ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ. ವಿಜಯೇಂದ್ರ ಅವರೇನು ಪುರೋಹಿತನಾ? ಜ್ಯೋತಿಷಿನಾ? ಎಂದು ಹರಿಹಾಯ್ದಿದ್ದಾರೆ. 

ಬೆಳಗಾವಿ (ಅ.14): ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ. ವಿಜಯೇಂದ್ರ ಅವರೇನು ಪುರೋಹಿತನಾ? ಜ್ಯೋತಿಷಿನಾ? ಎಂದು ಹರಿಹಾಯ್ದಿದ್ದಾರೆ. ಸವದತ್ತಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯೇಂದ್ರ ಅವರು ದಸರಾ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದಿದ್ದರು. 

ದಸರಾ ಮುಗೀತಲ್ವಾ? ನಾನೇನು ರಾಜೀನಾಮೆ ಕೊಟ್ಟಿದ್ದೇನಾ? ವಿಜಯೇಂದ್ರಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಏನಿದೆ? ಎಂದು ಆಕ್ರೋಶ ಹೊರಹಾಕಿದರು. ಪೋಸ್ಕೋ ಪ್ರಕರಣದಲ್ಲಿ ಅವರ ತಂದೆ ಬಿ.ಎಸ್‌.ಯಡಿಯೂರಪ್ಪ ಬೇಲ್‌ ಮೇಲೆ ಇದ್ದಾರೆ. ಮೊದಲು ವಿಜಯೇಂದ್ರ‌ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಆ ನಂತರ ನಮ್ಮ ವಿರುದ್ಧ ಮಾತನಾಡಲಿ ಎಂದರು.

ತಿರುಪತಿ ಮಾದರಿಯಲ್ಲಿ ಸವದತ್ತಿ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ವಾಣಿಜ್ಯ ಬ್ಯಾಂಕ್‌ಗಳಿಗೆ ಸಹಕಾರಿಗಳು ಸ್ಪರ್ಧೆ ನೀಡುವಂತಾಗಲಿ: ಸಹಕಾರಿ ಕ್ಷೇತ್ರದ ಬ್ಯಾಂಕ್‌ಗಳು ವಾಣಿಜ್ಯ ಬ್ಯಾಂಕ್‌ಗಳ ಸ್ಪರ್ಧೆ ನೀಡುವ ಜತೆಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಬೆಳೆದರೆ ಸಹಕಾರಿ ರಂಗದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿಯ ರಡ್ಡಿ ಸಹಕಾರ ಬ್ಯಾಂಕ್‌ ನಿಯಮಿತ ನಗರದ ಡಾ. ಡಿ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಬ್ಯಾಂಕ್‌ ಶತಮಾನೋತ್ಸವ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಸಹಕಾರಿ ಬ್ಯಾಂಕ್‌ಗಳು ಜಿಲ್ಲಾ ಮಟ್ಟದಲ್ಲಿ ಪ್ರಮುಖ ಬ್ಯಾಂಕ್‌ಗಳಾಗಿ ಹೊರಹೊಮ್ಮಬೇಕು. 

ಶಾಖೆಗಳ ಹೆಚ್ಚಳದ ಜತೆಗೆ ವಹಿವಾಟು ಹೆಚ್ಚಳಕ್ಕೂ ಪ್ರಯತ್ನಿಸಬೇಕು. ಸಹಕಾರಿ ಬ್ಯಾಂಕ್‌ಗಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರ ಬದ್ಧವಾಗಿದ್ದು, ಅಗತ್ಯ ನೆರವು ನೀಡಲಿದೆ ಎಂದರು. ಒಂದು ಸಹಕಾರಿ ಬ್ಯಾಂಕ್‌ ಶತಮಾನೋತ್ಸವ ಆಚರಿಸುವುದು ಸಣ್ಣ ಮಾತಲ್ಲ. ರಡ್ಡಿ ಬ್ಯಾಂಕ್‌ 110 ವರ್ಷ ಪೂರೈಸಿರುವುದು ಆಡಳಿತ ಮಂಡಳಿಯ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ. ಆಡಳಿತ ಮಂಡಳಿ ಪ್ರಾಮಾಣಿಕವಾಗಿರದಿದ್ದರೆ, ಹೆಗ್ಗಣಗಳು ಸೇರಿ ಕೊರೆಯಲು ಆರಂಭಿಸುತ್ತವೆ. ಹೀಗಾಗಿ ಆಡಳಿತ ಮಂಡಳಿ ಪ್ರಾಮಾಣಿಕ ಕಾರ್ಯ ಅತ್ಯಂತ ಮುಖ್ಯ. 

ರಾಜ್ಯದಿಂದ ಮಾಹಿತಿ ಪಡೆದೇ ಆಯೋಗದಿಂದ ಹಣ ಬಿಡುಗಡೆ: ಎಚ್.ಡಿ.ಕುಮಾರಸ್ವಾಮಿ

ಈ ಬ್ಯಾಂಕ್‌ ಈ ಮಟ್ಟಕ್ಕೆ ಬೆಳೆಯಲು ಸಹಕಾರಿ ಭೀಷ್ಮ ಕೆ.ಎಚ್‌. ಪಾಟೀಲರ ಕೊಡುಗೆಯೂ ಅಪಾರವಾಗಿದೆ. ಪಾಟೀಲ ಅವರು ಅತ್ಯಂತ ಕಡಿಮೆ ಅವಧಿಯಲ್ಲೇ ಅಪಾರ ಸೇವೆ ಸಲ್ಲಿಸಿದ್ದಾರೆ. ರಡ್ಡಿ ಬ್ಯಾಂಕ್‌ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಎತ್ತರಕ್ಕೆ ಬೆಳೆಯಲು, ರೈತರಿಗೆ ಸಹಾಯ ಮಾಡಲಿ ಎಂದರು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ನ್ಯಾಯ ಸಿಕ್ಕಾಗ ಮಾತ್ರ ಅಸಮಾನತೆ ಹೋಗಲಾಡಿಸಬಹುದು. ಈ ಅಸಮಾನತೆ ಹೋಗಲಾಡಿಸುವಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಸಹ ಅಪಾರವಾಗಿದೆ. ಹೀಗಾಗಿ ಸಹಕಾರ ಬ್ಯಾಂಕ್‌ ರೈತರ ಅನುಕೂಲತೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದರು.