Asianet Suvarna News Asianet Suvarna News

ಕೇಂದ್ರದಲ್ಲಿ ಕಾಂಗ್ರೆಸ್‌ ಗೆದ್ದ ಮರುದಿನವೇ ಮೇಕೆದಾಟಿಗೆ ಅಸ್ತು: ಸಿಎಂ ಸಿದ್ದರಾಮಯ್ಯ

ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಟುಕೊಂಡು ಜನರ ಬಳಿ ಮತಯಾಚಿಸುತ್ತಿದ್ದಾರೆ. ಬೆಂಗಳೂರು ನಗರದ ನೀರಿನ ಸಮಸ್ಯೆಗೆ ಪರಿಹಾರವಾಗಬಹುದಾದ ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸರ್ಕಾರದಲ್ಲಿ ಮಾತನಾಡದೇ ಮೋಸ ಮಾಡಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ 

CM Siddaramaiah Talks Over Mekedatu Project grg
Author
First Published Apr 9, 2024, 5:57 AM IST

ಬೆಂಗಳೂರು(ಏ.09):  ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮರುದಿನವೇ ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ನೋಡಿಕೊಳ್ಳುತ್ತೇವೆ. ಅದಕ್ಕಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರನ್ನು ಗೆಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ರೋಡ್‌ ಶೋ ಮೂಲಕ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಟುಕೊಂಡು ಜನರ ಬಳಿ ಮತಯಾಚಿಸುತ್ತಿದ್ದಾರೆ. ಬೆಂಗಳೂರು ನಗರದ ನೀರಿನ ಸಮಸ್ಯೆಗೆ ಪರಿಹಾರವಾಗಬಹುದಾದ ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸರ್ಕಾರದಲ್ಲಿ ಮಾತನಾಡದೇ ಮೋಸ ಮಾಡಿದ್ದಾರೆ.
ಮೇಕೆದಾಟು ಯೋಜನೆ ಜಾರಿಯಾಗಬೇಕೆಂದರೆ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಅಧಿಕಕ್ಕ್ಕೆ ಬಂದ ಮರುದಿನವೇ ಯೋಜನೆಗೆ ಒಪ್ಪಿಗೆ ನೀಡಲಾಗುವುದು. ಅದಕ್ಕಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರನ್ನು ಗೆಲ್ಲಿಸುವ ಅಗತ್ಯವಿದೆ. ಮತದಾರರು ಈ ಬಾರಿ ಸೌಮ್ಯಾರೆಡ್ಡಿ ಅವರ ಪರವಾಗಿ ನಿಲ್ಲಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಚುನಾವಣೆಯಲ್ಲಿ ರಮೇಶ್‌ ಕುಮಾರ್‌ ಪ್ರಚಾರ ಮಾಡುತ್ತಾರೆ: ಡಿ.ಕೆ. ಶಿವಕುಮಾರ್‌

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ ಪಾದಯಾತ್ರೆ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅನುಮತಿ ನೀಡಲಿಲ್ಲ. ಆ ಬಗ್ಗೆ ತೇಜಸ್ವಿ ಸೂರ್ಯ ಮಾಡತನಾಡಲಿಲ್ಲ. ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗೆ ಕಾವೇರಿ ಸಂಪರ್ಕ ಆಗಬೇಕಿದೆ. ಈವರೆಗೆ ಶೇ. 60ರಷ್ಟು ಮನೆಗಳಿಗೆ ಮಾತ್ರ ಕಾವೇರಿ ನೀರಿನ ಸಂಪರ್ಕ ಸಿಕ್ಕಿದ್ದು, ಮೇಕೆದಾಟು ಯೋಜನೆ ಜಾರಿಯಾದರೆ ಎಲ್ಲ ಮನೆಗಳಿಗೂ ಸಮರ್ಪಕವಾಗಿ ಕಾವೇರಿ ನೀರು ಪೂರೈಸಬಹುದು ಎಂದು ಹೇಳಿದರು.
ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ ಸೌಮ್ಯಾರೆಡ್ಡಿ ಅವರಿಗೆ ಅನ್ಯಾಯವಾಗಿದೆ. ನ್ಯಾಯಾಲಯದಲ್ಲಿ ಅವರಿಗೆ ನ್ಯಾಯ ಸಿಗುತ್ತದೆ. ಅದಕ್ಕೂ ಮುನ್ನ ಲೋಕಸಭಾ ಚುನಾವಣೆಯಲ್ಲಿ ಜನತಾ ನ್ಯಾಯಾಲಯವು ಸೌಮ್ಯಾ ರೆಡ್ಡಿ ಅವರಿಗೆ ನ್ಯಾಯ ಕೊಡಬೇಕು ಎಂದರು.

ಬಿಸಿಲ ನಡುವೆ ಬಿರುಸಿನ ಪ್ರಚಾರ:

ಬಿರುಬಿಸಿಲಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ದಿನ ರೋಡ್‌ ಶೋ ನಡೆಸಿ ಸೌಮ್ಯಾ ರೆಡ್ಡಿ ಪರವಾಗಿ ಮತಯಾಚಿಸಿದರು. ಜಯನಗರ, ಚಿಕ್ಕಪೇಟೆ, ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಮತ ಯಾಚನೆ ಮಾಡಿದ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹೋದಲ್ಲೆಲ್ಲ ಜನರು ಹೂವಿನ ಮಳೆ ಸುರಿಸಿ ಸ್ವಾಗತಿಸಿದರು. ಒಂದು ಹಂತದಲ್ಲಿ ಬಿಸಿಲಿನ ಝಳ ತಾಳಲಾರದ ಸಿದ್ದರಾಮಯ್ಯ ಛತ್ರಿಯ ನೆರಳಿನಲ್ಲಿ ಪ್ರಚಾರ ನಡೆಸಿದರು.

Follow Us:
Download App:
  • android
  • ios