Asianet Suvarna News Asianet Suvarna News

Guarantee ವಿರೋಧಿಸುವವರು ಬಡವರ ವಿರೋಧಿಗಳು: ಎಚ್‌ಡಿಕೆಗೆ ಸಿಎಂ ಸಿದ್ದು ಕಿಡಿ

‘ಎಚ್.ಡಿ. ಕುಮಾರಸ್ವಾಮಿ ಅವರೇ ಯಾಕೆ ರಾಜ್ಯದ ಬಡವರ ಮೇಲೆ ನಿಮಗೆ ಈ ಪರಿಯ ದ್ವೇಷ? ನಮ್ಮ ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಸಂಖ್ಯೆಯಲ್ಲಿರುವ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ. ಯಾಕೆ ಬಡವರ ಹೊಟ್ಟೆಗೆ ಹೊಡೆಯುವ ಕಿಚ್ಚು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

CM Siddaramaiah Slams On HD Kumaraswamy Over Guarantee Schemes gvd
Author
First Published Nov 14, 2023, 3:30 AM IST

ಬೆಂಗಳೂರು (ನ.14): ‘ಎಚ್.ಡಿ.ಕುಮಾರಸ್ವಾಮಿ ಅವರೇ ಯಾಕೆ ರಾಜ್ಯದ ಬಡವರ ಮೇಲೆ ನಿಮಗೆ ಈ ಪರಿಯ ದ್ವೇಷ? ನಮ್ಮ ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಸಂಖ್ಯೆಯಲ್ಲಿರುವ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ. ಯಾಕೆ ಬಡವರ ಹೊಟ್ಟೆಗೆ ಹೊಡೆಯುವ ಕಿಚ್ಚು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ತಿರುಗೇಟು ನೀಡಿರುವ ಅವರು, ‘ನನ್ನನ್ನು ಟೀಕಿಸುವುದರಿಂದ ನಿಮ್ಮ ಮನಸಿಗೆ ಶಾಂತಿ ಸಿಗುವುದಿದ್ದರೆ ನಿಮ್ಮ ದ್ವೇಷಾಸೂಯೆ ಮುಂದುವರೆಯಲಿ. ಚುನಾವಣಾ ಸೋಲಿನ ನಿಮ್ಮ ನಿರಾಶೆ, ಅದರಿಂದಾಗಿರುವ ಹತಾಶೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ರಾಜ್ಯದ ಬಡವರನ್ನು ಯಾಕೆ ಈ ರೀತಿ ದ್ವೇಷಿಸುತ್ತಿದ್ದೀರಿ. ಬಡವರ ಕಲ್ಯಾಣ ಯೋಜನೆಗಳನ್ನು ಯಾಕೆ ವಿರೋಧಿಸುತ್ತಿದ್ದೀರಿ? ಕಳೆದ ಚುನಾವಣೆಯಲ್ಲಿ ಜನರು ನಿಮ್ಮ ಪಕ್ಷವನ್ನು ತಿರಸ್ಕರಿಸಿದ್ದಕ್ಕಾಗಿ ದ್ವೇಷವೇ?’ ಎಂದು ಕಿಡಿ ಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಬುರುಡೆ ಬಿಟ್ಟು ಹೋಗಿದ್ದಾರೆ: ಸಂಸದ ಮುನಿಸ್ವಾಮಿ ಟೀಕೆ

ರಾಜ್ಯದ ಕೋಟ್ಯಂತರ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಲಾಭ ಪಡೆದು ಸಂಭ್ರಮಿಸುತ್ತಿದ್ದಾರೆ. ಈ ಸಂಭ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮತದಾರರೂ ಸೇರಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಿತಾಂಶವನ್ನು ತಿಳಿದುಕೊಳ‍್ಳಬೇಕಾದ ಪ್ರಾಮಾಣಿಕ ಉದ್ದೇಶ ನಿಮಗಿದ್ದರೆ ಬೆಂಗಳೂರಿನಲ್ಲಿ ಕೂತು ಪತ್ರಿಕಾಗೋಷ್ಠಿ ನಡೆಸುವುದಲ್ಲ, ಹಳ್ಳಿಗಳಿಗೆ ಹೋಗಿ ಅಲ್ಲಿರುವ ಫಲಾನುಭವಿಗಳನ್ನು ಮಾತನಾಡಿಸಿ ಎಂದು ಸವಾಲು ಹಾಕಿದ್ದಾರೆ. ಗ್ಯಾರಂಟಿ ಯೋಜನೆಗಳು ಬಡವರಿಗಾಗಿ ರೂಪಿಸಿದ್ದೇ ಹೊರತು ಶ್ರೀಮಂತ ಉದ್ಯಮಿಗಳಿಗೆ ಅಲ್ಲ. ನಾವು ಶ್ರೀಮಂತ ಉದ್ಯಮಗಳಿಗೆ ಸಾಲಮನ್ನಾ, ತೆರಿಗೆ ವಿನಾಯಿತಿಯಂತೆ ಕಾರ್ಯಕ್ರಮ ನೀಡಿ ವಂಚಕ ಉದ್ಯಮಿಗಳಿಗೆ ನೆರವಾಗಿಲ್ಲ. ಮೊದಲು ಈ ಕೆಲಸ ಮಾಡುತ್ತಿರುವ ಕೇಂದ್ರದ ವಿರುದ್ಧ ಮಾತನಾಡಿ ಎಂದು ಹೇಳಿದ್ದಾರೆ.

‘ಬಿಟ್ಟಿ ಭಾಗ್ಯ’ಗಳೇ ಪಂಚರಾಜ್ಯಗಳಲ್ಲಿ ಬಿಜೆಪಿ ಪ್ರಣಾಳಿಕೆ: ಬಿಜೆಪಿ ಹಿಪಾಕ್ರಟಿಕ್ ನಡವಳಿಕೆಯನ್ನು ಇಡೀ ದೇಶ ಕಂಡು ಛೀಮಾರಿ ಹಾಕುತ್ತಿದೆ. ಮೊನ್ನೆವರೆಗೆ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿಭಾಗ್ಯ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ಐದು ರಾಜ್ಯಗಳ ಚುನಾವಣಾ ಪ್ರಣಾಳಿಕೆಯಲ್ಲಿ ಇಂತಹ ‘ಬಿಟ್ಟಿ ಭಾಗ್ಯ’ಗಳನ್ನೆ ಸೇರಿಸಿದೆ. ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರಿಗೆ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಟೀಕಿಸುವವರಿಗೆ ಕೋಲಾರ ಜಿಲ್ಲಾಭಿವೃದ್ಧಿಯೇ ಉತ್ತರ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್‌ಗಳೆರಡೂ ವಿರೋಧಿಸಿದ್ದವು. ಈಗ ನೀವು ಆಡಳಿತ್ತಿರುವ ನಾಟಕಗಳಿಗೆ ಲೋಕಸಭೆ ಚುನಾವಣೆಯಲ್ಲಿ ಜನರೇ ಪಾಠ ಕಲಿಸಿದ್ದಾರೆ ಎಂದು ಎಚ್ಚರಿಸಿದರು.

Follow Us:
Download App:
  • android
  • ios