ಹರೀಶ್ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿಎಂ ಸಿದ್ದರಾಮಯ್ಯ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಎಂಎಲ್ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್‌ಎ ಆದ ಮಾತ್ರಕ್ಕೆ ಪೊಲೀಸರ ಮೇಲೆ ಗಲಾಟೆ ಮಾಡಬಹುದಾ? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರು (ಮೇ.26): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಎಂಎಲ್ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್‌ಎ ಆದ ಮಾತ್ರಕ್ಕೆ ಪೊಲೀಸರ ಮೇಲೆ ಗಲಾಟೆ ಮಾಡಬಹುದಾ? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವರ ದರ್ಶನಕ್ಕೆ ಆಗಮಿಸಿದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಪ್ರಕರಣದಲ್ಲಿ ಪೂಂಜ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.
ಜಾಮೀನು ರಹಿತ ಅಪರಾಧ: ಹರೀಶ್ ಪೂಂಜ ವಿರುದ್ಧ ಐಪಿಸಿ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ಜಾಮೀನು ರಹಿತ ಅಪರಾಧ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಹರೀಶ್ ಪೂಂಜ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲಗಳೆಯಬಹುದಾ? ಎಂಎಲ್ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಹರೀಶ್ ಪೂಂಜ ಮೇಲೆ ಎರಡು ಎಫ್ಐಆರ್ ದಾಖಲಾಗಿವೆ. ಅವರು ಗಲಾಟೆ ಮಾಡಿದ್ದು ಯಾರ ಪರವಾಗಿ ಗೊತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜ, ಶಶಿಧರ ಹೆಗ್ಡೆ, ಶಾಹುಲ್ ಹಮೀದ್ ಮತ್ತಿತರರು ಇದ್ದರು.
ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ ವ್ಯಂಗ್ಯ
ಹೈಕಮಾಂಡ್ ಯತೀಂದ್ರಗೆ ಎಂಎಲ್ಸಿ ಮಾಡ್ತೀವಿ ಅಂತ ಭರವಸೆ ಕೊಟ್ಟಿದ್ದರು: ಹೈಕಮಾಂಡ್ ನವರು ಯತೀಂದ್ರನಿಗೆ ಎಂಎಲ್ಸಿ ಮಾಡ್ತೀವಿ ಅಂತ ಭರವಸೆ ಕೊಟ್ಟಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಡಾ. ಯತೀಂದ್ರ ಸಿದ್ದರಾಮಯ್ಯಗೆ ವಿಧಾನಪರಿಷತ್ ಟಿಕೆಟ್ ವಿಚಾರಕ್ಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೆ. ಹೈಕಮಾಂಡ್ ಕೋಲಾರ ಬೇಡ ವರುಣದಿಂದ ಸ್ಪರ್ಧೆ ಮಾಡಿ ಅಂತ ಹೇಳಿದ್ದರು ಎಂದರು. ಆಗ ಯತೀಂದ್ರ ಹಾಲಿ ಎಂಎಲ್ಎ ಆಗಿದ್ದರು. ಹೈಕಮಾಂಡ್ ಆಗ ಯತೀಂದ್ರಗೆ ಸೀಟು ಬಿಟ್ಟುಕೊಡಿ, ಮುಂದೆ ನಿಮ್ಮನ್ನು ಎಂಎಲ್ಸಿ ಮಾಡ್ತೇವೆ ಅಂತ ಹೇಳಿದ್ದರು. ಈಗ ಅವರು ಏನು ಮಾಡ್ತಾರೆ ಅಂತ ಗೊತ್ತಿಲ್ಲ ಎಂದು ಅವರು ಹೇಳಿದರು.