ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಹೈಕಮಾಂಡ್ ನಾಯಕರೊಂದಿಗೆ ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಬಗ್ಗೆಯೂ ಮಾತುಕತೆ ನಡೆಸುವ ಸಾಧ್ಯತೆಯಿದೆ.

ಬೆಂಗಳೂರು: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಸಚಿವರ ಭೇಟಿ?

ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ತೆರಳಲಿರುವ ಸಿದ್ದರಾಮಯ್ಯ ಅವರು ಮೊದಲಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಇಂದಿರಾಭವನದಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಇದೇ ವೇಳೆ ಅವಕಾಶ ದೊರೆತರೆ ಹೈಕಮಾಂಡ್‌ ನಾಯಕರನ್ನೂ ಪ್ರತ್ಯೇಕವಾಗಿ ಭೇಟಿ ಮಾಡಲಿದ್ದು, ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ವಿಚಾರಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ನಿಗದಿತ ಕಾರ್ಯಕ್ರಮಗಳು ಮುಗಿದ ಬಳಿಕ ಶುಕ್ರವಾರ ಸಂಜೆಯೇ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.