ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕಳ್ಳೆತ್ತುಗಳು: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಕೆಲಸ ಮಾಡಿದವರಿಗಷ್ಟೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳೆತ್ತಿಗೆ ಹುಲ್ಲು ಹಾಕಬಾರದು. ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕಳ್ಳೆತ್ತುಗಳು ಎಂದು ಬಿಜೆಪಿ ಸಂಸದರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷ ವಾಗ್ದಾಳಿ ನಡೆಸಿದರು.
ರಾಮನಗರ (ಮಾ.11): ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಕೆಲಸ ಮಾಡಿದವರಿಗಷ್ಟೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳೆತ್ತಿಗೆ ಹುಲ್ಲು ಹಾಕಬಾರದು. ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕಳ್ಳೆತ್ತುಗಳು ಎಂದು ಬಿಜೆಪಿ ಸಂಸದರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷ ವಾಗ್ದಾಳಿ ನಡೆಸಿದರು. ಕೆಂಗೇರಿಯ ಸೂಲಿಕೆರೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಬಳಿ ಭಾನುವಾರ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಪುಟ್ಟಣ್ಣರವರು ಐದನೇ ಬಾರಿಗೆ ಆಯ್ಕೆಯಾಗಲು ಶ್ರಮಿಸಿದ ಶಿಕ್ಷಕರು, ಅಧ್ಯಾಪಕರು, ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಮುಖ್ಯಸ್ಥರು, ಸ್ನೇಹಿತರು, ಹಿತೈಷಿಗಳು ಮತ್ತು ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸುವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಅವರು 28ಕ್ಕೆ 28 ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ವ್ಯಂಗ್ಯವಾಡಿದರು.
2023-24 ರಲ್ಲಿ ಕರ್ನಾಟಕದಿಂದ 4.30 ಲಕ್ಷ ಕೋಟಿ ರು. ತೆರಿಗೆ ಸಂಗ್ರಹಿಸಿ ನೀಡಲಾಗಿದೆ. ಆದರೆ, ನಮಗೆ 50, 257 ಕೋಟಿ ರು. ಮಾತ್ರ ವಾಪಸ್ ಬಂದಿದೆ. ಇದು ಅನ್ಯಾಯ. ಹೀಗಾದರೆ ಕರ್ನಾಟಕದ ಅಭಿವೃದ್ಧಿ ಹೇಗಾಗಬೇಕು? ತೆರಿಗೆ ಹಂಚಿಕೆಯಲ್ಲಿ ನಮಗೆ ನ್ಯಾಯ ನೀಡಬೇಕು ಎಂದು ರಾಜ್ಯದ ಜನರೇ ಪ್ರಶ್ನಿಸುತ್ತಿದ್ದಾರೆ ಎಂದರು.
ಬಿಜೆಪಿ ನಾಯಕರ ತಾಳಕ್ಕೆ ಜೆಡಿಎಸ್ ಕುಣಿತ: ಸಿಎಂ ಸಿದ್ದರಾಮಯ್ಯ ಆರೋಪ
ಮೋದಿ ಹೆಸರಲ್ಲಿ ಗೆಲ್ಲುತ್ತೇವೆನ್ನುವಷ್ಟು ಮೂರ್ಖರು ಯಾರೂ ಇಲ್ಲ: ಪ್ರಧಾನಿ ಮೋದಿಯವರ ಹೆಸರಿನ ಮೇಲೆ ಗೆಲ್ಲುತ್ತೇವೆ ಎಂದು ಬಿಜೆಪಿ ಭಾವಿಸಿದೆ. ಮೋದಿಯವರು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಾದಯಾತ್ರೆ ಮಾಡಿದರೂ ನಮಗೆ 136 ಸ್ಥಾನಗಳು ದೊರೆತವು. ಮೋದಿಯವರು ಪ್ರಚಾರ ಮಾಡಿದ ಯಾವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲೇ ಇಲ್ಲ. ಹೀಗಾಗಿ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವ ಇವರಷ್ಟು ಮೂರ್ಖರು ಯಾರೂ ಇಲ್ಲ ಎಂದು ಲೇವಡಿ ಮಾಡಿದರು.