ ಗುಂಪುಗಾರಿಕೆ, ಅಶಿಸ್ತು ಇರುವುದಕ್ಕೆ, ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ಆಗುತ್ತಿರುವ ವಿಳಂಬವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು (ಜು.04): ಬಿಜೆಪಿಯಲ್ಲಿ ಗುಂಪುಗಾರಿಕೆ, ಅಶಿಸ್ತು ಇರುವುದಕ್ಕೆ, ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ಆಗುತ್ತಿರುವ ವಿಳಂಬವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ವಿಧಾನ ಪರಿಷತ್‌ನ ಮೂವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರ ಕುರಿತ ಪ್ರಶ್ನೆಗೆ, ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಅನ್ನೋದು ವಿಪಕ್ಷ ನಾಯಕನ ಆಯ್ಕೆ ವಿಳಂಬದಿಂದ ಸ್ಪಷ್ಟವಾಗಿ ಗೊತ್ತಾಗುತ್ತೆ. ಬಿಜೆಪಿ ನಾಯಕರು ತಮ್ಮ ಪಕ್ಷ ಶಿಸ್ತಿನ ಪಕ್ಷ ಅಂತ ಹೇಳ್ಕೊಳ್ತಾರೆ. ಅತೀ ಹೆಚ್ಚು ಅಶಿಸ್ತು ಇರೋ ಪಕ್ಷ ಬಿಜೆಪಿ ಎಂದು ಹೇಳಿದರು.
ದೋಷ ಸರಿಪಡಿಸಿ ಜಾತಿ ಗಣತಿ ವರದಿ ಸ್ವೀಕಾರ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿರುವ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ (ಜಾತಿ ಗಣತಿ) ವರದಿಯನ್ನು ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಿದ ನಂತರ ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಬೆಂಗಳೂರು ಶಾಖಾ ಮಠದ ಭೂಮಿ ಪೂಜೆ ಮತ್ತು ನೂತನ ಸಚಿವ-ಶಾಸಕರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ದ.ಕ ಜಿಲ್ಲೆ ಭಾರೀ ಮಳೆ ಸಾಧ್ಯತೆ: ತಹಶೀಲ್ದಾರ್‌ಗಳಿಗೆ ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರ: ಡಿಸಿ ಆದೇಶ
ಸಮಾಜದಲ್ಲಿ ಜಾತಿ ವ್ಯವಸ್ಥೆಯ ಕಾರಣಕ್ಕೆ ಅನ್ಯಾಯಕ್ಕೆ ಒಳಪಟ್ಟು ಅವಕಾಶ ವಂಚಿತರಾಗಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಗೆ ಬಲಿ ಪಶುಗಳಾಗಿರುವವರ ಏಳಿಗೆಗೆ ಜಾತಿಗಣತಿ ವರದಿ ಸಹಕಾರಿಯಾಗಲಿದೆ. ಸಮಾಜದ ತಾರತಮ್ಯ ನಿವಾರಣೆಗೆ ಈ ರೀತಿಯ ಗಣತಿ ಮತ್ತು ಅಧ್ಯಯನಗಳು ಅಗತ್ಯ. ಜೆಡಿಎಸ್-ಕಾಂಗ್ರೆಸ್ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರೇ ಜಾತಿಗಣತಿಯನ್ನು ಪಡೆಯಬಾರದೆಂದು ಆಗ ಸಚಿವರಾಗಿದ್ದ ಪುಟ್ಟರಂಗಶೆಟ್ಟಿಗೆ ಹೇಳಿದ್ದರು. ಜಾತಿ ಗಣತಿ ವರದಿ ಬಹಿರಂಗವಾಗಿದೆ ಎಂಬುದಾಗಿ ವಿರೋಧ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಯಾರು ಏನೇ ಹೇಳಿದರು ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಿದ ನಂತರ ಜಾತಿ ಗಣತಿ ವರದಿಯನ್ನು ನಮ್ಮ ಸರ್ಕಾರ ಸ್ವೀಕರಿಸಲಿದೆ ಎಂದು ಭರವಸೆ ನೀಡಿದರು.
ಆಸ್ಪತ್ರೆ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ವಿಫಲ: ಸಚಿವ ಚಲುವರಾಯಸ್ವಾಮಿ ಅಸಮಾಧಾನ
ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿ ಜಾರಿ: ನಮ್ಮ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡಿಯೇ ತೀರುತ್ತೇವೆ. ವಿರೋಧ ಪಕ್ಷದವರು ಎಷ್ಟೇ ಅಪಪ್ರಚಾರ ಮಾಡಿದರೂ ಈ ವರ್ಷದ ಬಜೆಟ್‌ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.