ಫ್ರೀ ಬಸ್ ಯೋಜನೆ ಉದ್ದೇಶ ಈಡೇರಿದೆ: ಸಿಎಂ ಸಿದ್ದರಾಮಯ್ಯ ಸಂತಸ
ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 41 ಕೋಟಿ ದಾಟಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕ ಸ್ವಾಲಂಬಿಗಳನ್ನಾಗಿಸಲು ಜಾರಿಗೆ ತರಲಾಗಿರುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಆಮೂಲಕ ನಮ್ಮ ಉದ್ದೇಶ ಈಡೇರಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು (ಆ.18): ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 41 ಕೋಟಿ ದಾಟಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕ ಸ್ವಾಲಂಬಿಗಳನ್ನಾಗಿಸಲು ಜಾರಿಗೆ ತರಲಾಗಿರುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಆಮೂಲಕ ನಮ್ಮ ಉದ್ದೇಶ ಈಡೇರಿದೆ ಎಂದು ತಿಳಿಸಿದ್ದಾರೆ. ಜೂನ್ 11ರಂದು ಆರಂಭವಾದ ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೆ ಪ್ರತಿನಿತ್ಯ ಸರಾಸರಿ 60 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದರು. ಅದರಂತೆ ಆಗಸ್ಟ್ 17ರವರೆಗೆ 41.33 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ.
ಶಕ್ತಿ ಯೋಜನೆಯ ಈ ಯಶಸ್ಸಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನೀರ್ವಹಣೆಯ ಉದ್ದೇಶಗಳಿಗಾಗಿ ನಾಡಿನ ಕೋಟ್ಯಂತರ ಮಹಿಳೆಯರು ಸಂಚರಿಸುತ್ತಿದ್ದಾರೆ. ಹೀಗೆ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ಶಕ್ತಿ ಯೋಜನೆ ಜಾರಿಗೆ ತಂದಿದ್ದೆವು. ಯೋಜನೆ ಜಾರಿಯಾದ ನಂತರದಿಂದ ಈವರೆಗೆ 40 ಕೋಟಿಗೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರಿದೆ. ಅದು ಸಂತಸವನ್ನುಂಟು ಮಾಡಿದೆ ಎಂದಿದ್ದಾರೆ.
ಬಿಜೆಪಿಗರು ಕಾಂಗ್ರೆಸ್‌ಗೆ ಹೋಗಲ್ಲ, ನಾಳೆ ಏನಾಗುತ್ತೋ ಗೊತ್ತಿಲ್ಲ: ಪ್ರಲ್ಹಾದ್ ಜೋಶಿ
ಶಕ್ತಿ ಯೋಜನೆ ನಿಲ್ಲಲ್ಲ, ನಾನೇ ಗ್ಯಾರಂಟಿ: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಸುಳ್ಳು ಸುದ್ದಿಗಳನ್ನು ನಂಬದಂತೆ ಜನರಿಗೆ ಕೋರಿದ್ದಾರೆ. ಶಕ್ತಿ ಯೋಜನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಕುರಿತಂತೆ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮೊದಲಿಗೆ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಆ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂತಹ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿಗೆ ಶ್ರಮಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂದು ಒಂದು ರಾಜಕೀಯ ಪಕ್ಷ ಸುಳ್ಳು ಹರಡುತ್ತಿದೆ. ಯೋಜನೆಯ ಯಶಸ್ಸನ್ನು ಸಹಿಸಿಕೊಳ್ಳಲಾಗದ ಪ್ರತಿಪಕ್ಷದವರು ಈ ರೀತಿ ಮಾಡುತ್ತಿದ್ದಾರೆ. ಈ ಐದು ವರ್ಷ ಮಾತ್ರವಲ್ಲ ಇನ್ನೂ ಹತ್ತು ವರ್ಷ ಶಕ್ತಿ ಯೋಜನೆ ಮುಂದುವರೆಯಲಿದೆ ಎಂದು ಹೇಳಿದರು. ಯೋಜನೆಯ ಲಾಭ ಪಡೆಯಲು ಸದ್ಯಕ್ಕೆ ಯಾರೂ ಪಾಸ್ ಪಡೆಯುವ ಅಗತ್ಯವೂ ಇಲ್ಲ. ಮುಂದೆಯೂ (2028) ನಾವೇ ಅಧಿಕಾರಕ್ಕೆ ಬರುತ್ತೇವೆ. ಹೀಗಾಗಿ ಮುಂದಿನ 10 ವರ್ಷ ಮಹಿಳೆಯರು ರಾಜ್ಯಾದ್ಯಂತ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇದರಲ್ಲಿ ಯಾವುದೇ ಗೊಂದಲಗಳು ಬೇಕಿಲ್ಲ ಎಂದು ಸ್ಪಷ್ಪಪಡಿಸಿದರು.