ಜಲಜೀವನ್ ಮಿಷನ್ ಯೋಜನೆಗೆ ಬಜೆಟ್‌ನಲ್ಲಿ ಕಡಿಮೆ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ಯೋಜನೆಯನ್ನು ಕೊಲ್ಲುತ್ತಿದೆ. ಈ ಅನ್ಯಾಯ ಪ್ರಶ್ನಿಸಬೇಕಾಗಿದ್ದ ಕೇಂದ್ರ ಸಚಿವ ವಿ.ಸೋಮಣ್ಣ ಅವರಂಥ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿ ಹರಡಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಬೆಂಗಳೂರು (ಫೆ.16): ಜಲಜೀವನ್ ಮಿಷನ್ ಯೋಜನೆಗೆ ಬಜೆಟ್‌ನಲ್ಲಿ ಕಡಿಮೆ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ಯೋಜನೆಯನ್ನು ಕೊಲ್ಲುತ್ತಿದೆ. ಈ ಅನ್ಯಾಯ ಪ್ರಶ್ನಿಸಬೇಕಾಗಿದ್ದ ಕೇಂದ್ರ ಸಚಿವ ವಿ.ಸೋಮಣ್ಣ ಅವರಂಥ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿ ಹರಡಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಟೀಕಿಸಿರುವ ಅವರು, ಬಜೆಟ್‌ನಲ್ಲಿ ಉದ್ದೇಶಪೂರ್ವಕವಾಗಿ ಕಡಿಮೆ ಅನುದಾನ ನೀಡುವ ಮೂಲಕ ಯೋಜನೆ ಉದ್ದೇಶ ಹಾಳು ಮಾಡಲು ಯತ್ನಿಸಲಾಗಿದೆ. ಯೋಜನೆಗೆ ಈವರೆಗೆ ನಿಗದಿಯಾಗಿದ್ದ ಕೇಂದ್ರದ ಪಾಲು 26,119 ಕೋಟಿಗಳಲ್ಲಿ 11,760 ಕೋಟಿ ಅಂದರೆ ಶೇ.45ರಷ್ಟು 00 ಮಾತ್ರ ಬಿಡುಗಡೆ ಮಾಡಲಾಗಿದೆ. ರಾಜ್ಯದ ಪಾಲು 23,142 ಕೋಟಿಯಲ್ಲಿ 20,442 ಕೋಟಿ ಅಂದರೆ ಶೇ.88 ರಷ್ಟು ಬಿಡುಗಡೆ ಮಾಡಲಾಗಿದೆ. ಇದೀಗ ಬಜೆಟ್‌ನಲ್ಲೂ ಕಡಿಮೆ ಹಣ ನೀಡುವ ಮೂಲಕ ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ.

ಪತ್ರ ಬರೆದರೂ ಪ್ರಯೋಜನ ಇಲ್ಲ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಪ್ರತಿಯೊಂದು ರುಪಾಯಿಯನ್ನು ರಾಜ್ಯ ಸರ್ಕಾರ ಉದ್ದೇಶಿತ ಯೋಜನೆಗೆ ಯಶಸ್ವಿಯಾಗಿ ಬಳಸಿದೆ. 2024-25ರಲ್ಲಿ ಕೇಂದ್ರವು ಜೆಜೆಎಂ ಯೋಜನೆಗೆ 3,804 ಕೋಟಿ ರು. ಮಾತ್ರ ಹಂಚಿಕೆ ಮಾಡಿದ್ದು, ಇದರಲ್ಲಿ 570 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಈ ಬಗ್ಗೆ ಹಲವು ಬಾರಿ ಪತ್ರ ಬರೆದರೂ ಗಮನ ನೀಡಿಲ್ಲ. 

ಸಿಎಂ ಸಿದ್ದರಾಮಯ್ಯ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ: ಆರ್‌.ಅಶೋಕ್ ಆಕ್ರೋಶ

ಇನ್ನು ಕೇಂದ್ರ ಸರ್ಕಾರ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ. ಸೋಮಣ್ಣ ಅವರು ಜನರನ್ನು ಹಾದಿ ತಪ್ಪಿಸುವ ಬದಲು 2024-25 ಸಾಲಿನ ಬಜೆಟ್‌ನಲ್ಲಿ ಈ ಯೋಜನೆಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.