ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀತ, ಕಫ ಹಾಗೂ ಗಂಟಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕುಟುಂಬ ವೈದ್ಯರ ಸಲಹೆ ಮೇರೆಗೆ ಭಾನುವಾರ ಬೆಂಗಳೂರಿನಲ್ಲೇ ಉಳಿದುಕೊಂಡು ಪೂರ್ಣ ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು (ಜು.09): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀತ, ಕಫ ಹಾಗೂ ಗಂಟಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕುಟುಂಬ ವೈದ್ಯರ ಸಲಹೆ ಮೇರೆಗೆ ಭಾನುವಾರ ಬೆಂಗಳೂರಿನಲ್ಲೇ ಉಳಿದುಕೊಂಡು ಪೂರ್ಣ ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಕಫದ ಸಮಸ್ಯೆಯಿದ್ದು ಶುಕ್ರವಾರದ ಬಜೆಟ್ ಭಾಷಣದ ವೇಳೆಯೂ ಕೆಮ್ಮಿನ ಸಮಸ್ಯೆ ಸಿದ್ದರಾಮಯ್ಯ ಅವರನ್ನು ಕಾಡಿತ್ತು. 2.45 ಗಂಟೆಗಳ ಸುದೀರ್ಘ ಸಮಯ ಬಜೆಟ್ ಭಾಷಣ ಓದಿದ ಬಳಿಕ ಶುಕ್ರವಾರ ರಾತ್ರಿ ಮತ್ತಷ್ಟು ಅನಾರೋಗ್ಯ ಹೆಚ್ಚಾಗಿತ್ತು.
ಈ ಹಿನ್ನೆಲೆಯಲ್ಲಿ ಶನಿವಾರ ಅಧಿಕೃತ ನಿವಾಸಕ್ಕೆ ಆಗಮಿಸಿದ ಕುಟುಂಬದ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು. ಹೀಗಾಗಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಗೆ ಬಂದ ಹಲವರಿಗೆ ಭೇಟಿಗೆ ಅವಕಾಶವೇ ನೀಡಲಿಲ್ಲ. ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಗೆ ಆಗಮಿಸಿದರೂ ಅವಕಾಶ ಸಿಗಲಿಲ್ಲ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯೆಲ್, ಡಿಜಿಪಿ ಅಲೋಕ್ ಮೋಹನ್, ಗುಪ್ತಚರ ದಳದ ಶರತ್ ಚಂದ್ರ ಅವರೂ ಸಹ ಭೇಟಿಗೆ ಅವಕಾಶ ಸಿಗದೆ ವಾಪಸಾದರು.
ಹೊರಗುತ್ತಿಗೆಯಲ್ಲೂ ಬಡವರಿಗೆ ಮೀಸಲಾತಿ: ಬೆಂಗಳೂರಿನಲ್ಲಿ ನಡೆದ ಸಂವಾದದಲ್ಲಿ ಸಿಎಂ ಸಿದ್ದು ಹೇಳಿಕೆ
ಇನ್ನು ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಅನಾರೋಗ್ಯದ ನಡುವೆಯೂ ಭಾಗವಹಿಸಿದ್ದರು. ದೇವರಾಜ ಅರಸು ಭವನದಲ್ಲಿ ಪ್ರಬುದ್ಧ ಕರ್ನಾಟಕ -ಜನಮನ ಸಮಾವೇಶದಲ್ಲಿ ಭಾಗವಹಿಸಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಸಂಜೆ ಗಂಟೆಗೆ ಎಚ್‌ಎಸ್‌ಆರ್ ಬಡಾವಣೆಯಲ್ಲಿ ‘ನನ್ನ ಗಿಡ ನನ್ನ ಹೆಮ್ಮೆ’ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಜತೆಗೆ ಮೈಸೂರಿಗೂ ತೆರಳುವುದಿಲ್ಲ. ಬೆಂಗಳೂರಿನಲ್ಲೇ ಇದ್ದು ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ದಿವಾಳಿ ಆಗಲು ಬಿಡಲ್ಲ: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯವಿಲ್ಲ, ಹಾಗೇನಾದರೂ ಜಾರಿಗೊಳಿಸಿದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ನಾವು ಆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಈ ಯೋಜನೆಗಳಿಗೆ ಹೇಗೆ ಮತ್ತು ಎಲ್ಲಿಂದ ಹಣ ಒದಗಿಸುತ್ತೇವೆ ಎಂದು ಬಜೆಟ್‌ನಲ್ಲಿ ವಿವರಿಸಿದ್ದೇವೆ. ಈಗ ರಾಜ್ಯ ದಿವಾಳಿಯಾಗಿದೆಯೇನು? ಹೀಗಂತ ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಟೀಕೆಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಯಾವುದೇ ಕಾರಣಕ್ಕೂ ರಾಜ್ಯ ಆರ್ಥಿಕ ದಿವಾಳಿ ಆಗಲು ಬಿಡುವುದಿಲ್ಲ. ಕೊಟ್ಟಿರುವ ಐದು ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆ. ಅದಕ್ಕೆ ಬೇಕಾದ ಸಂಪನ್ಮೂಲಗಳ ಕ್ರೋಢೀಕರಣಕ್ಕೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
15 ಮಹಿಳೆಯರ ಮದುವೆಯಾಗಿ ವಂಚಿಸಿದ್ದವನ ಬಂಧನ: ವಿಧವೆ, ಮದುವೆ ಆಗದ ಮಧ್ಯ ವಯಸ್ಕರೇ ಈತನ ಟಾರ್ಗೆಟ್
ಶನಿವಾರ ಬೆಂಗಳೂರಿನ ವಸಂತನಗರದಲ್ಲಿರುವ ದೇವರಾಜ ಅರಸು ಭವನದಲ್ಲಿ ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ಆಯೋಜಿಸಿದ್ದ ‘ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶ’ದ ಸಂವಾದದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಗ್ಯಾರಂಟಿಗಳನ್ನು ಜಾರಿಗೊಳಿಸಲು ಯಾವ ಪಕ್ಷಕ್ಕೂ ಸಾಧ್ಯವಾಗುವುದಿಲ್ಲ ಎಂದಿದ್ದರು. ನಾನು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಎಷ್ಟುಹಣ ಆಗುತ್ತದೆ. ಎಲ್ಲಿಂದ ತರುತ್ತೇವೆ ಎಂದು ವಿವರಣೆ ಕೊಟ್ಟಿದ್ದೇನೆ. ಒಟ್ಟು ಐದು ಗ್ಯಾರಂಟಿಗಳನ್ನು ಜಾರಿ ಮಾಡಬೇಕಾದರೆ ವಾರ್ಷಿಕ 52,045 ಕೋಟಿ ರು.ಗಳು ಬೇಕು. ಈ ವರ್ಷ ಉಳಿದ ಅವಧಿಗೆ 35,410 ಕೋಟಿ ರು.ಬೇಕಿದೆ ಎಂದು ವಿವರಿಸಿದರು.
