ಡಿನ್ನರ್ ಪಾಲಿಟಿಕ್ಸ್ ನೆಪದಲ್ಲಿ ಆಪ್ತರ ಜತೆ ಸಿಎಂ ಮಾತುಕತೆ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ನಡೆ..!
ಊಟದ ನೆಪದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸಿಎಂ ಮಾತುಕತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಚೆಲುವರಾಯಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ಸಿಎಂ ಹಾಗೂ ಚೆಲುವರಾಯಸ್ವಾಮಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು(ಸೆ.15): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಪಾಲಿಟಿಕ್ಸ್‌ಅನ್ನು ಮುಂದುವರಿಸಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯ ಸದ್ದಿಲ್ಲದೆ ಆಪ್ತರ ಜೊತೆಗೆ ರಹಸ್ಯವಾಗಿ ಮಾತುಕತೆ ನಡೆಸುತ್ತಿದ್ದಾರೆ. ನೈಟ್ ಡಿನ್ನರ್ ನೆಪದಲ್ಲಿ ಆಪ್ತರ ಜೊತೆಗೆ ಸಿಎಂ ಒನ್ ಟು ಒನ್ ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಮನೆಮ ನಿನ್ನೆ ರಾತ್ರಿ ಚಲುವರಾಯಸ್ವಾಮಿ ಅವರ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಇತ್ತಿಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಬಿ.ಕೆ. ಹರಿಪ್ರಸಾದ್‌ಗೆ ನೋಟಿಸ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್
ಊಟದ ನೆಪದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸಿಎಂ ಮಾತುಕತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಚೆಲುವರಾಯಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ಸಿಎಂ ಹಾಗೂ ಚೆಲುವರಾಯಸ್ವಾಮಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.
ಬಿ.ಕೆ ಹರಿಪ್ರಸಾದ್ ಅಸಮಾಧಾನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಜೊತೆ ಮಾತುಕತೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. ಬಿ.ಕೆ. ಹರಿಪ್ರಸಾದ್‌ಗೆ ಟಕ್ಕರ್ ನೀಡಲು ಮಾಸ್ಟರ್ ಪ್ಲ್ಯಾನ್ ನಡೆದಿದೆಯಾ..? ಎಂದು ಅನುಮಾನಗಳು ಮೂಡಿವೆ.